ಯುಜಿ ನೀಟ್ ಮೂರನೇ ಸುತ್ತಿನ ತಾತ್ಕಾಲಿಕ ಫಲಿತಾಂಶ ಪ್ರಕಟ; ಸೀಟು ರದ್ದತಿಗೆ ಅಕ್ಟೋಬರ್ 5ರವರೆಗೆ ಅವಕಾಶ
ಬೆಂಗಳೂರು: ಎಂಬಿಎ, ಎಂಸಿಎ, ಎಂಇ, ಎಂ.ಟೆಕ್ ಮತ್ತು ಎಂ.ಆರ್ಕ್ ಕೋರ್ಸ್ಗಳ ಮೊದಲ ಸುತ್ತಿನ ಸೀಟು ಹಂಚಿಕೆಯಲ್ಲಿ ಸೀಟು ಪಡೆದ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಸುವ ಗಡುವನ್ನು ಅಕ್ಟೋಬರ್ 7ರವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ತಿಳಿಸಿದೆ.
ಶುಲ್ಕ ಪಾವತಿಸಿದ ಬಳಿಕ ಸೀಟು ಖಾತರಿ ಚೀಟಿಯನ್ನು ಡೌನ್ಲೋಡ್ ಮಾಡಿಕೊಂಡು ಹಂಚಿಕೆಯಾದ ಕಾಲೇಜಿನಲ್ಲಿ ಪ್ರವೇಶ ಪಡೆಯಲು ಅಕ್ಟೋಬರ್ 8ರವರೆಗೆ ಅವಕಾಶ ನೀಡಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಮೊದಲ ಸುತ್ತಿನ ಅಭ್ಯರ್ಥಿಗಳಿಗೆ ಪರಿಷ್ಕೃತ ಗಡುವು
- ಶುಲ್ಕ ಪಾವತಿ: ಅಕ್ಟೋಬರ್ 7.
- ಸೀಟು ಖಾತರಿ ಚೀಟಿ ಡೌನ್ಲೋಡ್ ಮಾಡಿಕೊಂಡು ಕಾಲೇಜಿನಲ್ಲಿ ಪ್ರವೇಶ ಪಡೆಯಲು: ಅಕ್ಟೋಬರ್ 8.
ಈ ವಿಸ್ತರಣೆ ಮೊದಲ ಸುತ್ತಿನಲ್ಲಿ ಈಗಾಗಲೇ ಸೀಟು ಹಂಚಿಕೆಯಾಗಿರುವ ಅಭ್ಯರ್ಥಿಗಳಿಗೆ ಅನ್ವಯಿಸುತ್ತದೆ.
