ಬೆಂಗಳೂರು:
ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹೆಸರನ್ನು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಎಂದು ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.
ಸಾರಿಗೆ ನಿಗಮಗಳ ಅಧಿನಿಯಮ 1950 ರ ( ಕೇಂದ್ರ ಅಧಿನಿಯಮ 64) ಕಲಮ್ ಮೂರರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಆದೇಶಿಸಲಾಗಿದೆ.
ಹೈದರಾಬಾದ್-ಕರ್ನಾಟಕ ಪ್ರದೇಶಕ್ಕೆ ಕಲ್ಯಾಣ ಕರ್ನಾಟಕ ಎಂದು ಮರುನಾಮಕರಣವಾದ ನಂತರ ಈಶಾನ್ಯ ಸಾರಿಗೆಗೂ ಈ ರೀತಿ ಮರು ನಾಮಕರಣ ಮಾಡಬೇಕೆಂಬ ಬೇಡಿಕೆ ಬಹುದಿನಗಳಿಂದ ಸ್ಥಳೀಯರಿಂದ ವ್ಯಕ್ತವಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಮರು ನಾಮಕರಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.