ಬೆಂಗಳೂರು:
ರಾಜ್ಯ ಸರ್ಕಾರ ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್ ರಮ್ಯಾ ಅವರನ್ನು ಬಿಎಂಆರ್ ಡಿಎ ಆಯುಕ್ತರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಯಾದಗಿರಿ ಜಿಲ್ಲಾಧಿಕಾರಿಯನ್ನಾಗಿ ಸುಶೀಲಾ, ವಿಜಯನಗರಕ್ಕೆ ಎಂಎಸ್ ದಿವಾಕರ್, ಬಳ್ಳಾರಿಗೆ ಟಿ ವೆಂಕಟೇಶ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.