ಮಂಗಳೂರು:
ಕೋವಿಡ್ ಪಾಸಿಟಿವಿಟಿಯಲ್ಲಿ ಕಳೆದ ಕೆಲವು ದಿನಗಳಿಂದ ಏರಿಕೆ ಕಂಡುಬರುತ್ತಿರುವ ಗಡಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಕೊರೋನಾ ಸೋಂಕು ನಿಯಂತ್ರಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ರಾಜ್ಯ ಸರ್ಕಾರದಿಂದ ಕೈಗೊಳ್ಳಲಾಗುತ್ತಿದೆ ರಾಜ್ಯದ ಎಂದು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಯಿ ಅವರು ತಿಳಿಸಿದರು.
ಅವರು ಆಗಸ್ಟ್ 12ರ ಗುರುವಾರ ನಗರದ ಜಿಲ್ಲಾ ಪಂಚಾಯತ್ನ ನೇತ್ರಾವತಿ ಸಬಾಂಗಣದಲ್ಲಿ ಕೋವಿಡ್ ನಿಯಂತ್ರಣ ಹಾಗೂ ನಿರ್ವಹಣೆ ಕುರಿತಂತೆ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಹೋಂ ಐಸೋಲೇಷನ್ನಲ್ಲಿರುವ ಸೋಂಕಿತರ ನಿರ್ವಹಣೆ, ಕೋವಿಡ್ ಕೇರ್ ಸೆಂಟರ್ಗೆ ದಾಖಲಾಗುವ, ಆಸ್ಪತ್ರೆಗಳಲ್ಲಿ ಕೋವಿಡ್ ನಿರ್ವಹಣೆಗಾಗಿ ಇರುವ ಸೌಲಭ್ಯಗಳು, ಆಂಪೋಟೇರಸಿನ್, ಮುಖ್ಯವಾಗಿ ಜಿಲ್ಲೆಗೆ ಅಗತ್ಯವಿರುವ ಕೋವಿಡ್ ವ್ಯಾಕ್ಸಿನ್ ಪೂರೈಕೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದವರು ಹೇಳಿದರು.
ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ಜಿಲ್ಲೆಯ ತಾಲೂಕುಗಳು ಹಾಗೂ ಗ್ರಾಮಗಳ 10 ಕಿ,ಮಿ. ವ್ಯಾಪ್ತಿಯ ಪ್ರದೇಶದಲ್ಲಿರುವ ಜನರಿಗೆ ಆದ್ಯತೆಯ ಮೇರೆಗೆ ಕೋವಿಡ್ ವ್ಯಾಕ್ಸಿನ್ ನೀಡಲಾಗುವುದು, ಆದ ಕಾರಣ ಈ ಭಾಗಕ್ಕೆ ಹೆಚ್ಚಿನ ವ್ಯಕ್ಸಿನ್ ಪೂರೈಕೆಗೆ ಕೇಂದ್ರ ಆರೋಗ್ಯ ಸಚಿವರೊಂದಿಗೆ ಚರ್ಚಿಸಲಾಗುವುದು. ರಾಜ್ಯಕ್ಕೆ ಪ್ರತಿ ಮಾಹೆ 60-65 ಲಕ್ಷ ವ್ಯಾಕ್ಸಿನ್ ಬರುತ್ತಿದ್ದು, ಕೇಂದ್ರದೊಂದಿಗೆ ಚರ್ಚಿಸಿ ಅದನ್ನು ಒಂದರಿಂದ ಒಂದೂವರೆ ಕೋಟಿಗೆ ಹೆಚ್ಚಿಸಿಕೊಂಡು ಗಡಿ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ವ್ಯಾಕ್ಸಿನ್ ಸರಬರಾಜು ಮಾಡಲಾಗುವುದು ಎಂದು ಹೇಳಿದರು.
ಮುಖ್ಯಮಂತ್ರಿ @BSBommai ರವರು ಇಂದು ಉಡುಪಿ ಜಿಲ್ಲೆಯ ಕೋವಿಡ್-19 ಪರಿಶೀಲನಾ ಸಭೆ ನಡೆಸಿದರು.
