Home ಕರ್ನಾಟಕ ಬೆಂಗಳೂರು ನಗರ ಸೇರಿ 19 ಜಿಲ್ಲೆಗಳಲ್ಲಿ ಲಾಕ್‌ಡೌನ್ ಸಡಿಲ: ಯಡಿಯೂರಪ್ಪ

ಬೆಂಗಳೂರು ನಗರ ಸೇರಿ 19 ಜಿಲ್ಲೆಗಳಲ್ಲಿ ಲಾಕ್‌ಡೌನ್ ಸಡಿಲ: ಯಡಿಯೂರಪ್ಪ

327
0

ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಮಂಡ್ಯ ಬೆಳಗಾವಿ ಹಾಗೂ ಕೊಡಗು ಜಿಲ್ಲೆಗಳಲ್ಲಿ ಮುಂದುವರಿಯಲಿದೆ ಲಾಕ್ ಡೌನ್

ಬೆಂಗಳೂರು:

ಮಹತ್ವದ ಬೆಳವಣಿಗೆಯೊಂದರಲ್ಲಿ ಬೆಂಗಳೂರು ನಗರ ಸೇರಿ 19 ಜಿಲ್ಲೆಗಳಲ್ಲಿ ಲಾಕ್‌ಡೌನ್ ಸಡಲಿಕೆ ಮಾಡಲಾಗಿದೆಯೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ.

ಪಾಸಿಟಿವಿಟಿ ರೇಟ್ ಹೆಚ್ಚಿರುವ ರಾಜ್ಯದ 11 ಜಿಲ್ಲೆಗಳಲ್ಲಿ ಲಾಕ್‌ಡೌನ್ ಮುಂದುವರಿಯಲಿದ್ದು — ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಮಂಡ್ಯ ಬೆಳಗಾವಿ ಹಾಗೂ ಕೊಡಗು ಜಿಲ್ಲೆಗಳಲ್ಲಿ ಈಗಿರುವ ಲಾಕ್ ಡೌನ್ ಮುಂದುವರಿಯಲಿದೆ.

ಸಚಿವ ಸಂಪುಟದ ಸಹೋದ್ಯೋಗಿಗಳೊಂದಿಗೆ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಎಲ್ಲ ಕಾರ್ಖಾನೆಗಳಲ್ಲಿ ಶೇ. 50, ಗಾರ್ಮೆಂಟ್‌ನಲ್ಲಿ ಶೇ.30ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿ ನೀಡಲಾಗಿದೆ.

ಅಗತ್ಯ ವಸ್ತು ಖರೀದಿಗೆ ಮಧ್ಯಾಹ್ನ 2ರವರೆಗೆ ಅವಕಾಶ ನೀಡಲಾಗಿದೆ. ನಿರ್ಮಾಣ ಚಟುವಟಿಕೆ ಮತ್ತು ಅದಕ್ಕೆ ಸಂಬಂಧಿಸಿದ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗಿದೆ.

ಪಾರ್ಕ್‌ಗಳಲ್ಲಿ 10ಗಂಟೆವರೆಗೆ ವಾಕಿಂಗ್ ನಡೆಸಲು ಅನುಮತಿ ನೀಡಲಾಗಿದೆ. ಬೀದಿ ಬದಿ ವ್ಯಾಪಾರಿಗಳು ಮಧ್ಯಾಹ್ನ 2ರವರೆಗೆ ವ್ಯಾಪಾರ ನಡೆಸಲು ಅನುಮತಿ ನೀಡಲಾಗಿದೆ.

ಆಟೋ ಮತ್ತು ಟ್ಯಾಕ್ಸಿಗಳಲ್ಲಿ ಇಬ್ಬರು ಪ್ರಯಾಣಿಕರು ಸಂಚರಿಸಲು ಅವಕಾಶ ಕೊಡಲಾಗಿದೆ.

ಇದೇ 14ರ ಸೋಮವಾರ ಬೆಳಿಗ್ಗೆಯಿಂದಲೇ 21ರ ಬೆಳಿಗ್ಗೆಯವರೆಗೆ ಹೊಸ ನಿಯಮ ಅನ್ವಯವಾಗಲಿದೆ.

ಪ್ರತಿದಿನ ಸಂಜೆ 7ಗಂಟೆಯಿಂದ ಬೆಳಗ್ಗೆ 5ಗಂಟೆವರೆಗೆ ನೈಟ್ ಕರ್ಫ್ಯೂ ಮತ್ತು ಶುಕ್ರವಾರ ಸಂಜೆ 7ರಿಂದ ಸೋಮವಾರ ಬೆಳಗ್ಗೆ 5ರವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದೆ. ಜೂನ್ 14ರಿಂದ ಈ ನಿಯಮ ಜಾರಿಗೆ ಬರಲಿದೆ.

• ಎಲ್ಲಾ ಕಾರ್ಖಾನೆಗಳನ್ನು ಶೇ. 50 ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿಸಿದೆ. ಆದರೆ, ಗಾರ್ಮೆಂಟ್ ಇಂಡಸ್ಟ್ರೀಗಳು ಶೇ. 30 ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿಸಿದೆ.
• ಎಲ್ಲಾ ಅಗತ್ಯ ಅಂಗಡಿಗಳನ್ನು ಈಗಿರುವ ಸಮಯ ಬೆಳಿಗ್ಗೆ 6 ರಿಂದ 10 ಗಂಟೆಯನ್ನು ವಿಸ್ತರಿಸಿ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ನೀಡಲಾಗಿದೆ.
• ಎಲ್ಲಾ ನಿರ್ಮಾಣ ಚಟುವಟಿಕೆಗಳನ್ನು ಪ್ರಾರಂಭಿಸಲು ಅನುಮತಿಸಲಾಗಿದೆ. ಹಾಗೂ ನಿಮಾಣ ಚಟುವಟಿಕೆ ಸಂಬAದಿಸಿದ ಅಂಗಡಿಗಳನ್ನು ವಿಶೇಷವಾಗಿ ಸಿಮೆಂಟ್ ಹಾಗೂ ಸ್ಟೀಲ್ ತೆರೆಯಲು ಅವಕಾಶ ನಿಡಲಾಗಿದೆ.
• ಪಾರ್ಕ್ಗಳನ್ನು ಬೆಳಿಗ್ಗೆ 5 ರಿಂದ 10 ಗಂಟೆಯವರೆಗೆ ಅವಕಾಶ ನೀಡಲಾಗಿದೆ.
• ಬೀದಿ ಬದಿ ವ್ಯಾಪಾರಿಗಳು ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವ್ಯಾಪಾರ ಮಾಡಲು ಅವಕಾಶ ನೀಡಲಾಗಿದೆ.
• ಆಟೋ ಮತ್ತು ಟ್ಯಾಕ್ಸಿಗಳಲ್ಲಿ ಇಬ್ಬರು ಪ್ರಯಾಣಿಕರಿಗೆ ಅವಕಾಶ ನೀಡಲಾಗಿದೆ.
• ಕೋವಿಡ್ ಕರ್ಫ್ಯೂ ರಾತ್ರಿ 7 ಗಂಟೆಯಿAದ ಬೆಳಿಗ್ಗ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
• ವಾರಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 7 ಗಂಟೆಯಿAದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

ಉಳಿದಂತೆ ವಿವರವಾದ ಮಾರ್ಗಸೂಚಿಗಳನ್ನು ಪ್ರತ್ಯೇಕವಾಗಿ ಹೊರಡಿಸಲಾಗುವುದು.

LEAVE A REPLY

Please enter your comment!
Please enter your name here