Home ಉತ್ತರ ಕನ್ನಡ Karwar: ಅತಿವೃಷ್ಠಿ ಪೀಡಿತ ಸ್ಥಳಗಳಿಗೆ ಮುಖ್ಯಮಂತ್ರಿ ಭೇಟಿ

Karwar: ಅತಿವೃಷ್ಠಿ ಪೀಡಿತ ಸ್ಥಳಗಳಿಗೆ ಮುಖ್ಯಮಂತ್ರಿ ಭೇಟಿ

35
0

ಯಲ್ಲಾಪುರ:

ಜಿಲ್ಲೆಯಲ್ಲಿ ಧಾರಾಕಾರವಾಗಿ ಸುರಿದ ಮಳೆ ಹಾಗೂ ಅತಿವೃಷ್ಟಿಯಿಂದ ಬಾಧಿತಗೊಳಗಾದ ಯಲ್ಲಾಪುರ ತಾಲೂಕಿನ ವಿವಿಧ ಪ್ರದೇಶಗಳಿಗೆ ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಿದ ಸಂದರ್ಭದಲ್ಲಿ ಯಲ್ಲಾಪುರ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಆಸ್ಪತ್ರೆಯ ವಿವಿಧ ವಿಭಾಗಗಳ ಜೊತೆಗೆ ಕೋವಿಡ್ -19 ಲಸಿಕೆ ನೀಡುವ ಕೇಂದ್ರನ್ನೂ ಪರಿಶೀಲನೆ ಮಾಡಿದರು.

ಇಲ್ಲಿ ಓದಿ: ಉತ್ತರ ಕನ್ನಡ ಜಿಲ್ಲೆಯ ಪ್ರವಾಹ ಬಾಧಿತ ಪ್ರದೇಶಗಳಿಗೆ ಮುಖ್ಯಮಂತ್ರಿ ಬಸವರಾಜ ಎಸ್ ಬೊಮ್ಮಾಯಿ ಭೇಟಿ

ನಂತರ ಒಳ ಹಾಗೂ ಹೊರ ರೋಗಿಗಳ ಆರೈಕೆಯಲ್ಲಿ ಯಾವುದೇ ಕೊರತೆಯಾಗದಂತೆ ಕ್ರಮವಹಿಸಲು ವೈದ್ಯಾಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here