Home ಬೆಂಗಳೂರು ನಗರ ʻಕನ್ನಡಕ್ಕಾಗಿ ನಾವುʼ ವಿಶೇಷ ಅಭಿಯಾನಕ್ಕೆ ಅದ್ದೂರಿ ಚಾಲನೆ: ಕನ್ನಡ ಉಳಿಸಿ ಬೆಳೆಸಲು ಸಚಿವ ವಿ ಸುನಿಲ್...

ʻಕನ್ನಡಕ್ಕಾಗಿ ನಾವುʼ ವಿಶೇಷ ಅಭಿಯಾನಕ್ಕೆ ಅದ್ದೂರಿ ಚಾಲನೆ: ಕನ್ನಡ ಉಳಿಸಿ ಬೆಳೆಸಲು ಸಚಿವ ವಿ ಸುನಿಲ್ ಕುಮಾರ್ ಕರೆ

97
0
Karnataka's Kannada and cultrue minister Sunil Kumar calls for special campaign to save and to grow Kannada
Advertisement
bengaluru

ಬೆಂಗಳೂರು:

ಕನ್ನಡ ನಮ್ಮ ಸಂಸ್ಕೃತಿ. ಕನ್ನಡವನು ಉಳಿಸಿ ಬೆಳೆಸಲು ದೊಡ್ಡ ಪ್ರಮಾಣದ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಮನೆ ಮನೆಗಳಲ್ಲಿ ಹಾಗೂ ಮನ ಮನ ಗಳಲ್ಲಿ ಕನ್ನಡ ಮಾತನಾಡುವ ಮೂಲಕ ಕನ್ನಡ ವಾತಾವರಣ ನಿರ್ಮಾಣ ಆಗಬೇಕಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ಶ್ರೀ ವಿ ಸುನೀಲ್ಕುಮಾರ್ ಕರೆ ನೀಡಿದರು.

ಅವರು ಇಂದು ಬೆಂಗಳೂರಿನ ಲಾಲ್ ಬಾಗ್ನಲ್ಲಿ ೬೬ನೇ ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ʻಕನ್ನಡಕ್ಕಾಗಿ ನಾವುʼ ವಿಶೇಷ ಅಭಿಯಾನಕ್ಕಾಗಿ ರಚಿಸಲಾದ ʻಮಾತಾಡ್ ಮಾತಾಡ್ ಕನ್ನಡʼ ಎನ್ನುವ ಕಿರು ನಾಟಕಕ್ಕೆ ಚಾಲನೆ ನೀಡಿ ಮಾತನಾಡಿದರು. ʻಮಾತಾಡ್ ಮಾತಾಡ್ ಕನ್ನಡʼ ಎನ್ನುವ ಘೊಷವಾಕ್ಯದೊಂದಿಗೆ ಆರಂಭವಾದ ಈ ಅಭಿಯಾನ ಅಕ್ಟೋಬರ್ ೩೧ ರವರೆಗೆ ನಡೆಯಲಿದೆ.

ಇದನ್ನೂ ಓದಿ: ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆ ರಾಜಭವನದಲ್ಲಿ ಸವಿಗನ್ನಡ‌ದ ಅನನ್ಯ ಕಾರ್ಯಕ್ರಮ

bengaluru bengaluru

ಈ ಸಂದರ್ಭದಲ್ಲಿ ನಾಡಿನಾಧ್ಯಂತ ವಿವಿಧ ಸಾಂಸ್ಕೃತಿ ಕಾರ್ಯಕ್ರಮಗಳು ನಡೆಯಲಿವೆ. ಮನೆಗಳಲ್ಲಿ ಕನ್ನಡ ಮಾತನಾಡುವ ಮೂಲಕ ಮಕ್ಕಳಲ್ಲಿ ಕನ್ನಡ ಭಾಷೆ ಕುರಿತ ಹೆಮ್ಮೆ ಮೂಡಿಸಬೇಕು. ಕನ್ನಡಲ್ಲಿ ಸಹಿ ಮಾಡುವ ರೂಢಿ ಹೆಚ್ಚಾಗ ಬೇಕು..ಚರವಾಣಿಗಳಲ್ಲಿ ಕನ್ನಡ ಸಂದೇಶಗಳನ್ನು ಕಳಿಸುವ ಪದ್ಧತಿ ಶುರು ಆಗಬೇಕು. ಈ ಮೂಲಕ ʻಕನ್ನಡಕ್ಕಾಗಿ ನಾವುʼ ಅಭಿಯಾನ ಯಶಸ್ವಿಯಾಗಿಸಬೇಕು ಎಂದು ಸಚಿವ ಸುನಿಲ್ ಕುಮಾರ್ ಹೇಳಿದರು.

