Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ವಸತಿ ಶಾಲಾ ಶಿಕ್ಷಕರು, ವಾರ್ಡರ್ ಹುದ್ದೆಗಳ ಪರೀಕ್ಷೆ ನ.27ರಿಂದ 30ರವರೆಗೆ; ಕ್ಯೂ ಆರ್ ಕೋಡ್ ಮೂಲಕ ಅಭ್ಯರ್ಥಿಗಳ ತಪಾಸಣೆ
  • ಕರ್ನಾಟಕ

ವಸತಿ ಶಾಲಾ ಶಿಕ್ಷಕರು, ವಾರ್ಡರ್ ಹುದ್ದೆಗಳ ಪರೀಕ್ಷೆ ನ.27ರಿಂದ 30ರವರೆಗೆ; ಕ್ಯೂ ಆರ್ ಕೋಡ್ ಮೂಲಕ ಅಭ್ಯರ್ಥಿಗಳ ತಪಾಸಣೆ

The Bengaluru Live November 26, 2026 6:22 PM
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಹೆಸರಿನ ಫಲಕ ಮತ್ತು ಲಾಂಛನದ ಮುಂದೆ ತಮ್ಮ ಮೇಜಿನ ಬಳಿ ಮಾತನಾಡುತ್ತಿರುವ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ

ಕಡತ ಚಿತ್ರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ.

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು: ರಾಜ್ಯದ ವಸತಿ ಶಾಲಾ ಶಿಕ್ಷಕರ ನೇಮಕಾತಿ ಸಂಬಂಧ ಉಳಿಕೆ ಮೂಲ ವೃಂದದ ವಿವಿಧ ವಿಷಯಗಳ ಲಿಖಿತ ಪರೀಕ್ಷೆಗಳು ನ.27ರಿಂದ 30ರವರೆಗೆ ನಡೆಯುತ್ತಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ.

ನ.27ರಂದು ಬೆಂಗಳೂರು, ಕಲಬುರಗಿ ಹಾಗೂ ಮೈಸೂರು ನಗರಗಳಲ್ಲಿ ಪರೀಕ್ಷೆ ನಡೆಯಲಿದೆ. ಕಂಪ್ಯೂಟರ್ ಶಿಕ್ಷಕರ 57 ಹುದ್ದೆಗಳಿಗೆ ಒಟ್ಟು 27,933 ಮಂದಿ ಅರ್ಜಿ ಸಲ್ಲಿಸಿದ್ದು, ಬೆಳಿಗ್ಗೆ 10.30ರಿಂದ ಮಧ್ಯಾಹ್ನ 12.30ರವರೆಗೆ ಪರೀಕ್ಷೆ ನಡೆಯಲಿದೆ. ಗಣಿತ ಶಿಕ್ಷಕರ 103 ಹುದ್ದೆಗೆ 18,891 ಮಂದಿ ಹಾಗೂ ಹಿಂದಿ ಶಿಕ್ಷಕರ 55 ಹುದ್ದೆಗಳಿಗೆ 1,479 ಮಂದಿ ಅರ್ಜಿ ಸಲ್ಲಿಸಿದ್ದಾರೆ. ಈ ಎರಡೂ ವಿಷಯಗಳಿಗೆ ಮಧ್ಯಾಹ್ನ 2.30ರಿಂದ 4.30ರವರೆಗೆ ಪರೀಕ್ಷೆ ನಡೆಯಲಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಅವರು ವಿವರಿಸಿದ್ದಾರೆ.

ನ.28ರಂದು ಕಲ್ಯಾಣ ಕರ್ನಾಟಕ ವೃಂದದ ಕಾರಾಗೃಹ ಇಲಾಖೆಯ ಐದು ಜೈಲರ್ ಹಾಗೂ 275 ವಾರ್ಡರ್ ಹುದ್ದೆಗಳಿಗೆ ಬಳ್ಳಾರಿ, ದಾವಣಗೆರೆ ಮತ್ತು ಕಲಬುರಗಿ ನಗರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

