Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕ್ರೀಡೆ
  • ಖೇಲೋ ಇಂಡಿಯಾ ಯುನಿವರ್ಸಿಟಿ ಗೇಮ್ಸ್ -2022 ರಾಷ್ಟ್ರಮಟ್ಟದಲ್ಲಿಯೇ ಅತ್ಯುತ್ತಮ ಸಂಘಟನಾ ಕ್ರೀಡಾಕೂಟ ಆಗಬೇಕು – ಡಾ. ಶಾಲಿನಿ ರಜನೀಶ್
  • ಕ್ರೀಡೆ
  • ಬೆಂಗಳೂರು ನಗರ

ಖೇಲೋ ಇಂಡಿಯಾ ಯುನಿವರ್ಸಿಟಿ ಗೇಮ್ಸ್ -2022 ರಾಷ್ಟ್ರಮಟ್ಟದಲ್ಲಿಯೇ ಅತ್ಯುತ್ತಮ ಸಂಘಟನಾ ಕ್ರೀಡಾಕೂಟ ಆಗಬೇಕು – ಡಾ. ಶಾಲಿನಿ ರಜನೀಶ್

The Bengaluru Live April 5, 2021 7:30 PM
ಖೇಲೋ ಇಂಡಿಯಾ ಯುನಿವರ್ಸಿಟಿ ಗೇಮ್ಸ್ -2022 ರಾಷ್ಟ್ರಮಟ್ಟದಲ್ಲಿಯೇ ಅತ್ಯುತ್ತಮ ಸಂಘಟನಾ ಕ್ರೀಡಾಕೂಟ ಆಗಬೇಕು – ಡಾ. ಶಾಲಿನಿ ರಜನೀಶ್

ಖೇಲೋ ಇಂಡಿಯಾ ಯುನಿವರ್ಸಿಟಿ ಗೇಮ್ಸ್ -2022 ರಾಷ್ಟ್ರಮಟ್ಟದಲ್ಲಿಯೇ ಅತ್ಯುತ್ತಮ ಸಂಘಟನಾ ಕ್ರೀಡಾಕೂಟ ಆಗಬೇಕು – ಡಾ. ಶಾಲಿನಿ ರಜನೀಶ್

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು:

ದೇಶಕ್ಕೆ ಮಾದರಿ ಆಗುವ ರೀತಿಯಲ್ಲಿ ಕ್ರೀಡಾಕೂಟ ನಡೆಯಬೇಕು. ಅದಕ್ಕೆ ಬೇಕಾದ ಸಿದ್ಧತೆ ಈಗಿನಿಂದಲೆ ಶುರುವಾಗಬೇಕು. ಸಂಪೂರ್ಣ ಕ್ರಿಯಾಯೊಜನೆ ಸಿದ್ದಪಡಿಸಿ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ನಾರಾಯಣಗೌಡ ಅವರು ನೀಡಿದ ಸೂಚನೆ ಹಿನ್ನೆಲೆಯಲ್ಲಿ ಖೇಲೋ ಇಂಡಿಯಾ ಯುನಿವರ್ಸಿಟಿ ಗೇಮ್ಸ್ ನ ಪೂರ್ವ ಸಿದ್ದತಾ ಸಭೆ ಇಂದು ನಡೆಸಲಾಯಿತು.

ಕೇಂದ್ರ ಕ್ರೀಡಾ ಮತ್ತು ಯುವ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಕಳೆದ ತಿಂಗಳು ಬೆಂಗಳೂರಿಗೆ ಆಗಮಿಸಿದ್ದ ವೇಳೆ ಖೇಲೋ ಇಂಡಿಯಾ ಯುನಿವರ್ಸಿಟಿ ಗೇಮ್ಸ್ ನ ಎರಡನೇ ಆವೃತ್ತಿ ಬೆಂಗಳೂರಿನಲ್ಲಿ ನಡೆಸುವುದಾಗಿ ಘೋಷಿಸಿದ್ದರು. ಅಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಯುವಸಬಲೀಕರಣ ಮತ್ತು ಕ್ರೀಡೆ ಸಚಿವ ಡಾ. ನಾರಾಯಣಗೌಡ ಅವರೊಂದಿಗೂ ಚರ್ಚೆ ನಡೆಸಿದ್ದರು. ಆ ಹಿನ್ನೆಲೆಯಲ್ಲಿ ಇಂದು ಪೂರ್ವ ಸಿದ್ಧತೆ ಸಭೆ ನಡೆಸಲಾಯಿತು.