— CM of Karnataka (@CMofKarnataka) August 12, 2021
ಸಚಿವರಾದ @KotasBJP, @mla_sudhakar, @karkalasunil, ಶಾಸಕರು, ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.#KarnatakaFightsCorona #Udupi pic.twitter.com/zWB7GZlRou
ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್ಗಳಿಗೆ ದಾಖಲಿಸುವ ಕೆಲಸವನ್ನು ಅಧಿಕಾರಿಗಳು ಅಚ್ಚುಕಟ್ಟಾಗಿ ನಿರ್ವಹಿಸಬೇಕು, ಸೋಂಕಿತರು ಪತ್ತೆಯಾಗುವ ಸುತ್ತಮುತ್ತಲಿನ ನಾಲ್ಕು ಮನೆಗಳನ್ನು ಸೇರಿಸಿ ಮೈಕ್ರೋ ಕಂಟೈನ್ಮೆಂಟ್ ವಲಯ ರಚಿಸುವುದು ಸೂಕ್ತ, ಇದರಿಂದಾಗಿ ಸೋಂಕಿತರೊಂದಿಗೆ ಇತರರು ಸಂಪರ್ಕಕ್ಕೆ ಬಾರದಂತೆ ತಡೆಗಟ್ಟಬಹುದು, ಈ ಹಿಂದೆ ಸೂಚಿಸಿದಂತೆ ಜಿಲ್ಲೆಯ ಗಡಿ ಭಾಗದಲ್ಲಿ ಎಚ್ಚರಿಕೆಯ ಕ್ರಮ ವಹಿಸಬೇಕು. ಗಡಿಯೊಳಗೆ ಪ್ರವೇಶಿಸುವವರಿಗೆ ಆರ್ಟಿಪಿಸಿಆರ್ ತಪಾಸಣೆ ಕಡ್ಡಾಯ, ಬರುವವರು ವ್ಯಾಕ್ಸಿನೇಷನ್ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹಾಜರು ಪಡಿಸಬೇಕು, ಗಡಿ ಭಾಗದ ಚೆಕ್ ಪೋಸ್ಟ್ಗಳಲ್ಲಿ ಸೂಕ್ತ ಬಂದೋ ಬಸ್ತ್ ಒದಗಿಸಬೇಕು, ಹೆಚ್ಚಿನ ಪೊಲೀಸರೊಂದಿಗೆ ಆರೋಗ್ಯ ಇಲಾಖೆಯ ಸಿಬ್ಬಂದಿಗಳನ್ನು ನಿಯೋಜಿಸಬೇಕು. ಪೊಲಿಸ್ ಆಯುಕ್ತರು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಈ ಬಗ್ಗೆ ಹೆಚ್ಚಿನ ಗಮನ ವಹಿಸಬೇಕೆಂದು ಅವರು ನಿರ್ದೇಶನ ನೀಡಿದರು.
