ಹಾಸನ:
ಕೆಂಪೇಗೌಡ ಒಂದು ಜಾತಿ, ಸಮುದಾಯಕ್ಕೆ ಸೀಮಿತವಾದ ವ್ಯಕ್ತಿ ಅಲ್ಲ. ಅವರು ಇಡೀ ನಾಡಿನ ಒಲವು ಪಡೆದ ಮಹನೀಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಣ್ಣಿಸಿದ್ದಾರೆ.
ಹಾಸನದಲ್ಲಿ ಏರ್ಪಡಿಸಿದ್ದ ರಾಜ್ಯ ಮಟ್ಟದ ನಾಡ ಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು
ಬೆಂಗಳೂರು ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದರೆ ಅದಕ್ಕೆ ಕೆಂಪೇಗೌಡ ಅವರೇ ಮೂಲ ಕಾರಣ ಎಂದರು.
ಕೆಂಪೇಗೌಡ ಅವರು ದೂರದೃಷ್ಟಿ ಯಿಂದ ನಾಡು ಕಟ್ಟಿದ್ದಾರೆ .
ನಾಲ್ಕು ದಿಕ್ಕಿಗೂ ದ್ವಾರ ಮಾಡಿ ,ವೃತ್ತಿಗೊಂದು ಮಾರುಕಟ್ಟೆ ಸ್ಥಾಪಿಸಿ, ಕೆರೆ ಕಟ್ಟೆಗಳನ್ನು ಅಭಿವೃದ್ಧಿ ಮಾಡಿದ್ದರು ಎಂದರು.
ಮುಖ್ಯಮಂತ್ರಿ @siddaramaiah ಅವರು ಹಾಸನದಲ್ಲಿ ರಾಜ್ಯಮಟ್ಟದ ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ನಾಡಿನ ಜನತೆಗೆ ಶುಭ ಕೋರಿದರು.
— CM of Karnataka (@CMofKarnataka) June 27, 2023
ಆದಿ ಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧೀಶರಾದ ಶ್ರೀ ನಿರ್ಮಲಾನಂದ ಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಾದ ಕೆ.ಎನ್. ರಾಜಣ್ಣ, ಶಿವರಾಜ್ ತಂಗಡಗಿ,… pic.twitter.com/MKRsHn0F5g
ದೇಶ ಅಥವಾ ರಾಜ್ಯದ ಅಭಿವೃದ್ಧಿಗೆ ಉದ್ಯಮ ಸೃಷ್ಟಿಯಾಗಬೇಕು ಆಗ ಉದ್ಯೋಗ ಹೆಚ್ಚಿ ವ್ಯಾಪಾರಾಭಿವೃದ್ದಿಯಾಗುತ್ತದೆ ಎಂದರು.
ಇಂತಹ ಮಹನೀಯರು ಕೇವಲ ಜಾತಿ ವರ್ಗಗಳಿಗೆ ಸೀಮಿತವಾಗದೆ ಸಮಾಜದ ಸ್ವತ್ತಾಗಬೇಕು ಎಂಬುವ ಉದ್ದೇಶದಿಂದ ಇಂತಹ ಗಣ್ಯರ ಜಯಂತಿಯನ್ನು ಸರ್ಕಾರದ ವತಿಯಿಂದ ಆಯೋಜಿಸಲು ನಿರ್ಧಾರವನ್ನು ತಾವು ಹಿಂದಿನ ಅವಧಿಯಲ್ಲಿ ಮಾಡಿದ್ದಾಗಿ ಹೇಳಿದರು.
ಇದೇ ರೀತಿ ದೇವನಹಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಮ್ಮ ಸರ್ಕಾರದಲ್ಲಿ ನಾಡ ಪ್ರಭು ಕೆಂಪೇಗೌಡ ವಿಮಾನ ನಿಲ್ದಾಣ ಎಂದು ನಾಮಕರಣ ಮಾಡಲಾಯಿತು.
ಇದೇ ರೀತಿ ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಿ ಐದು ಎಕರೆ ಜಾಗ ನೀಡಲಾಯಿತು ಎಂದು ಹೇಳಿದರು.
ಇತಿಹಾಸ ಅರಿಯುವ ಮೂಲಕ ನಮ್ಮ ಭವಿಷ್ಯ ರೂಪಿಸಿಕೊಳ್ಳಬೇಕು. ಅದನ್ನು ತಿರುಚುವ ಕೆಲಸ ಮಾಡಬಾರದು ಎಂದು ಮುಖ್ಯ ಮಂತ್ರಿ ಹೇಳಿದರು.
ನಮ್ಮ ಸರ್ಕಾರ ನೀಡಿದ್ದ ಗ್ಯಾರಂಟಿ ಭರವಸೆಗಳನ್ನು ಜಾರಿಗೊಳಿಸಲಾಗುತ್ತಿದೆ. ಈಗಾಗಲೇ ಮಹಿಳೆಯರಿಗೆ ಬಸ್ ಪ್ರಯಾಣ ಉಚಿತವಾಗಿ ಮಾಡಲಾಗಿದೆ, ಜುಲೈ 1 ರಿಂದ ಗೃಹ ಜ್ಯೋತಿ ಜಾರಿಗೆ ತರಲಾಗುತ್ತಿದೆ.
1.28 ಕೋಟಿ ಕುಟುಂಬಗಳ ಯಜಮಾನಿಯರಿಗೆ ತಿಂಗಳಿಗೆ ತಲಾ 2000 ರೂ ನೀಡುವ ಗೃಹಲಕ್ಷ್ಮಿ ಯೋಜನೆ ಲಾಭ ಕೂಡ ತಲುಪಲಿದೆ ಎಂದರು.
ಅನ್ನ ಭಾಗ್ಯ ಯೋಜನೆ ಜಾರಿಗೆ ತೀರ್ಮಾನ
ಕೇಂದ್ರ ಸರ್ಕಾರ ಮೊದಲು ಅಕ್ಕಿ ಕೊಡುವುದಾಗಿ ಒಪ್ಪಿ ಈಗ ನಿರಾಕರಣೆ ಮಾಡುತ್ತಿದ್ದಾರೆ.ಏನೇ ಆಗಲಿ 10 ಕೆ.ಜಿ ಅಕ್ಕಿ ಕೊಟ್ಟೆ ಕೊಡುತ್ತೇವೆ.
ಯುವಕರಿಗೆ 24 ತಿಂಗಳು ನಿರುದ್ಯೋಗ ಭತ್ಯೆ ನೀಡಲಾಗುವುದು.
ಟೀಕೆಗಳಿಗೆ ಕಿವಿಕೊಡಬೇಡಿ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.