ಬೆಂಗಳೂರು, ಮೈಸೂರು ಮತ್ತು ಕಲಬುರಗಿಯಲ್ಲಿ 108 ಇಂಗ್ಲಿಷ್ ಶಿಕ್ಷಕರು ಹಾಗೂ 81 ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳಿಗೆ ನ.29ರಂದು ಲಿಖಿತ ಪರೀಕ್ಷೆ ನಡೆಯಲಿದೆ. ನ.30ರಂದು ಸಮಾಜ ವಿಜ್ಞಾನ ಶಿಕ್ಷಕರ 154 ಹುದ್ದೆಗಳಿಗೆ ಬೆಂಗಳೂರು ಮತ್ತು ಬಳ್ಳಾರಿಯಲ್ಲಿ ಪರೀಕ್ಷೆ ನಡೆಯಲಿದೆ ಎಂದು ಹೇಳಿದರು.

ಕ್ಯೂ ಆರ್ ಕೋಡ್ ಮೂಲಕ ಅಭ್ಯರ್ಥಿಗಳ ನೈಜತೆ ಪರಿಶೀಲನೆ: ನ.27ರಿಂದ 30ರವರೆಗೆ ನಡೆಯುವ ಎಲ್ಲ ಪರೀಕ್ಷೆಗಳಲ್ಲೂ ಅಭ್ಯರ್ಥಿಗಳನ್ನು ಪರೀಕ್ಷಾ ಮೇಲ್ವಿಚಾರಕರೇ ಕ್ಯೂ ಆರ್ ಕೋಡ್ ಮೂಲಕ ತಪಾಸಣೆ ನಡೆಸಿ, ನೈಜತೆಯನ್ನು ಖಾತರಿಪಡಿಸಿಕೊಳ್ಳಲಿದ್ದಾರೆ ಎಂದು ಪ್ರಸನ್ನ ತಿಳಿಸಿದ್ದಾರೆ.

ಇದುವರೆಗೂ ಮುಖ ಚಹರೆ ಪತ್ತೆ ತಂತ್ರಜ್ಞಾನದ ಮೂಲಕ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿಗಳೇ ಅಭ್ಯರ್ಥಿಗಳನ್ನು ಪರಿಶೀಲಿಸಿ ನಂತರ ಒಳಗೆ ಬಿಡುತ್ತಿದ್ದರು. ಇದರಿಂದ ಸ್ವಲ್ಪ ತಡವೂ ಆಗುತ್ತಿತ್ತು. ಹೀಗಾಗಿ ಕೆಇಎ ಸಿದ್ಧಪಡಿಸಿರುವ ಕ್ಯೂ ಆರ್ ಕೋಡ್ ಮೂಲಕ ಶಿಕ್ಷಕರೇ ಅಭ್ಯರ್ಥಿಗಳ ಭಾವಚಿತ್ರ ತೆಗೆದು, ನೈಜತೆ ಪರಿಶೀಲಿಸಲಿದ್ದಾರೆ. ಇತ್ತೀಚೆಗೆ ಕೊಠಡಿಗೆ ಇಬ್ಬರು ಮೇಲ್ವಿಚಾರಕರನ್ನು ನಿಯೋಜಿಸಿದ್ದು, ಅವರಲ್ಲಿ ಒಬ್ಬರು ಮೊದಲ ಬೆಲ್ ಆಗುವವರೆಗೆ ಅಭ್ಯರ್ಥಿಗಳ ನೈಜತೆ ನೋಡಲಿದ್ದಾರೆ ಎಂದು ಅವರು ವಿವರಿಸಿದ್ದಾರೆ.

ಇದೊಂದು ಪ್ರಾಯೋಗಿಕ ಕ್ರಮವಾಗಿದ್ದು, ಅದರ ಕಾರ್ಯಕ್ಷಮತೆ ನೋಡಿಕೊಂಡು ಇತರ ಪರೀಕ್ಷೆಗಳಿಗೂ ವಿಸ್ತರಿಸಲಾಗುವುದು ಎಂದು ಹೇಳಿದರು.