ಕೋವಿಡ್ ನಿರ್ವಹಣೆ ನಿಟ್ಟಿನಲ್ಲಿ ಗಡಿಭಾಗದ ಜನರ ಮಧ್ಯೆ ಇರುವ ಸಂಬಂಧ ಹಾಗೂ ಅವಲಂಬನೆ ಕಡಿತಗೊಳಿಸಲು ಸಾಧ್ಯವಿಲ್ಲ, ಆದರೆ ಅದನ್ನು ನಿಯಂತ್ರಿಸಲು ಸಾಧ್ಯವಿದೆ, ಈ ದಿಸೆಯಲ್ಲಿ ಟ್ರಯಜಿಂಗ್ ಮಾಡುವುದು ಅತೀ ಮುಖ್ಯ. ವೈಜ್ಞಾನಿಕ ತಳಹದಿಯಂತೆಯೇ ಹೋಮ್ ಐಸೋಲೇಷನ್ಗೆ ಒಳಗಾದವರು ಇರಬೇಕು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ತಾಲೂಕು ಆರೋಗ್ಯಧಿಕಾರಿಗಳು, ಗ್ರಾಮ ಪಂಚಾಯತ್ ಟಾಸ್ಕ್ಫೋಸ್ ಸದಸ್ಯರು ಕೋವಿಡ್ ನಿಯಂತ್ರಿಸಲು ಗ್ರಾಮ ಮಟ್ಟದಲ್ಲಿ ಕೆಲಸ ಮಾಡಬೇಕು. 21 ಗಂಟೆಯೊಳಗೆ ಟ್ರಯಾಜಿಂಗ್ ಮಾಡಬೇಕು, ಹೋಮ್ ಐಸೋಲೇಷನ್ನಲ್ಲಿರುವವರಿಗೆ ದಿನಕ್ಕೆ ಎರಡು ಬಾರಿ ಥರ್ಮಲ್ ಸ್ಕ್ರೀನಿಂಗ್ ಹಾಗೂ ಆಮ್ಲಜನಕ ಮಟ್ಟವನ್ನು ತಪಾಸಣೆ ಮಾಡಬೇಕು. ಅದರೊಂದಿಗೆ ಅವರ ಸಾಮಾಜಿಕ ಸ್ಥಿತಿಗತಿಗಳನ್ನು ತಿಳಿದುಕೊಳ್ಳಬೇಕು. ಶೌಚಾಲಯಗಳಲ್ಲಿ ಎಸ್.ಓ.ಪಿ. ಮಾನದಂಡಗಳನ್ನು ಪಾಲಿಸುತ್ತಾರೆಯೇ ಎಂಬುದನ್ನು ಅರಿತುಕೊಂಡು ಅವರನ್ನು ಹೋಮ್ ಐಸೋಲೇಶನ್ ನಲ್ಲಿರುವ ಬಗ್ಗೆ ನಿರ್ಧರಿಸಬೇಕು ಎಂದರು.
ಕೋವಿಡ್ ಕೇರ್ ಸೆಂಟರ್ನಲ್ಲಿ ಸ್ವಚ್ಛತೆಗೆ ಆಧ್ಯತೆ ನೀಡಬೇಕು. ವೈದ್ಯರು ಹಾಗೂ ಅಗತ್ಯ ಸಿಬ್ಬಂದಿ ಅಲ್ಲಿರಬೇಕು, ಈ ಹಿಂದೆ ಕೋವಿಡ್ ತೀವ್ರ ಸ್ಥಿತಿಯಲ್ಲಿದ್ದ ಸಂದರ್ಭದಲ್ಲಿ ಅದನ್ನು ನಿಯಂತ್ರಿಸಲು ಕೈಗೊಂಡಿದ್ದ ಕ್ರಮಗಳನ್ನು ಈಗಿನಿಂದಲೇ ಅನುಸರಿಸಬೇಕು. ಇಲ್ಲದಿದ್ದಲ್ಲಿ ಲಾಕ್ ಡೌನ್ ಹೇರುವ ಅನಿವಾರ್ಯತೆ ಎದುರಾಗಗಲಿದೆ ಎಂದವರು ಎಚ್ಚರಿಕೆ ನೀಡಿದರು.
ಉಡುಪಿ ಜಿಲ್ಲೆಯಲ್ಲಿನ ಕೋವಿಡ್-19 ಕುರಿತಂತೆ ಉಡುಪಿ ಜಿಲ್ಲಾ ಪಂಚಾಯತ್ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾಡಳಿತದೊಂದಿಗೆ ಪರಿಶೀಲನಾ ಸಭೆ ನಡೆಸಲಾಯಿತು.
