Home ಬೆಂಗಳೂರು ಗ್ರಾಮಾಂತರ ರಾಜ್ಯದ ಮೊದಲ ಪಶುಸಂಗೋಪನಾ ವಾರ್ ರೂಮ್ ಶೀಘ್ರ ಆರಂಭ: ಪ್ರಭು ಚವ್ಹಾಣ್

ರಾಜ್ಯದ ಮೊದಲ ಪಶುಸಂಗೋಪನಾ ವಾರ್ ರೂಮ್ ಶೀಘ್ರ ಆರಂಭ: ಪ್ರಭು ಚವ್ಹಾಣ್

26
0
ಪ್ರಾತಿನಿಧ್ಯ ಚಿತ್ರ
bengaluru

ಬೆಂಗಳೂರು:

ಜಾನುವಾರು ಸಾಕಾಣಿಕೆಯಲ್ಲಿ ತೊಡಗಿದವರಿಗೆ ಮಾರ್ಗದರ್ಶನ ನೀಡಲು ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ನಿರ್ಮಿಸಿರುವ ಸುಸಜ್ಜಿತವಾದ ವಾರ್ ರೂಮ್ ಶೀಘ್ರವೇ ಕಾರ್ಯಾರಂಭಗೊಳ್ಳಲಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.

ಜಾನುವಾರು ಸಾಕಾಣೆಗೆ ಸಂಬಂಧಿಸಿದ ಸಮಗ್ರ ಮಾಹಿತಿ ನೀಡಲು ಸುಸಜ್ಜಿತವಾದ ವಾರ್ ರೂಮ್ ರಾಜ್ಯದಲ್ಲಿ ಕಾರ್ಯನಿರ್ವಹಿಸಲು ತಯಾರಾಗಿದ್ದು ರೈತರು, ಜಾನುವಾರು ಸಾಕಾಣೆದಾರರು, ಪ್ರಾಣಿಪ್ರಿಯರು ಇದರ ಅನುಕೂಲ ಪಡೆಯಬಹುದು ಎಂದು ಸಚಿವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಜಾನುವಾರುಗಳ ಆರೋಗ್ಯ, ಸಾಕುವ ವಿಧಾನ, ಆರೋಗ್ಯ ಸಮಸ್ಯೆ, ತಕ್ಷಣಕ್ಕೆ ಚಿಕಿತ್ಸೆ, ಔಷಧೋಪಚಾರ ಇತ್ಯಾದಿಗಳ ಬಗ್ಗೆ ವಿಷಯ ತಜ್ಞರು ವಾರ್ ರೂಮ್ ಮೂಲಕ ಮಾಹಿತಿ ನೀಡಲಿದ್ದಾರೆ.

bengaluru
bengaluru

LEAVE A REPLY

Please enter your comment!
Please enter your name here