ಇದನ್ನೂ ಓದಿ:

  • ಸಾಮಾನ್ಯ ಜ್ಞಾನ ಪ್ರಶ್ನೆ ಪತ್ರಿಕೆಯಲ್ಲಿ ಯಾವುದೇ ಲೋಪವಾಗಿಲ್ಲ: ಕೆಇಎ
  • ಪರೀಕ್ಷೆ ಮುಗಿದ 4 ಗಂಟೆಯಲ್ಲೇ ಕೀ ಉತ್ತರ ಪ್ರಕಟಿಸಿದ ಕೆಇಎ

About the Author

The Bengaluru Live

Administrator

Visit Website View All Posts

Post navigation

Previous: ಸಕಲ ಮರಾಠಾ ಸಮಾಜ ಕರ್ನಾಟಕದಿಂದ ಎರಡು ಪ್ರಶಸ್ತಿ, ನೋಂದಣಿ ಆ್ಯಪ್; 2027ರ ಫೆಬ್ರವರಿಯಲ್ಲಿ 150 ಸಾಧಕರಿಗೆ ಸನ್ಮಾನ
Next: ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಕಾರ್ಯತಂತ್ರ: ಎನ್‌ಡಿಎ ಸಭೆ ಬಳಿಕ ಬಿ.ವೈ. ವಿಜಯೇಂದ್ರ

Related Stories

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಹೆಸರಿನ ಫಲಕ ಮತ್ತು ಲಾಂಛನದ ಮುಂದೆ ತಮ್ಮ ಮೇಜಿನ ಬಳಿ ಮಾತನಾಡುತ್ತಿರುವ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ
  • ಕರ್ನಾಟಕ

ಪಿಜಿ ಮೆಡಿಕಲ್ ಎರಡನೇ ಸುತ್ತಿನ ಅಂತಿಮ ಸೀಟು ಹಂಚಿಕೆ ಫಲಿತಾಂಶ ಪ್ರಕಟ; 3,532 ಮಂದಿಗೆ ಸೀಟು

The Bengaluru Live November 26, 2026 7:07 PM
ರಾಜೇಂದರ್ ಕುಮಾರ್ ಕಟಾರಿಯಾ
  • ಕರ್ನಾಟಕ

ರಾಜೇಂದರ್ ಕುಮಾರ್ ಕಟಾರಿಯಾ ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ವರ್ಗ

The Bengaluru Live November 26, 2026 6:39 PM
ವರ್ಚುವಲ್ ಸಭೆಯಲ್ಲಿ ಸಮ್ಮೇಳನ ಮೇಜಿನ ಬಳಿ ಕುಳಿತಿರುವ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್
  • ಕರ್ನಾಟಕ

ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್‌ಗೆ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಹೆಚ್ಚುವರಿ ಹೊಣೆ

The Bengaluru Live November 26, 2026 6:38 PM

Latest Post

ಉತ್ತರಹಳ್ಳಿ, ವಡ್ಡರಪಾಳ್ಯ, ದ್ವಾರಕಾನಗರ ಸೇರಿ ಹಲವೆಡೆ ನ.30ರಂದು ವಿದ್ಯುತ್ ವ್ಯತ್ಯಯ: ಬೆಸ್ಕಾಂ ಬೆಂಗಳೂರಿನ ಬೆಸ್ಕಾಂ ಕಾರ್ಪೊರೇಟ್ ಕಚೇರಿಯ ಫೈಲ್ ಚಿತ್ರ
  • ಬೆಂಗಳೂರು ನಗರ

ಉತ್ತರಹಳ್ಳಿ, ವಡ್ಡರಪಾಳ್ಯ, ದ್ವಾರಕಾನಗರ ಸೇರಿ ಹಲವೆಡೆ ನ.30ರಂದು ವಿದ್ಯುತ್ ವ್ಯತ್ಯಯ: ಬೆಸ್ಕಾಂ

November 26, 2026 7:30 PM
ಅಸಮರ್ಪಕ ತ್ಯಾಜ್ಯ ನಿರ್ವಹಣೆ, ಏಕಬಳಕೆ ಪ್ಲಾಸ್ಟಿಕ್ ವಿರುದ್ಧ ಕಾರ್ಯಾಚರಣೆ: ಬೆಂಗಳೂರು ದಕ್ಷಿಣ ನಗರ ಪಾಲಿಕೆಯಿಂದ 39,800 ರೂ. ದಂಡ ತ್ಯಾಜ್ಯ ನಿರ್ವಹಣೆ ಮತ್ತು ಏಕಬಳಕೆ ಪ್ಲಾಸ್ಟಿಕ್ ವಿರುದ್ಧ ಕಾರ್ಯಾಚರಣೆ ವೇಳೆ ವಿಂಗಡಿಸಿದ ಕಸದ ಚೀಲಗಳೊಂದಿಗೆ ಬೆಂಗಳೂರು ದಕ್ಷಿಣ ನಗರ ಪಾಲಿಕೆ ಅಧಿಕಾರಿಗಳು
  • ಬೆಂಗಳೂರು ನಗರ