— Basavaraj S Bommai (@BSBommai) August 12, 2021
ಸಚಿವರುಗಳಾದ @mla_sudhakar @KotasBJP @karkalasunil ಜಿಲ್ಲೆಯ ಶಾಸಕರು, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. pic.twitter.com/Cs6Zk8J1HE
ಸಂಭವ್ಯ ಮೂರನೇ ಅಲೆ ಎದುರಾದಲ್ಲಿ ಆಮ್ಲಜನಕ ಕೊರತೆಯಾಗದಂತೆ ಮುನ್ನೆಚರಿಕಾ ಕ್ರಮಗಳನ್ನು ವಹಿಸಬೇಕು. ತಾಲೂಕು ಆಸ್ಪತ್ರೆಗಳಲ್ಲಿ ಎಲ್ಲಾ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕು. ಸೋಂಕು ನಿಯಂತ್ರಣಕ್ಕೆ ಅಗತ್ಯವಿರುವ ಪರಿಕರಗಳು, ಗ್ಲೌಸ್, ಮಾಸ್ಕ್, ಪಿಪಿಇ ಕಿಟ್ ಗಳನ್ನು ಸ್ಥಳೀಯವಾಗಿ ಖರಿದೀಸುವಂತೆ ಸೂಚಿಸಿದ ಮುಖ್ಯಮಂತ್ರಿಗಳು ಸೋಂಕಿತರ ಚಿಕಿತ್ಸೆಗೆ ಯಾವುದೇ ಕೊರತೆ ಎದುರಾಗಬಾರದು. ಜಿಲ್ಲೆಗೆ ಅಗತ್ಯ ಇದ್ದವುಗಳನ್ನು ಖರೀದಿಸಿ, ಕೂಡಲೇ ವರದಿ ನೀಡುವಂತೆ ತಿಳಿಸಿದ ಅವರು, ಈ ಉದ್ದೇಶಕ್ಕಾಗಿ ನೀಡಲಾಗಿರುವ ಹಣ ಸದ್ಬಳಕೆ ಆಗಿರುವ ಬಗ್ಗೆ ಜಿಲ್ಲಾಧಿಕಾರಿಯವರು ಪರಿಶೀಲಿಸಬೇಕು ಎಂದು ಸೂಚಿಸಿದರು.
ಸಂಭಾವ್ಯ ಮೂರನೇ ಅಲೆ ಎದುರದಲ್ಲಿ ಮಕ್ಕಳಿಗೆ ಭಾಧಿಸದೆ ಎಂಬ ತಜ್ಞರ ವರದಿ ಹಿನ್ನೆಲೆಯಲ್ಲಿ ಗ್ರಾಮೀಣ ಹಾಗೂ ನಗರ ಮಟ್ಟದಲ್ಲಿ ಮಕ್ಕಳ ಆರೋಗ್ಯ ತಪಾಸಣಾ ಶಿಬಿರಗಳನ್ನು ಹಮ್ಮಿಕೊಳ್ಳಬೇಕು. ಗ್ರಾಮ ಮಟ್ಟದಲ್ಲಿ ಶಾಲೆಗಳಲ್ಲಿ ಹಾಗೂ ನಗರ ಮಟ್ಟದಲ್ಲಿ ವಾರ್ಡ್ಗಳಲ್ಲಿ ಆರೋಗ್ಯ ತಪಾಸಣೆ ಹಮ್ಮಿಕೊಂಡು ಮಕ್ಕಳ ಆರೋಗ್ಯದ ಸ್ಥಿತಿಗತಿಗಳನ್ನು ಅರಿತುಕೊಳ್ಳಬೇಕು, ತೂಕ ಕಡಿಮೆ ಇರುವ ಮಕ್ಕಳಿಗೆ ಪೂರಕ ಹಾಗೂ ಪೌಷ್ಠಿಕ ಆಹಾರವನ್ನು ಮಹಿಳಾ ಮತ್ತು ಮಕ್ಕಳ ಹಾಗೂ ಆರೋಗ್ಯ ಇಲಾಖೆಯಿಂದ ಪೂರೈಸಲಾಗುತ್ತಿದೆ, ಆ ಆಹಾರ ಪದಾರ್ಥಗಳನ್ನು ಅವರಿಗೆ ಪೂರೈಸಬೇಕು, ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು, ನರ್ಸ್ಗಳು, ಆಕ್ಸಿಜನ್ ಕಾನ್ಸ್ಂಟ್ರೇಟರ್ಸ್ಗಳನ್ನು ಸಿದ್ದಪಡಿಸಿಕೊಳ್ಳಬೇಕು, ತಾಲೂಕು ಆಸ್ಪತ್ರೆಗಳಲ್ಲಿ ಮಕ್ಕಳ ಐಸಿಯು ವಾರ್ಡ್ಗಳನ್ನು ಸಿದ್ದಪಡಿಸಿಟ್ಟುಕೊಳ್ಳಬೇಕು ಎಂದು ಹೇಳಿದರು.
