ಚಾಯ್ಸ್-4 ಅಭ್ಯರ್ಥಿಗಳಿಗೆ 3ನೇ ಸುತ್ತಿನ ವೈದ್ಯಕೀಯ ಕೌನ್ಸೆಲಿಂಗ್ಗೆ ಷರತ್ತುಬದ್ಧ ಅವಕಾಶ: ಕೆಇಎ
ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಗೆ ಆಪ್ಷನ್ಸ್ ದಾಖಲಿಸಲು ನವೆಂಬರ್ 3ರಂದು ಮಧ್ಯಾಹ್ನ 12 ಗಂಟೆವರೆಗೆ ಸಮಯ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ಹಿಂದಿನ ಕೊನೆಯ ದಿನಾಂಕ ನವೆಂಬರ್ 2 ಆಗಿತ್ತು.
ವೈದ್ಯಕೀಯ ಕಾಲೇಜುಗಳ ಶುಲ್ಕ ವಿವರಗಳು ಪರಿಷ್ಕರಣೆಯಾಗಿದ್ದು, ಅದನ್ನು ಗಮನಿಸಿಯೇ ಆಪ್ಷನ್ಸ್ ದಾಖಲಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.
ಪಿಜಿ ದಂತ ವೈದ್ಯಕೀಯ
ಸ್ನಾತಕೋತ್ತರ ದಂತ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಮೂರನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನೂ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ಆಕ್ಷೇಪಣೆಗಳಿದ್ದರೆ ನವೆಂಬರ್ 3ರಂದು ಬೆಳಿಗ್ಗೆ 11 ಗಂಟೆವರೆಗೆ ಸಲ್ಲಿಸಬಹುದು ಎಂದು ಪ್ರಸನ್ನ ಎಕ್ಸ್ನಲ್ಲಿ ತಿಳಿಸಿದ್ದಾರೆ.