ಅಸಮರ್ಪಕ ತ್ಯಾಜ್ಯ ನಿರ್ವಹಣೆ, ಏಕಬಳಕೆ ಪ್ಲಾಸ್ಟಿಕ್ ವಿರುದ್ಧ ಕಾರ್ಯಾಚರಣೆ: ಬೆಂಗಳೂರು ದಕ್ಷಿಣ ನಗರ ಪಾಲಿಕೆಯಿಂದ 39,800 ರೂ. ದಂಡ

November 26, 2026 7:25 PM
ಪಿಜಿ ಮೆಡಿಕಲ್ ಎರಡನೇ ಸುತ್ತಿನ ಅಂತಿಮ ಸೀಟು ಹಂಚಿಕೆ ಫಲಿತಾಂಶ ಪ್ರಕಟ; 3,532 ಮಂದಿಗೆ ಸೀಟು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಹೆಸರಿನ ಫಲಕ ಮತ್ತು ಲಾಂಛನದ ಮುಂದೆ ತಮ್ಮ ಮೇಜಿನ ಬಳಿ ಮಾತನಾಡುತ್ತಿರುವ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ
  • ಕರ್ನಾಟಕ

ಪಿಜಿ ಮೆಡಿಕಲ್ ಎರಡನೇ ಸುತ್ತಿನ ಅಂತಿಮ ಸೀಟು ಹಂಚಿಕೆ ಫಲಿತಾಂಶ ಪ್ರಕಟ; 3,532 ಮಂದಿಗೆ ಸೀಟು

November 26, 2026 7:07 PM
ರಾಜೇಂದರ್ ಕುಮಾರ್ ಕಟಾರಿಯಾ ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ವರ್ಗ ರಾಜೇಂದರ್ ಕುಮಾರ್ ಕಟಾರಿಯಾ
  • ಕರ್ನಾಟಕ

ರಾಜೇಂದರ್ ಕುಮಾರ್ ಕಟಾರಿಯಾ ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ವರ್ಗ

November 26, 2026 6:39 PM
ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್‌ಗೆ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಹೆಚ್ಚುವರಿ ಹೊಣೆ ವರ್ಚುವಲ್ ಸಭೆಯಲ್ಲಿ ಸಮ್ಮೇಳನ ಮೇಜಿನ ಬಳಿ ಕುಳಿತಿರುವ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್
  • ಕರ್ನಾಟಕ

ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್‌ಗೆ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಹೆಚ್ಚುವರಿ ಹೊಣೆ

November 26, 2026 6:38 PM
ಅಂಜುಂ ಪರ್ವೇಜ್ ಕಂದಾಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ವರ್ಗ; ಲೋಕೋಪಯೋಗಿ ಇಲಾಖೆಯ ಹೆಚ್ಚುವರಿ ಹೊಣೆ ಅಂಜುಂ ಪರ್ವೇಜ್‌ಗೆ ಅರಣ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆ
  • ಕರ್ನಾಟಕ

ಅಂಜುಂ ಪರ್ವೇಜ್ ಕಂದಾಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ವರ್ಗ; ಲೋಕೋಪಯೋಗಿ ಇಲಾಖೆಯ ಹೆಚ್ಚುವರಿ ಹೊಣೆ