ಸಚಿವರುಗಳಾದ ಶ್ರೀ @KotasBJP, ಶ್ರೀ @karkalasunil, ಶಾಸಕರಾದ ಶ್ರೀ @RaghupathiBhat ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
— Dr Sudhakar K (@mla_sudhakar) August 12, 2021
2/2 pic.twitter.com/TnoHjMYhnp
ಜಿಲ್ಲೆಗೆ ಆದ್ಯತೆ ಮೇರೆಗೆ ಇಪ್ಪತ್ತು ಸಾವಿರಕ್ಕು ಹೆಚ್ಚಿನ ಕೋವಿಡ್ ವ್ಯಾಕ್ಸಿನ್ ಕಳುಹಿಸಲಾಗುವುದು, ಮೊದಲನೇ ಡೋಸ್ ಪಡೆದು ಎರಡನೇ ಡೋಸ್ಗೆ ಬಾಕಿ ಇರುವವರಿಗೆ ಕೂಡಲೇ ವಿತರಿಸುವಂತೆ ತಿಳಿಸಿದ ಮುಖ್ಯಮಂತ್ರಿಗಳು, ರಾಜ್ಯಕ್ಕೆ ಪ್ರತಿ ಮಾಹೆ ಒಂದ ರಿಂದ ಒಂದೂವರೆ ಕೋಟಿ ವಾಕ್ಸಿನ್ ಪೂರೈಸುವಂತೆ ಕೋರಿ ಕೇಂದ್ರ ಆರೋಗ್ಯ ಸಚಿವರಿಗೆ ಮನವಿ ಮಾಡಲು ಆರೋಗ್ಯ ಸಚಿವರೊಂದಿಗೆ ಮುಂದಿನ ವಾರದಲ್ಲಿ ನವದೆಹಲಿಗೆ ತೆರಳಲಾಗುತ್ತಿದೆ ಎಂದರು.
ಮೀನುಗಾರರಿಗೆ ಕೋವಿಡ್ ಲಸಿಕೆ ನೀಡಲು ಅನುಕೂಲವಾಗುವಂತೆ ಅವರನ್ನು ಆದ್ಯತಾ ವಲಯದ ಗುಂಪಿಗೆ ಸೇರಿಸಲಾಗುವುದು, ಬೃಹತ್ ಕೈಗಾರಿಕೆಗಳು, ಬ್ಯಾಂಕ್ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಸಂಬಂಧಿಸಿದ ಸಂಸ್ಥೆಗಳೇ ಕೋವಿಡ್ ವ್ಯಾಕ್ಸಿನ್ ಕೊಡಿಸುವ ಕುರಿತಂತೆ ಶೀಘ್ರದಲ್ಲಿಯೇ ಸುತ್ತೂಲೆ ಹೊರಡಿಸಲಾಗುವುದು ಎಂದು ಹೇಳಿದರು.
ಕೋವಿಡ್ ಸೋಂಕು ದೇಶ ಹಾಗೂ ಸಮಾಜವನ್ನು ಆತಂಕಕ್ಕೆ ಒಳಪಡಿಸಿದೆ. ಬೃಹತ್ ಜನಸಂಖ್ಯೆ ಇರುವ ದೇಶದಲ್ಲಿ ಅದನ್ನು ನಿಯಂತ್ರಿಸಲು ನಾಗರೀಕರು, ತಜ್ಞರು, ವೈದ್ಯರು, ಆಡಳಿತ ಸೇರಿದಂತೆ ಎಲ್ಲರೂ ಅದರ ವಿರುದ್ಧ ಸಮರ ಸಾರಬೇಕಿದೆ ಎಂದ ಮುಖ್ಯಮಂತ್ರಿಗಳು, ಕೋವಿಡ್ ನಿಯಂತ್ರಿಸಲು ಜಿಲ್ಲಾಡಳಿತ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಪ್ರಶಂಶಿಸಿದರು.
ಮುಖ್ಯಮಂತ್ರಿ @BSBommai ರವರು ಇಂದು ದಕ್ಷಿಣ ಕನ್ನಡ ಜಿಲ್ಲೆಯ ಕೋವಿಡ್-19 ಪರಿಶೀಲನಾ ಸಭೆ ನಡೆಸಿದರು.
