Home ಬೆಂಗಳೂರು ನಗರ ಬೆಂಗಳೂರಿನಲ್ಲಿ ಕೋವಿಡ್‌ ಮೂರನೇ ಅಲೆ ಸಮರ್ಥವಾಗಿ ನಿಭಾಯಿಸಲು ತಜ್ಞರ ಸಮಿತಿ ರಚನೆಗೆ ಸಿಎಂ ನೇತೃತ್ವದ ಸಭೆಯಲ್ಲಿ...

ಬೆಂಗಳೂರಿನಲ್ಲಿ ಕೋವಿಡ್‌ ಮೂರನೇ ಅಲೆ ಸಮರ್ಥವಾಗಿ ನಿಭಾಯಿಸಲು ತಜ್ಞರ ಸಮಿತಿ ರಚನೆಗೆ ಸಿಎಂ ನೇತೃತ್ವದ ಸಭೆಯಲ್ಲಿ ನಿರ್ಧಾರ

43
0

ಬೆಂಗಳೂರು:

ಬೆಂಗಳೂರಿನಲ್ಲಿ ಕೋವಿಡ್‌ ಮೂರನೇ ಅಲೆ ಸಮರ್ಥವಾಗಿ ನಿಭಾಯಿಸಲು ತಜ್ಞರ ಸಮಿತಿ ರಚಿಸಲು ಸರ್ಕಾರ ತೀರ್ಮಾನಿಸಿದೆ.

ಶನಿವಾರ ಸಂಜೆ, ಪ್ರಮುಖ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರ ಜೊತೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸಭೆ ನಡೆಸಿ ಈ ತೀರ್ಮಾನ ತೆಗೆದುಕೊಂಡು.

ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಪ್ರಮುಖ ಆಸ್ಪತ್ರೆಗಳ ಮುಖ್ಯಸ್ಥರ ಸಮಾಲೋಚನೆ ಸಭೆಯಲ್ಲಿ ಚರ್ಚಿಸಿದ ವಿಷಯಗಳು:

  1. ಆಕ್ಸಿಜನ್ ಕಾನ್ಸನ್ಟ್ರೇಟರ್ಗಳನ್ನು ಬಳಸಿಕೊಂಡು ಹೋಟೆಲ್ಗಳನ್ನು ಆಕ್ಸಿಜನೇಟೆಡ್ ಬೆಡ್ ಮಾದರಿಯ ಸ್ಟೆಪ್ ಡೌನ್ ಕೋವಿಡ್ ಆಸ್ಪತ್ರೆಗಳನ್ನಾಗಿ ಪರಿವರ್ತಿಸಲು ಕ್ರಮ ಕೈಗೊಳ್ಳುವುದು.
  2. ಸೆಂಟ್ರಲೈಜ್ಡ್ ಆಕ್ಸಿಜನೇಷನ್ ವ್ಯವಸ್ಥೆ ಇರುವ ಬೆಡ್ಗಳನ್ನು ಐ.ಸಿ.ಯು. ಬೆಡ್ಗಳನ್ನಾಗಿ ಪರಿವರ್ತಿಸಲು ಕ್ರಮ ಕೈಗೊಳ್ಳುವುದು.
  3. ವೈದ್ಯಕೀಯ ಮಾನವ ಸಂಪನ್ಮೂಲ ಕೊರತೆ ನೀಗಿಸಲು ಅಂತಿಮ ವರ್ಷದ ವೈದ್ಯಕೀಯ ಮತ್ತು ನರ್ಸಿಂಗ್ ವಿದ್ಯಾರ್ಥಿಗಳನ್ನು ಗ್ರೇಸ್ ಅಂಕಗಳನ್ನು ನೀಡಿ ಕೋವಿಡ್ ಚಿಕಿತ್ಸೆಗೆ ಬಳಸಿಕೊಳ್ಳಲು ಕ್ರಮ ಕೈಗೊಳ್ಳುವುದು. ಇದಕ್ಕೆ ಸಹಕಾರಿಯಾಗಿ ಅಂತಿಮ ವರ್ಷದ ಪರೀಕ್ಷೆಗಳನ್ನು ಮುಂದೂಡಲಾಗಿದ್ದು ಮತ್ತು ಸೂಕ್ತ ಇನ್ಸೆಂಟಿವ್ನ್ನು ನೀಡಲು ಕ್ರಮ ಕೈಗೊಳ್ಳುವುದು.
  4. ನರ್ಸಿಂಗ್ ಕೋರ್ಸ್ಗಳ, ಫಾರ್ಮಸಿ ಕೋರ್ಸ್ಗಳ, ಫಿಜಿಯೋಥೆರಪಿ ಕೋರ್ಸ್ಗಳ, ಆಯುಷ್ ವೈದ್ಯ ಕೋರ್ಸ್ಗಳ, ದಂತ ವೈದ್ಯಕೀಯ ಕೋರ್ಸ್ಗಳ ಹಾಗೂ ಹಾಸ್ಪಿಟಲ್ ಮ್ಯಾನೇಜ್ಮೆಂಟ್ ಕೋರ್ಸ್ಗಳ ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ಕೋವಿಡ್ ಚಿಕಿತ್ಸೆಗೆ ಬಳಸಿಕೊಳ್ಳುವುದು.
  5. ವಿದೇಶಗಳಲ್ಲಿ ವೈದ್ಯಕೀಯ ಪದವಿ ಮುಗಿಸಿರುವ ವಿದ್ಯಾರ್ಥಿಗಳನ್ನು ಕೋವಿಡ್ ಚಿಕಿತ್ಸೆಗೆ ಬಳಸಿಕೊಳ್ಳಲು ಅನುಕೂಲವಾಗುವಂತೆ ಕರ್ನಾಟಕ ಮೆಡಿಕಲ್ ಕೌನ್ಸಿಲ್ನಲ್ಲಿ ನೋಂದಣಿ ಮಾಡಿಸಿ ಅವರನ್ನು ಬಳಸಿಕೊಳ್ಳಲು ಕ್ರಮ ಕೈಗೊಳ್ಳಲು ಪರಿಶೀಲಿಸುದು.
  6. ಆಸ್ಪತ್ರೆಗಳಲ್ಲಿ ಚಿಕಿತ್ಸೆ ಅಗತ್ಯವಿಲ್ಲದ ರೋಗ ಲಕ್ಷಣರಹಿತ ಸೋಂಕಿತರು ಆಸ್ಪತ್ರೆಗಳಲ್ಲಿ ದಾಖಲಾಗುತ್ತಿದ್ದು, ಇದನ್ನು ಕಡಿಮೆಗೊಳಿಸಲು ಟ್ರಯಾಜಿಂಗ್ ಮಾಡಿ ಅಗತ್ಯವಿದ್ದವರನ್ನು ಮಾತ್ರ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿ ಉಳಿದ ಲಕ್ಷಣರಹಿತ ಸೋಂಕಿತರನ್ನ್ನು ಮನೆಯಲ್ಲಿಯೇ ಐಸೋಲೇಷನ್ ಮಾಡಿ ಚಿಕಿತ್ಸೆ ಮುಂದುವರೆಸಲು ಖಾಸಗಿ ಆಸ್ಪತ್ರೆಗಳ ಸಹಭಾಗಿತ್ವದಲ್ಲಿ ಟೆಲಿ ಮೆಡಿಸಿನ್ ಸೌಲಭ್ಯವನ್ನು ಬಲಪಡಿಸುವುದು.
