ಬೆಂಗಳೂರು:
ಬಿಬಿಎಂಪಿ ದಕ್ಷಿಣ ವಲಯ ವ್ಯಾಪ್ತಿಯಲ್ಲಿ ಖಾತಾಗೆ ಸಂಬಂಧಿಸಿದ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡುವ ಉದ್ದೇಶದಿಂದ ನಾಳೆಯಿಂದ (ದಿನಾಂಕ: 03-02-2023 ರಿಂದ 05-02-2023 ರವರೆಗೆ) ಖಾತಾ ಮೇಳವನ್ನು ಆಯೋಜಿಸಲಾಗಿದೆ ಎಂದು ದಕ್ಷಿಣ ವಲಯದ ವಲಯ ಆಯುಕ್ತರಾದ ಜಯರಾಮ್ ರಾಯಪುರ ರವರು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.


ದಕ್ಷಿಣ ವಲಯ ವ್ಯಾಪ್ತಿಯಲ್ಲಿ 317 ಅರ್ಜಿಗಳು ವಿಲೇವಾರಿಗೆ ಬಾಕಿಯಿದೆ. ಈ ಪೈಕಿ ದಕ್ಷಿಣ ವಲಯದ ಎಲ್ಲಾ ನಾಗರಿಕರು ಆಯಾ ಸಹಾಯಕ ಕಂದಾಯ ಅಧಿಕಾರಿಗಳ ಕಛೇರಿಗಳಿಗೆ ಭೇಟಿ ನೀಡಿ ಎಲ್ಲಾ ಅಗತ್ಯ ದಾಖಲಾತಿಗಳನ್ನು ಸಲ್ಲಿಸಿ, ತಮ್ಮ ಆಸ್ತಿಗಳಿಗೆ ಖಾತೆ ಹಾಗೂ ಖಾತೆಗೆ ಸಂಬಂಧಿಸಿದ ಎಲ್ಲಾ ಕೆಲಸನ್ನು ಪೂರ್ಣಗೊಳಿಸಿಕೊಳ್ಳಲು ಅವರು ಕೋರಿರುತ್ತಾರೆ.