— CM of Karnataka (@CMofKarnataka) August 12, 2021
ಸಭೆಯಲ್ಲಿ ಸಚಿವರಾದ @mla_sudhakar, @KotasBJP, @AngaraSBJP, @karkalasunil, ಸಂಸದ @nalinkateel, ಜಿಲ್ಲೆಯ ಶಾಸಕರು, ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.#KarnatakaFightsCorona #DakshinaKannada pic.twitter.com/0hBFxn1amy
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಸುಧಾಕರ್ ಮಾತನಾಡಿ, ಸಂಭಾವ್ಯ ಕೋವಿಡ್ 3 ನೇ ಅಲೆ ಪ್ರಾರಂಭವಾಗುವ ಮೊದಲೇ ಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ, ಈ ನಿಟ್ಟಿಲ್ಲಿ ವೈದ್ಯಕೀಯ ಆಮ್ಲಜನಕದ ಕೊರತೆ ಇಲ್ಲದಂತೆ ನೋಡಿಕೊಳ್ಳುವುದರೊಂದಿಗೆ ಪ್ರತಿ ತಾಲೂಕು ವ್ಯಾಪ್ತಿಯಲ್ಲಿ ಕೋವಿಡ್ ಕೇರ್ ಸೆಂಟರ್ಗಳು ಸೂಕ್ತವಾಗಿ ನಿರ್ವಹಣೆಯಾಗಬೇಕು ಎಂದರು.
ಜಿಲ್ಲೆಯಲ್ಲಿ ಎನ್ 95 ಮಾಸ್ಕ್ಗಳು, ಪಿಪಿಇ ಕಿಟ್ಗಳು ಮತ್ತು ಕೈಗವಸುಗಳ ಕೊರತೆ ಇದ್ದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಜಿಲ್ಲಾಧಿಕಾರಿಗಳ ಗಮನಕ್ಕೆ ತರಬೇಕು ಮತ್ತು ಜಿಲ್ಲಾಡಳಿತಕ್ಕೆ ನೀಡಿರುವ ಎಸ್.ಡಿ.ಆರ್.ಎಫ್ ಅನುದಾನದಲ್ಲಿಯೇ ಸ್ಥಳೀಯವಾಗಿ ಅವುಗಳನ್ನು ಖರೀದಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
ಅಗತ್ಯದೊಂದಿಗೆ ಈಗಾಗಲೇ ಜಿಲ್ಲೆಗೆ ಹೆಚ್ಚುವರಿ ಆರೋಗ್ಯ ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಸಿಬ್ಬಂದಿಗಳು ಅಗತ್ಯವಿದ್ದಲ್ಲಿ ಸರ್ಕಾರದ ಗಮನಕ್ಕೆ ತರುವಂತೆ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಮಾತನಾಡಿ, ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಸಾಕಷ್ಟು ಮುಂಜಾಗೃತಾ ಕ್ರಮಗಳನ್ನು ಈಗಾಗಲೇ ಕೈಗೊಂಡಿದ್ದು, ಗಡಿ ಭಾಗದಿಂದ ಬರುವ ಪ್ರತಿಯೊಬ್ಬರನ್ನು ಕಡ್ಡಾಯವಾಗಿ ಪರೀಕ್ಷೆ ಮಾಡಲಾಗುತ್ತಿದೆ. ಪ್ರತಿದಿನವೂ ಕೋವಿಡ್ ತಪಾಸಣೆಯನ್ನು ಹೆಚ್ಚು ಮಾಡಲಾಗುತ್ತಿದೆ ಎಂದರು.