  7. ವೈದ್ಯಕೀಯ ಕಾಲೇಜುಗಳ ಹಾಸ್ಟೇಲ್ಗಳ ಸಾಮಾನ್ಯ ಬೆಡ್ಗಳನ್ನು ಆಕ್ಸಿಜನೇಟೆಡ್ ಬೆಡ್ಗಳಾಗಿ ಪರಿವರ್ತಿಸಲು ಕ್ರಮ ಕೈಗೊಳ್ಳುವುದು.
  8. ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಆಕ್ಸಿಜನ್ ಜನರೇಷನ್ ಪ್ಲಾಂಟ್ ಅಳವಡಿಸಲು ಸರ್ಕಾರದಿಂದ ಧನ ಸಹಾಯ ನೀಡುವುದು.
  9. ಕಡಿಮೆ ಕಾರ್ಯಭಾರವಿರುವ ವೈದ್ಯಕೀಯ ಸಿಬ್ಬಂದಿಗಳನ್ನು ಗುರುತಿಸಿ ಅವರುಗಳನ್ನು ಪರಿಪೂರ್ಣವಾಗಿ ಉಪಯೋಗಿಸಿಕೊಳ್ಳಲು ಕ್ರಮ ಕೈಗೊಳ್ಳುವುದು.
  10. ರೆಮ್ಡಿಸೀವರ್ ಮತ್ತು ಆಕ್ಸಿಜನ್ ಅನಗತ್ಯವಾಗಿ ಬಳಕೆಯಾಗುತ್ತಿದ್ದು, ಇದನ್ನು ತಪ್ಪಿಸಲು ಸೂಕ್ತ ಆಡಿಟ್ ವ್ಯವಸ್ಥೆ ರೂಪಿಸುವುದು.
  11. 3ನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸಲು ಒಂದು ತಜ್ಞರ ಸಮಿತಿಯನ್ನು ರಚಿಸಲು ತೀರ್ಮಾನಿಸಲಾಯಿತು.
  12. ಕೋವಿಡ್ ಲಸಿಕೆಯನ್ನು ಹಾಕುವುದನ್ನು ವೇಗವರ್ಧನಗೊಳಿಸುವುದು.
  13. ಕೋವಿಡ್ ಚಿಕಿತ್ಸೆಯಲ್ಲಿ ತೊಡಗಿರುವ ವೈದ್ಯರಿಗೆ ಈಗ ನೀಡುತ್ತಿರುವ ಇನ್ಸೆಂಟಿವ್ನ್ನು ಹೆಚ್ಚಿಸಲು ನಿರ್ಧರಿಸಲಾಯಿತು.
  14. ಕೋವಿಡ್ ಕರ್ತವ್ಯದಲ್ಲಿ ತೊಡಗಿರುವ ವೈದ್ಯರು/ವೈದ್ಯಕೀಯ ಸಿಬ್ಬಂದಿಗಳು ಸೋಂಕಿತರಾದಲ್ಲಿ ಅವರಿಗೆ ಸರ್ಕಾರಿ ವೆಚ್ಚದಲ್ಲಿ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳುವುದು.
  15. ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳನ್ನು ಕೋವಿಡ್ ಚಿಕಿತ್ಸೆಗೆ ಬಳಸಿಕೊಂಡಲ್ಲಿ ಅವರಿಗೆ ಆದ್ಯತೆಯ ಮೇಲೆ ಕೋವಿಡ್ ಲಸಿಕೆ ನೀಡಲು ಕ್ರಮ ಕೈಗೊಳ್ಳುವುದು.

ಉಪಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥ್ ನಾರಾಯಣ್, ಆರೋಗ್ಯ ಸಚಿವ ಡಾ. ಕೆ.ಸುಧಾಕರ್, ನಾರಾಯಣ ಹೃದಯಾಲಯದ ಡಾ. ದೇವಿಶೆಟ್ಟಿ, ಎಂ.ಎಸ್. ರಾಮಯ್ಯ ಆಸ್ಪತ್ರೆಯ ಅಧ್ಯಕ್ಷ ಜಯರಾಂ ಸಭೆಯಲ್ಲಿ ಇದ್ದರು.

LEAVE A REPLY

Please enter your comment!
Please enter your name here