Home ಬೆಂಗಳೂರು ನಗರ ಕರ್ನಾಟಕ ವಿವಿಧ ವಸತಿ ಯೋಜನೆಗಳಡಿ 2 ವರ್ಷಗಳಲ್ಲಿ 9 ಲಕ್ಷ ಮನೆಗಳನ್ನು ನಿರ್ಮಿಸಲಿದೆ: ಮುಖ್ಯಮಂತ್ರಿ

ಕರ್ನಾಟಕ ವಿವಿಧ ವಸತಿ ಯೋಜನೆಗಳಡಿ 2 ವರ್ಷಗಳಲ್ಲಿ 9 ಲಕ್ಷ ಮನೆಗಳನ್ನು ನಿರ್ಮಿಸಲಿದೆ: ಮುಖ್ಯಮಂತ್ರಿ

71
0
Karnataka to construct 9 lakh houses in 2 years under different housing projects

ಬೆಂಗಳೂರು:

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ವಸತಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಸಭೆಯಲ್ಲಿ ವಿವಿಧ ವಸತಿ ಯೋಜನೆಗಳಡಿ ಮುಂದಿನ ಎರಡು ವರ್ಷಗಳಲ್ಲಿ 9 ಲಕ್ಷ ಮನೆ ನಿರ್ಮಿಸಲು ನಿರ್ಧರಿಸಲಾಗಿದೆ. ಇವುಗಳಲ್ಲಿ ರಾಜ್ಯದ ವಸತಿ ಯೋಜನೆಗಳಡಿ ನಿರ್ಮಿಸುವ 5 ಲಕ್ಷ ಮನೆ ಮತ್ತು ಕೇಂದ್ರ ಸರ್ಕಾರದ ಯೋಜನೆಗಳಡಿ 4 ಲಕ್ಷ ಮನೆ ಸೇರಿವೆ.ಮನೆ ನಿರ್ಮಿಸಲು ಪರಿಶಿಷ್ಟ ಫಲಾನುಭವಿಗಳಿಗೆ 1.75 ಲಕ್ಷ ಮತ್ತು ಇತರರಿಗೆ 1.20 ಲಕ್ಷ ರೂ. ಸಹಾಯಧನ ದೊರೆಯುತ್ತದೆ.

Karnataka to construct 9 lakh houses in 2 years under different housing projects

ಕೇಂದ್ರದ ವಸತಿ ಯೋಜನೆಗಳಡಿ ಮಂಜೂರಾಗಿರುವ ಮನೆಗಳಿಗೆ ಫಲಾನುಭವಿಗಳಿಗೆ ಶೇ.60 ಅಂದರೆ 72,000 ಮತ್ತು ರಾಜ್ಯದ ಪಾಲು ಶೇ.40 ಅಂದರೆ 48,000 ರೂ. ಸಹಾಯಧನ ಲಭ್ಯವಿದೆ.ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತಲಾ 100 ಮನೆಗಳನ್ನು ಹಂಚಿಕೆ ಮಾಡಲಾಗುವುದು. ಪ್ರಸ್ತುತ ನಿರ್ಮಾಣದ ವಿವಿಧ ಹಂತಗಳಲ್ಲಿರುವ ರಾಜ್ಯ ಸರ್ಕಾರದ ಬಸವ ವಸತಿ ಯೋಜನೆ, ಡಾ: ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆ, ದೇವರಾಜು ಅರಸು ವಸತಿ ಯೋಜನೆ ಹಾಗೂ ವಾಜಪೇಯಿ ನಗರ ವಸತಿ ಯೋಜನೆಗಳಡಿ ಮನೆಗಳನ್ನು ಪೂರ್ಣ ಮಾಡಲು 6,200 ಕೋಟಿ ರೂ.ಗಳ ಅಗತ್ಯವಿದೆ. ಹಂತ ಹಂತವಾಗಿ ಈ ಮೊತ್ತವನ್ನು ಬಿಡುಗಡೆ ಮಾಡಲಾಗುವುದೆಂದು ಮುಖ್ಯಮಂತ್ರಿಗಳು ಹೇಳಿದರು.

ಮುಖ್ಯಮಂತ್ರಿಗಳ 1 ಲಕ್ಷ ಬೆಂಗಳೂರು ಬಹು ಮಹಡಿ ಯೋಜನೆಯಡಿ ಆಗಸ್ಟ್ 15 ರಂದು ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ 5 ಸಾವಿರ ಮನೆಗಳ ಹಂಚಿಕೆ ಮಾಡಲು ನಿರ್ಧರಿಸಲಾಗಿದೆ ಎಂದರು.

LEAVE A REPLY

Please enter your comment!
Please enter your name here