ಕಡತ ಚಿತ್ರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ.
ಬೆಂಗಳೂರು: ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆಯ ವಿವಿಧ ವಿಷಯಗಳ ಒಟ್ಟು 814 ಉಪನ್ಯಾಸಕರ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಅಧಿಸೂಚನೆ ಹೊರಡಿಸಿದೆ.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 25 ಹಾಗೂ ಶುಲ್ಕ ಪಾವತಿಸಲು ಡಿಸೆಂಬರ್ 26 ಕೊನೆಯ ದಿನ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಒಟ್ಟು 814 ಹುದ್ದೆಗಳಲ್ಲಿ ಉಳಿಕೆ ಮೂಲ ವೃಂದದ 778 ಹಾಗೂ ಕಲ್ಯಾಣ ಕರ್ನಾಟಕ ವೃಂದದ 36 ಹುದ್ದೆಗಳು ಸೇರಿವೆ. ಸ್ನಾತಕೋತ್ತರ ಪದವಿ ಜತೆಗೆ ಬಿ.ಇಡಿ ಮಾಡಿರುವವರು ಅರ್ಜಿ ಸಲ್ಲಿಸಲು ಅರ್ಹರು. ಮಾರ್ಚ್ ತಿಂಗಳಲ್ಲಿ ಲಿಖಿತ ಪರೀಕ್ಷೆ ನಡೆಯಲಿದೆ ಎಂದು ಪ್ರಸನ್ನ ತಿಳಿಸಿದ್ದಾರೆ.
ವಿಷಯವಾರು ಹುದ್ದೆಗಳ ವಿವರ ಹೀಗಿದೆ.
| ವಿಷಯ | ಹುದ್ದೆಗಳು |
|---|---|
| ಕನ್ನಡ | 89 |
| ಇಂಗ್ಲಿಷ್ | 145 |
| ಇತಿಹಾಸ | 50 |
| ಅರ್ಥಶಾಸ್ತ್ರ | 90 |
| ರಾಜ್ಯಶಾಸ್ತ್ರ | 25 |
| ಸಮಾಜಶಾಸ್ತ್ರ | 25 |
| ಭೂಗೋಳ ಶಾಸ್ತ್ರ | 10 |
| ವಾಣಿಜ್ಯ ಶಾಸ್ತ್ರ | 150 |
| ಭೌತಶಾಸ್ತ್ರ | 30 |
| ರಸಾಯನಶಾಸ್ತ್ರ | 30 |
| ಗಣಿತ | 30 |
| ಜೀವಶಾಸ್ತ್ರ | 30 |
| ಕಂಪ್ಯೂಟರ್ ಸೈನ್ಸ್ | 110 |
| ಒಟ್ಟು | 814 |
ಅರ್ಹರು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬೇಕು; ಶೈಕ್ಷಣಿಕ ಅರ್ಹತೆ ಸೇರಿದಂತೆ ಇತರ ಹೆಚ್ಚಿನ ವಿವರಗಳಿಗೆ ಕೆಇಎ ವೆಬ್‌ಸೈಟ್ ನೋಡುವಂತೆ ಪ್ರಸನ್ನ ಸಲಹೆ ನೀಡಿದ್ದಾರೆ.
ಇದನ್ನೂ ಓದಿ:
