Karnataka to Form separate cell to acquire government land: Minister Krishna Byregowda
ಬೆಳಗಾವಿ:
ಖಾಸಗಿಯವರಿಂದ ಒತ್ತುವರಿಯಾಗಿರುವ ಸರಕಾರಿ ಭೂಮಿಗಳನ್ನು ತೆರವುಗೊಳಿಸಿ ಮತ್ತೆ ಸರ್ಕಾರದ ಸುಪರ್ದಿಗೆ ಪಡೆಯಲು ಪ್ರತ್ಯೇಕ ಕೋಶ ರಚಿಸುವ ಚಿಂತನೆ ಇದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ (Krishna Byregowda) ತಿಳಿಸಿದ್ದಾರೆ.
ಬುಧವಾರ ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಒತ್ತುವರಿ ಕುರಿತಂತೆ ಕಾಂಗ್ರೆಸ್ ಸದಸ್ಯ ಯು.ಬಿ.ವೆಂಕಟೇಶ್ (UB Venkatesh) ಪ್ರಶ್ನೆಗೆ ಉತ್ತರಿಸಿದ ಅವರು, ಒತ್ತುವರಿಯಾಗಿರುವ ಭೂ ತೆರವಿನ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.
ಕಳೆದ ಆರು ತಿಂಗಳಲ್ಲಿ ನೂರಾರು ಕೋಟಿ ಮೌಲ್ಯದ ಸರ್ಕಾರ ಭೂ ಒತ್ತುವರಿಯನ್ನು ತೆರವು ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಒತ್ತುವರಿ ತೆರವಿಗೆ ಪ್ರತ್ಯೇಕ ಕೋಶ ರಚಿಸಲಾಗುವುದು, ಅಲ್ಲದೆ, ಸರಕಾರಿ ಆಸ್ತಿಗಳನ್ನು ರಕ್ಷಿಸಲಾಗುವುದು ಎಂದರು.
