ಕೆಆರ್ ಪೇಟೆ;– ಬರುವ MP ಎಲೆಕ್ಷನ್ ನಲ್ಲಿ ಜೆಡಿಎಸ್‌ಗೆ ಮಂಡ್ಯ ಬಿಟ್ಟುಕೊಡಬೇಡಿ ಎಂದು ಮಾಜಿ ಸಚಿವ ಕೆ.ಸಿ.ನಾರಾಯಣಗೌಡ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಜೆಡಿಎಸ್-ಬಿಜೆಪಿ ಮೈತ್ರಿ ಆಗುತ್ತಿರುವುದು ಸಂತೋಷದ ವಿಚಾರ. ಆದರೆ, ಮಂಡ್ಯ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡುವುದಕ್ಕೆ ನನ್ನ ವಿರೋಧವಿದೆ. ಪ್ರಸ್ತುತ ಸುಮಲತಾ ಅಂಬರೀಶ್ ಮಂಡ್ಯ ಕ್ಷೇತ್ರದ ಸಂಸದೆಯಾಗಿದ್ದಾರೆ.
ಕಳೆದ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಅವರನ್ನು ಬೆಂಬಲಿಸಿತ್ತು. ಈಗ ಸುಮಲತಾ ಅವರು ಬಿಜೆಪಿ ಪಕ್ಷವನ್ನು ಬೆಂಬಲಿಸಿದ್ದಾರೆ. ಅವರೊಂದು ರೀತಿ ಬಿಜೆಪಿ ಪಕ್ಷದ ಸಂಸದೆಯೇ ಆಗಿದ್ದಾರೆ.
ಹಾಗಾಗಿ ಮುಂಬರುವ ಚುನಾವಣೆಯಲ್ಲೂ ಸುಮಲತಾ ಅವರಿಗೇ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿದರು. ಜೆಡಿಎಸ್ ಪ್ರಭಾವ ಜಿಲ್ಲೆಯಲ್ಲಿ ಹೆಚ್ಚೇನೂ ಇಲ್ಲ. ಹಿಂದೆ ಏಳು ಕ್ಷೇತ್ರದಲ್ಲಿ ಜೆಡಿಎಸ್ ಶಾಸಕರು ಇದ್ದರು. ಈಗ ಒಂದೇ ಕ್ಷೇತ್ರದಲ್ಲಿ ಜೆಡಿಎಸ್ ಉಳಿದುಕೊಂಡಿದೆ. ಜಿಲ್ಲೆಯೊಳಗೆ ಸುಮಲತಾ ಅವರ ಪ್ರಭಾವ ಹೆಚ್ಚಿದೆ. ಅಂಬರೀಶ್ ಅಣ್ಣನ ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿದ್ದಾರೆ. ಆದ ಕಾರಣ ಸುಮಲತಾ ಅವರಿಗೆ ಟಿಕೆಟ್ ನೀಡಬೇಕು. ಅವರಿಗೆ ಟಿಕೆಟ್ ನೀಡಿದರೆ ನಾನೂ ಸುಮಲತಾ ಅವರ ಪರವಾಗಿಯೇ ನಿಲ್ಲುತ್ತೇನೆ ಎಂದರು. ಬಿಜೆಪಿ ವರಿಷ್ಠರು ಸುಮಲತಾ ಅವರನ್ನು ಬಿಟ್ಟು ಉಳಿದ ಯೋಚನೆ ಮಾಡಬಾರದು ಎಂದರು.
The post KC Narayana Gowda; MP ಎಲೆಕ್ಷನ್ ನಲ್ಲಿ ಜೆಡಿಎಸ್‌ಗೆ ಮಂಡ್ಯ ಬಿಟ್ಟುಕೊಡಬೇಡಿ -ಕೆ.ಸಿ.ನಾರಾಯಣಗೌಡ appeared first on Ain Live News.