ಕೋವಿಡ್ ಸಂಕಷ್ಟದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ 8 ವೈದ್ಯರು, 77 ನರ್ಸ್ಗಳು, 89 ಲ್ಯಾಬ್ ಟೆಕ್ನಿಷಿಯನ್, 7 ಗ್ರೂಪ್-ಡಿ ನೌಕರರು, 51 ಡಿ.ಇ.ಒ ಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ 90 ವಾಹನಗಳ, 40 ಆರೋಗ್ಯ ಮತ್ರರನ್ನು ಎಸ್.ಡಿ.ಆರ್.ಎಫ್ ಅನುದಾನದಲ್ಲಿ ಹೆಚ್ಚುವರಿಯಾಗಿ ತೆಗೆದುಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ರಾಜ್ಯದ ಮುಖ್ಯಮಂತ್ರಿಗಳಾದ
— Nalinkumar Kateel (@nalinkateel) August 12, 2021
ಶ್ರೀ @BSBommai ಅವರ ಅಧ್ಯಕ್ಷತೆಯಲ್ಲಿ ಮಂಗಳೂರಿನ ಜಿಲ್ಲಾ ಪಂಚಾಯತ್ನ ನೇತ್ರಾವತಿ ಸಭಾಂಗಣದಲ್ಲಿ ಇಂದು ಕೋವಿಡ್-19 ನಿಯಂತ್ರಣ ಹಾಗೂ ನಿರ್ವಹಣೆ ಕುರಿತಂತೆ ಪ್ರಗತಿ ಪರಿಶೀಲನಾ ಸಭೆ ನಡೆಯಿತು. pic.twitter.com/k0D6KdZiKC
ಜಿಲ್ಲೆಯ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಒಟ್ಟು 6529 ಹಾಸಿಗೆಗಳು ಲಭ್ಯವಿದ್ದೂ, 587 ಬೆಡ್ಗಳಲ್ಲಿ ಕೊರೊನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲಾಸ್ಪತ್ರೆಯ ಮಕ್ಕಳ ಘಟಕದಲ್ಲಿ ಒಟ್ಟು 130 ಹಾಸಿಗೆಗಳು ಲಭ್ಯವಿದ್ದು, ಯಾವುದೇ ಕೊರತೆ ಇಲ್ಲ ಎಂದರು.
12 ಕೆ.ಎಲ್ ಕ್ರಯೋಜೆನಿಕ್ ಆಕ್ಸಿಜೆನ್ ಟ್ಯಾಂಕ್, 9 ಆಮ್ಲಜನಕ ಉತ್ಪಾದನಾ ಘಟಕಗಳು, 263 ಕಾನ್ಸಂಟ್ರೇಟರ್ಗಳು, 3360 ಆಕ್ಸಿಜೆನ್ ಸಿಲಿಂಡರುಗಳು ಲಭ್ಯವಿದ್ದು, ಇಲ್ಲಿವರೆಗೆ ವೈದ್ಯಕೀಯ ಆಮ್ಲಜನಕದ ಸಮಸ್ಯೆ ಎದುರಾಗಿಲ್ಲ ಎಂದು ಹೇಳಿದರು.
ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಇಂಧನ, ಕನ್ನಡ ಮತ್ತು ಸಂಸ್ಕತಿ ಇಲಾಖೆಯ ಸಚಿವರಾದ ವಿ. ಸುನೀಲ್ ಕುಮಾರ್, ಮಹಾಪೌರಾದ ಪ್ರೇಮಾನಂದ ಶೆಟ್ಟಿ, ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ಸೇರಿದಂತೆ ಹಿರಿಯ ಅಧಿಕಾರಿಗಳು ವೇದಿಕೆಯಲ್ಲಿದ್ದರು.
ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಡಿ. ವೇದವ್ಯಾಸ್ ಕಾಮತ್, ಮಂಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕ ಯು.ಟಿ ಖಾದರ್, ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ವೈ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕ ರಾಜೇಶ್ ನಾಯ್ಕ್ ಯು, ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಸಂಜೀವ ಮಠಂದೂರು, ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಶಾಸಕ ಉಮಾನಾಥ ಎ. ಕೋಟ್ಯಾನ್, ವಿಧಾನ ಪರಿಷತ್ನ ಶಾಸಕ ಎಸ್.ಎಲ್. ಭೋಜೇಗೌಡ ಅವರು ಮಾತನಾಡಿದರು.
ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷ ನಿತಿನ್ ಕುಮಾರ್, ಬೆಂಗಳೂರಿನ ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಸಂತೋಷ ರೈ ಬೋಲಿಯಾರ್, ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಅಕ್ಷಯ್ ಶ್ರೀಧರ್, ಉಪ ಮಹಾಪೌರರಾದ ಸುಮಂಗಲಾ ರಾವ್ ಸೇರಿದಂತೆ ಇತರೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸಭೆಯಲ್ಲಿದ್ದರು.