Home ಕರ್ನಾಟಕ ವಾರಾಂತ್ಯದ ಕರ್ಫ್ಯೂ ಇಂದು ರಾತ್ರಿ 9 ರಿಂದ ಸೋಮವಾರ ಬೆಳಿಗ್ಗೆ 6 ರವರೆಗೆ ಪ್ರಾರಂಭ

ವಾರಾಂತ್ಯದ ಕರ್ಫ್ಯೂ ಇಂದು ರಾತ್ರಿ 9 ರಿಂದ ಸೋಮವಾರ ಬೆಳಿಗ್ಗೆ 6 ರವರೆಗೆ ಪ್ರಾರಂಭ

26
0

ಕರ್ನಾಟಕದಲ್ಲಿ ಅಗತ್ಯ ಸೇವೆ ಹೊರತು ಮತ್ತೆಲ್ಲವೂ ಬಂದ್

ಬೆಂಗಳೂರು:

ಕೋವಿಡ್ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪರಿಶ್ಕೃತ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಅದರಂತೆ ಅಗತ್ಯ ಸೇವೆ ಹೊರತುಪಡಿಸಿ ಮಿಕ್ಕೆಲ್ಲವನ್ನೂ ಬಂದ್ ಮಾಡುವಂತೆ ತಿಳಿಸಿದೆ. ಈ ನೂತನ ಆದೇಶ ಮೇ 4ರವರೆಗೆ ಜಾರಿಯಲ್ಲಿರಲಿದೆ.

ಮೊಬೈಲ್ ಶಾಪ್, ಟಿವಿ, ಎಲೆಕ್ಟ್ರಾನಿಕ್ ಶೋ ರೂಮ್, ಬ್ಯಾಂಗಲ್ಸ್ ಸ್ಟೋರ್, ಚಿನ್ನದ ಅಂಗಡಿ ಬುಕ್ ಶಾಪ್, ಚಪ್ಪಲಿ ಅಂಗಡಿಗಳು, ಫ್ಯಾನ್ಸಿ ಸ್ಟೋರ್, ಬಟ್ಟೆ ಅಂಗಡಿಗಳು ಸೇರಿ ಎಲ್ಲವನ್ನೂ ಬಂದ್ ಮಾಡಬೇಕಿದೆ.

ಹೋಟೆಲ್ , ರೆಸ್ಟೋರೆಂಟ್, ಬಾರ್ ಗಳಲ್ಲಿ ಪಾರ್ಸಲ್ ತರಲಷ್ತೇ ಅವಕಾಶವಿದೆ. ಆಟೋ, ಬಸ್, ಮೆಟ್ರೋ ಸೇವೆಗಳು ಲಭ್ಯವಾಗಲಿದೆ.

ಬ್ಯಾಂಕ್, ಎಟಿಎಂ, ಇನ್ಶ್ಯೂರೆನ್ಸ್ ಕಂಪನಿ, ಪೇಪರ್, ಟಿವಿ ಸೇರಿದಂತೆ ವಿವಿಧ ಮೀಡಿಯಾ ಸಂಸ್ಥೆಗಳು, ಇ-ಕಾಮರ್ಸ್ ಸೇವೆ, ಕಾಸಗಿ ಸೆಕ್ಯೂರಿಟಿ, ಕಟಿಂಗ್ ಶಾಪ್, ಬ್ಯೂಟಿ ಪಾರ್ಲರ್ ಗಳಿಗೆ ಅನುಮತಿಸಲಾಗಿದೆ.

All Shops closed till May 4 except essential goods and services.
All Shops closed till May 4 except essential goods and services

LEAVE A REPLY

Please enter your comment!
Please enter your name here