ಐದೇ ದಿನದಲ್ಲಿ ಕಾನ್ಸ್ಟೇಬಲ್ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟಿಸಿದ ಕೆಇಎ; ಸೆ.27ರವರೆಗೆ ಆಕ್ಷೇಪಣೆಗೆ ಅವಕಾಶ
ಬೆಂಗಳೂರು: ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿನ 218 ಕಿರಿಯ ಎಂಜಿನಿಯರ್ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ನವೆಂಬರ್ 26 ಹಾಗೂ ಶುಲ್ಕ ಪಾವತಿಸಲು ನವೆಂಬರ್ 27 ಕೊನೆಯ ದಿನವಾಗಿದೆ.
ಉಳಿಕೆ ಮೂಲ ವೃಂದದಲ್ಲಿ 187 ಹಾಗೂ ಕಲ್ಯಾಣ ಕರ್ನಾಟಕ ವೃಂದದಲ್ಲಿ 31 ಹುದ್ದೆಗಳಿವೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.
ವಿದ್ಯಾರ್ಹತೆ ಮತ್ತು ಪರೀಕ್ಷಾ ವೇಳಾಪಟ್ಟಿ
ಡಿಪ್ಲೊಮಾ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಲಿಖಿತ ಪರೀಕ್ಷೆ ಜನವರಿಯಲ್ಲಿ ನಡೆಯಲಿದ್ದು, ಕನ್ನಡ ಭಾಷಾ ಪರೀಕ್ಷೆಯನ್ನು ಜನವರಿ 8ರಂದು ನಡೆಸಲಾಗುವುದು.
ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ), ಕೆಎಚ್ಬಿ, ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ, ಅಂತರ್ಜಲ ನಿರ್ದೇಶನಾಲಯ, ಕರ್ನಾಟಕ ರಾಜ್ಯ ಖನಿಜ ನಿಗಮ ಹಾಗೂ ರಾಜ್ಯದ ಕೊಳೆಗೇರಿ ಅಭಿವೃದ್ಧಿ ಸಂಸ್ಥೆಯಲ್ಲಿನ ಕಿರಿಯ ಎಂಜಿನಿಯರ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
ನಗರಾಭಿವೃದ್ಧಿ ಪ್ರಾಧಿಕಾರಗಳು ಹಾಗೂ ನಗರ ಮತ್ತು ಗ್ರಾಮಾಂತರ ಯೋಜನಾ ಆಯುಕ್ತಾಲಯದಲ್ಲಿನ ಸಹಾಯಕ ನಗರ ಯೋಜಕರ ಹುದ್ದೆಗಳನ್ನೂ ಪ್ರಕಟಣೆ ಉಲ್ಲೇಖಿಸಿದೆ.
ನೇಮಕಾತಿಯ ವಿವರಗಳಿಗಾಗಿ ಕೆಇಎ ಜಾಲತಾಣವನ್ನು ಪರಿಶೀಲಿಸುವಂತೆ ಪ್ರಸನ್ನ ಅಭ್ಯರ್ಥಿಗಳಿಗೆ ಸಲಹೆ ನೀಡಿದ್ದಾರೆ.
