ಬೆಂಗಳೂರು:
ಪದವಿ ಕಾಲೇಜುಗಳ ಭೌತಿಕ ತರಗತಿಗಳ ಆರಂಭದ ಬಗ್ಗೆ ಸರಕಾರದ ಮಟ್ಟದಲ್ಲಿ ಯಾವುದೇ ತೀರ್ಮಾನ ಆಗಿಲ್ಲ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದರು.
ಪದವಿ ಕಾಲೇಜುಗಳ ಆರಂಭ ದಿನಾಂಕದ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ. ಈ ಬಗ್ಗೆ ಗೊಂದಲ ಬೇಡ.
— Dr. Ashwathnarayan C. N. (@drashwathcn) July 8, 2021
ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ಒದಗಿಸುವುದು ನಮ್ಮ ಪ್ರಥಮ ಆದ್ಯತೆ. ಸರ್ಕಾರಿ, ಅನುದಾನಿತ ಕಾಲೇಜುಗಳಲ್ಲಿ ಈಗಾಗಲೇ 65% ಲಸಿಕಾಕರಣವಾಗಿದೆ. ಖಾಸಗಿ ಕಾಲೇಜುಗಳಲ್ಲೂ ತ್ವರಿತವಾಗಿ ಲಸಿಕಾಕರಣ ನಡೆಸಲು ಸೂಚಿಸಲಾಗಿದೆ. ಎಲ್ಲರ ಸುರಕ್ಷತೆ ಕಾಪಾಡೋಣ.
ಈ ಬಗ್ಗೆ ಬೆಂಗಳೂರಿನಲ್ಲಿ ಹೇಳಿಕೆ ನೀಡಿರುವ ಅವರು, “ಸದ್ಯಕ್ಕೆ ಪದವಿ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವುದು ಮಾತ್ರ ಸರಕಾರದ ಆದ್ಯತೆ. ಅದರ ಹೊರತಾಗಿ ಕಾಲೇಜುಗಳನ್ನು ಆರಂಭಿಸುವುದಲ್ಲ. ಕೋವಿಡ್ ಸೋಂಕು ಇನ್ನೂ ಪೂರ್ಣವಾಗಿ ನಿವಾರಣೆ ಆಗದಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಯಾವುದೇ ತೀರ್ಮಾನ ಮಾಡಲಾಗಿಲ್ಲ” ಎಂದರು.