Karnataka's Kannada and cultrue minister Sunil Kumar calls for special campaign to save and to grow Kannada

ʻಕನ್ನಡಕ್ಕಾಗಿ ನಾವುʼ ಅಭಿಯಾನದ ಹಿನ್ನೆಲೆಯಲ್ಲಿ ಅ.೨೮ ರಂದು ಬೆಳಗ್ಗೆ ೧೧ ಗಂಟೆಗೆ ಕನ್ನಡ ಗೀತೆಗಳನ್ನು ಸಾಮೂಹಿಕವಾಗಿ ಹಾಡುವ ವಿಶೇಷ ಪ್ರಯತ್ನ ಈ ಬಾರಿ ಮಾಡಲಾಗಿದೆ. ಈ ಕಾರ್ಯಕ್ರಮದಲ್ಲಿ ಪ್ರತಿಯಬ್ಬರು ಭಾಗವಹಿಸಬೇಕು. ಗುಂಪು ಗುಂಪಾಗಿ, ಕಚೇರಿಗಳ ಮುಂಭಾಗ, ಕಾರ್ಖಾನೆಗಳಲ್ಲಿ, ವಸತಿ ಸಮುಚ್ಛಯಗಳಲ್ಲಿ, ಗಡಿನಾಡು, ಹೊರನಾಡುಗಳಲ್ಲಿಯೂ ಕನ್ನಡದ ಗೀತೆಗಳನ್ನು ಹಾಡಬೇಕಿದೆ ಎಂದು ಸಚಿವರು ತಿಳಿಸಿದರು.

ಕುವೆಂಪು ಭಾಷಾ ಭಾರತಿಯಿಂದ ಪ್ರಕಟಿಸಿರುವ ʻಕನ್ನಡೇತರರಿಗೆ ಕನ್ನಡ ಕಲಿಸುವ ಕಿರು ಹೊತ್ತಿಗೆಯನ್ನು ಸಾರ್ವಜನಿಕರಿಗೆ ವಿತರಣೆ ಮಾಡಿದರು. ಲಾಲ್ ಬಾಗ್ ಮೆಟ್ರೋ ನಿಲ್ದಾಣದಲ್ಲಿ ಕನ್ನಡ ಅಭಿಯಾನದ ಸ್ವಯಂ ಭಾವ ಚಿತ್ರ ಕೇಂದ್ರದಲ್ಲಿ ( ಸೆಲ್ಫಿ) ಸ್ವತಃ ಸಚಿವರೇ ಸ್ವಯಂ ಭಾವಚಿತ್ರ ತೆಗೆದುಕೊಂಡು ಉದ್ಘಾಟಿಸಿದರು. ನಂತರ ಮೆಟ್ರೋ ನಿಲ್ದಾಣದಲ್ಲಿ ಮಾತಾಡ್ ಮಾತಾಡ್ ಕನ್ನಡ ಘೋಷ ವಾಕ್ಯದ ಭಿತ್ತಿ ಪತ್ರಗಳನ್ನು ಅಂಟಿಸಿದರು.

ಅಭಿಯಾನದ ಅಂಗವಾಗಿ ರವೀಂದ್ರ ಕಲಾಕ್ಷೇತ್ರದಲ್ಲಿ ಮೈಸೂರಿನ ರಂಗಾಯಣ ಹಮ್ಮಿಕೊಂಡಿರುವ ಡಾ.ಎಸ್.ಎಲ್. ಬೈರಪ್ಪ ಅವರ ಕಾದಂಭರಿ ಆಧಾರಿತ ʻಪರ್ವʼ ನಾಟಕಕ್ಕೆ ಸಚಿವರು ಚಾಲನೆ ನೀಡಿದರು. ʻಕನ್ನಡಕ್ಕಾಗಿ ನಾವುʼ ಅಭಿಯಾನದ ಹಿನ್ನೆಲೆಯಲ್ಲಿ ತಯಾರಿಸಲಾದ ವಿವಿಧ ವಿಡಿಯೋ ಪ್ರದರ್ಶನದ ಎಲ್.ಇ.ಡಿ ಪರದೆ ಹೊಂದಿರುವ ವಾಹನಕ್ಕೆ ಚಾಲನೆ ನೀಡಿದರು.

ಕಾಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಶ್ರೀಮತಿ ಮಂಜುಳಾ, ಇಲಾಖೆಯ ನಿರ್ದೇಶಕ ಶ್ರೀ ರಂಗಪ್ಪ ಹಾಗೂ ಇತರರು ಹಾಜರಿದ್ದರು.


bengaluru

LEAVE A REPLY

Please enter your comment!
Please enter your name here