Home ಬೆಂಗಳೂರು ನಗರ ದೇವಸ್ಥಾನಗಳ ಸಚ್ಚತೆಗೆ ಆದ್ಯತೆ: ಯಾತ್ರಿ ನಿವಾಸ ನಿರ್ಮಾಣಕ್ಕೆ ಕ್ರಮ: ಸಚಿವೆ ಶಶಿಕಲಾ ಜೊಲ್ಲೆ

ದೇವಸ್ಥಾನಗಳ ಸಚ್ಚತೆಗೆ ಆದ್ಯತೆ: ಯಾತ್ರಿ ನಿವಾಸ ನಿರ್ಮಾಣಕ್ಕೆ ಕ್ರಮ: ಸಚಿವೆ ಶಶಿಕಲಾ ಜೊಲ್ಲೆ

77
0

ಬೆಂಗಳೂರು:

ರಾಜ್ಯದಲ್ಲಿರುವ ದೇವಸ್ಥಾನಗಳು, ಹೊರ ರಾಜ್ಯದಲ್ಲಿರುವ ದೇವಸ್ಥಾನಗಳ ಸ್ವಚತ್ತೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ದೇವಸ್ಥಾನಗಳ ಆಸ್ತಿ ಸಮೀಕ್ಷೆ ಹಾಗೂ ಯಾತ್ರಿ ನಿವಾಸಗಳ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಎಂದು ಮುಜರಾಯಿ, ವಕ್ಫ್ ಮತ್ತು ಹಜ್ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

ರಾಜ್ಯದಲ್ಲಿ 34563 ಮುಜರಾಯಿ ದೇವಸ್ಥಾನಗಳಿವೆ. 25 ಲಕ್ಷ ವರಮಾನ ಮೀರಿದ ದೇವಸ್ಥಾನಗಳನ್ನು ಎ ಕೆಟಗೆರಿ, 5 ಲಕ್ಷ ಮೇಲ್ಪಟ್ಟು ವರಮಾನ ಇರುವ ದೇವಸ್ಥಾನಗಳನ್ನು ಬಿ ಹಾಗೂ 5 ಲಕ್ಷ ಕ್ಕಿಂತ ಕಡಿಮೆ ವರಮಾನ.ಇರುವ ದೇವಸ್ಥಾನಗಳನ್ನು ಸಿ ಕೆಟಗೆರಿಯಲ್ಲಿ ವಿಂಗಡಿಸಲಾಗಿದೆ.
ಇದಲ್ಲದೇ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ರಚನೆ ಮಾಡಿ 25. ಕೋಟಿ ಮೀಸಲಿಸಲಾಗಿದೆ ಎಂದು ಹೇಳಿದರು.

Karnataka to initiate Building Pilgrim Residence Minister Shashikala Jolle1

ನಮ್ಮ ರಾಜ್ಯದ ದೇವಸ್ಥಾನಗಳಲ್ಲಿ ಸ್ವಚ್ಛತೆ ಮತ್ತು ಮೂಲಭೂತ ಸೌಲಭ್ಯ ಒದಗಿಸುವ ಕೆಲಸ ಮಾಡಲಾಗುವುದು. ರಾಜ್ಯದ ಯಾವ ದೇವಸ್ಥಾನಗಳಲ್ಲಿ ಯಾತ್ರಿ ನಿವಾಸ ನಿರ್ಮಾಣಕ್ಕೆ ಅವಕಾಶ ಇದೆ ಎನ್ನುವುದನ್ನು ವರದಿ ನೀಡಲಿ ಸೂಚಿಸಿದ್ದೇನೆ. ಪಕ್ಕದ ರಾಜ್ಯಗಳಾದ ಆಂಧ್ರ ಪ್ರದೇಶದ ಶ್ರೀಶೈಲಂ, ತಿರುಪತಿ, ಮರಾಹಾಷ್ಟ್ರದ ಫಂಡರಪುರ, ತುಳಜಾಭವಾನಿ, ಗುಡ್ಡಾಪುರ ದಾನಮ್ಮ ದೇವಸ್ಥಾನಗಳಲ್ಲಿ ಯಾತ್ರಿ ನಿವಾಸ ನಿರ್ಮಾಣ ಮಾಡಲು ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಅಲ್ಲದೇ ಮುಜರಾಯಿ ಇಲಾಖೆಯ ದೇವಸ್ಥಾನಗಳ ಆಸ್ತಿ ಸಮೀಕ್ಷೆ ನಡೆಸಲು ಸೂಚಿಸಿದ್ದೇನೆ ಎಂದು ತಿಳಿಸಿದರು.

ಹಿಂದಿನ ಮುಜರಾಯಿ ಸಚಿವರು ಸಪ್ತಪದಿ ಯೋಜನೆ ಜಾರಿಗೆ ತಂದಿದ್ದಾರೆ. ಅದನ್ನು ಮುಂದುವರೆಸಲು ತೀರ್ಮಾನಿಸಲಾಗಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ಇದರ ಪ್ರಚಾರ ಕಡಿಮೆ ಇದೆ. ಹೆಚ್ಚಿನ ಪ್ರಚಾರ ಮಾಡಿ ಸಪ್ತಪದಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.
ಇನ್ನು ಮುಜರಾಯಿ ಇಕಾಖೆಯಲ್ಲಿಯೂ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

LEAVE A REPLY

Please enter your comment!
Please enter your name here