November 26, 2026 6:37 PM

ನೀವು ತಪ್ಪಿಸಿಕೊಂಡಿರಬಹುದು

ಬೆಂಗಳೂರಿನ ಬೆಸ್ಕಾಂ ಕಾರ್ಪೊರೇಟ್ ಕಚೇರಿಯ ಫೈಲ್ ಚಿತ್ರ
  • ಬೆಂಗಳೂರು ನಗರ

ಉತ್ತರಹಳ್ಳಿ, ವಡ್ಡರಪಾಳ್ಯ, ದ್ವಾರಕಾನಗರ ಸೇರಿ ಹಲವೆಡೆ ನ.30ರಂದು ವಿದ್ಯುತ್ ವ್ಯತ್ಯಯ: ಬೆಸ್ಕಾಂ

The Bengaluru Live November 26, 2026 7:30 PM
ತ್ಯಾಜ್ಯ ನಿರ್ವಹಣೆ ಮತ್ತು ಏಕಬಳಕೆ ಪ್ಲಾಸ್ಟಿಕ್ ವಿರುದ್ಧ ಕಾರ್ಯಾಚರಣೆ ವೇಳೆ ವಿಂಗಡಿಸಿದ ಕಸದ ಚೀಲಗಳೊಂದಿಗೆ ಬೆಂಗಳೂರು ದಕ್ಷಿಣ ನಗರ ಪಾಲಿಕೆ ಅಧಿಕಾರಿಗಳು
  • ಬೆಂಗಳೂರು ನಗರ

ಅಸಮರ್ಪಕ ತ್ಯಾಜ್ಯ ನಿರ್ವಹಣೆ, ಏಕಬಳಕೆ ಪ್ಲಾಸ್ಟಿಕ್ ವಿರುದ್ಧ ಕಾರ್ಯಾಚರಣೆ: ಬೆಂಗಳೂರು ದಕ್ಷಿಣ ನಗರ ಪಾಲಿಕೆಯಿಂದ 39,800 ರೂ. ದಂಡ

The Bengaluru Live November 26, 2026 7:25 PM
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಹೆಸರಿನ ಫಲಕ ಮತ್ತು ಲಾಂಛನದ ಮುಂದೆ ತಮ್ಮ ಮೇಜಿನ ಬಳಿ ಮಾತನಾಡುತ್ತಿರುವ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ
  • ಕರ್ನಾಟಕ

ಪಿಜಿ ಮೆಡಿಕಲ್ ಎರಡನೇ ಸುತ್ತಿನ ಅಂತಿಮ ಸೀಟು ಹಂಚಿಕೆ ಫಲಿತಾಂಶ ಪ್ರಕಟ; 3,532 ಮಂದಿಗೆ ಸೀಟು

The Bengaluru Live November 26, 2026 7:07 PM
ರಾಜೇಂದರ್ ಕುಮಾರ್ ಕಟಾರಿಯಾ
  • ಕರ್ನಾಟಕ

ರಾಜೇಂದರ್ ಕುಮಾರ್ ಕಟಾರಿಯಾ ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ವರ್ಗ

The Bengaluru Live November 26, 2026 6:39 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಉತ್ತರಹಳ್ಳಿ, ವಡ್ಡರಪಾಳ್ಯ, ದ್ವಾರಕಾನಗರ ಸೇರಿ ಹಲವೆಡೆ ನ.30ರಂದು ವಿದ್ಯುತ್ ವ್ಯತ್ಯಯ: ಬೆಸ್ಕಾಂ
  • ಅಸಮರ್ಪಕ ತ್ಯಾಜ್ಯ ನಿರ್ವಹಣೆ, ಏಕಬಳಕೆ ಪ್ಲಾಸ್ಟಿಕ್ ವಿರುದ್ಧ ಕಾರ್ಯಾಚರಣೆ: ಬೆಂಗಳೂರು ದಕ್ಷಿಣ ನಗರ ಪಾಲಿಕೆಯಿಂದ 39,800 ರೂ. ದಂಡ
  • ಪಿಜಿ ಮೆಡಿಕಲ್ ಎರಡನೇ ಸುತ್ತಿನ ಅಂತಿಮ ಸೀಟು ಹಂಚಿಕೆ ಫಲಿತಾಂಶ ಪ್ರಕಟ; 3,532 ಮಂದಿಗೆ ಸೀಟು
  • ರಾಜೇಂದರ್ ಕುಮಾರ್ ಕಟಾರಿಯಾ ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ವರ್ಗ
©Copyright 2025 The Bengaluru Live All rights reserved. | MoreNews by AF themes.