ಬೆಂಗಳೂರು:
ಕೋವಿಡ್ ನ ಎಲ್ಲಾ ಮಾರ್ಗಸೂಚಿಗಳನ್ನ ಪಾಲನೆ ಮಾಡಿ ಶೇ.2ಕ್ಕಿಂತ ಕಡಿಮೆ ಪಾಸಿಟಿವಿಟಿ ದರವಿರುವ ತಾಲ್ಲೂಕುಗಳಲ್ಲಿ ಸೆಪ್ಟೆಂಬರ್ 6 ರಿಂದ 6, 7 ಮತ್ತು 8ನೇ ತರಗತಿ ಆರಂಭಿಸಲು ಸರ್ಕಾರ ಅನುಮತಿ ನೀಡಿದೆ ಎಂದು ಕಂದಾಯ ಸಚಿವ ಆರ್ ಅಶೋಕ ತಿಳಿಸಿದರು.
ಸಭೆಯಲ್ಲಿ ಸಚಿವರಾದ ಡಾ. ಕೆ. ಸುಧಾಕರ್, ಶ್ರೀ ಎಸ್ ಟಿ ಸೋಮಶೇಖರ, ಶ್ರೀ ಬಿ ಸಿ ನಾಗೇಶ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶ್ರೀ ರವಿಕುಮಾರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಶ್ರೀ ಪ್ರವೀಣ್ ಸೂದ್, ತಜ್ಞ ವೈದರಾದ ಡಾ. ಸುದರ್ಶನ್, ಡಾ. ಸಿ ಎನ್ ಮಂಜುನಾಥ, ಡಾ. ದೇವಿಶೆಟ್ಟಿ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು. (2/2) pic.twitter.com/jcalayXPpu
— R. Ashoka (ಆರ್. ಅಶೋಕ) (@RAshokaBJP) August 30, 2021
ಇಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಕೋವಿಡ್ ಸ್ಥಿತಿಗತಿಗಳ ಕುರಿತು ನಡೆದ ಉನ್ನತ ಮಟ್ಟದ ಸಭೆಯ ನಂತರ ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಚಿವ ಅಶೋಕ ಅವರು “ಈಗಾಗಲೇ 9 ರಿಂದ 12ನೇ ತರಗತಿಗಳನ್ನ ಆರಂಭಿಸಲಾಗಿದೆ. ಅದಕ್ಕೆ ಬಹುತೇಕ ಉತ್ತಮ ಪ್ರತಿಕ್ರಿಯೆ ಲಭ್ಯವಾಗಿರುವ ಹಿನ್ನೆಲೆಯಲ್ಲಿ ಸರ್ಕಾರ 6 ರಿಂದ 8ನೇ ತರಗತಿಗಳನ್ನು ಆರಂಭಿಸಲು ಅನುಮತಿ ನೀಡಿದೆ. ವಾರದಲ್ಲಿ ಐದು ದಿನಗಳು ಅರ್ಧ ದಿನ ಮಾತ್ರ ಶಾಲೆ ನಡೆಸಲಾಗುವುದು. ಹಾಜರಾತಿ ಕಡ್ಡಾಯವಾಗಿ ಶೇ.50ರಷ್ಟಿರಬೇಕು” ಎಂದು ತಿಳಿಸಿದರು.
Read Here: Karnataka announces resumption of classes 6 to 8 from September 6