ಬೆಂಗಳೂರಿನ ಹಾರೋಹಳ್ಳಿಯಲ್ಲಿರುವ ಜೈನ್ ವಿಶ್ವವಿದ್ಯಾನಿಲಯದಲ್ಲಿ ಸರ್ಕಾರದ ಅಪರಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರ ನೇತೃತ್ವದಲ್ಲಿ ಪೂರ್ವ ಸಿದ್ದತಾ ನಡೆಯಿತು. 2022 ರಲ್ಲಿ ಬೆಂಗಳೂರಿನಲ್ಲಿ ಖೇಲೋ ಇಂಡಿಯಾ ಯುನಿವರ್ಸಿಟಿ ಗೇಮ್ಸ್ ನಡೆಯಲಿದೆ. ರಾಷ್ಟ್ರಮಟ್ಟದಲ್ಲಿಯೇ ಅತ್ಯುತ್ತಮವಾದ ಸಂಘಟನಾ ಕ್ರೀಡಾಕೂಟ ಇದಾಗಬೇಕು. ಕ್ರೀಡೆ, ವಸತಿ, ಸಾರಿಗೆ ಸೇರಿದಂತೆ ಎಲ್ಲ ವಿಭಾಗದಲ್ಲೂ ಉತ್ಕೃಷ್ಟ ಮಟ್ಟದ ಸೇವೆ ನೀಡಬೇಕು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು. ಜೈನ್ ವಿವಿಯಲ್ಲಿಯೆ ವಿವಿಧ ಕ್ರೀಡೆಗೆ ಅವಕಾಶ ಇದೆ. ರಾಷ್ಟ್ರಮಟ್ಟದ ಕ್ರೀಡಾಕೂಟವಾಗಿರುವ ಕಾರಣ ಕೆಲವು ಕ್ರೀಡಾಂಗಣವನ್ನು ಉನ್ನತಮಟ್ಟಕ್ಕೆ ಏರಿಸಬೇಕು. ಕಂಠೀರವ ಕ್ರೀಡಾಂಗಣ ಸೇರಿದಂತೆ, ಬೇರೆ ಬೇರೆ ಕಡೆಗಳಲ್ಲಿ ಕ್ರೀಡಾಕೂಟ ಆಯೋಜನೆ ಬಗ್ಗೆ ಚರ್ಚಿಸಲಾಗಿದೆ. ಜೈನ್ ವಿವಿ ಉಪಕುಲಪತಿ ಡಾ. ಚೆನರಾಜ್ ರಾಯ್ಚಂದ್, ರಾಜ್ಯ ಸರ್ಕಾರದ ಸಹಕಾರದೊಂದಿಗೆ ಕ್ರೀಡಾಕೂಟ ಯಶಸ್ಸುಗೊಳಿಸುತ್ತೇವೆ. 8 ತಿಂಗಳ ಸಮಯಾವಕಾಶ ಮಾತ್ರ ಇದ್ದು, ಅಷ್ಟರೊಳಗೆ ಎಲ್ಲ ಸಿದ್ಧತೆ ಆಗಲಿದೆ ಎಂದು ಸಭೆಗೆ ಭರವಸೆ ನೀಡಿದರು. ಮೈದಾನವನ್ನು ಉನ್ನತೀಕರಣಗೊಳಸುವ ಕಾರ್ಯ ಸೇರಿದಂತೆ ಇನ್ನಿತರ ಕಾರ್ಯಗಳಿಗೆ ರಾಜ್ಯ ಸರ್ಕಾರದ ನೆರವನ್ನು ಜೈನ್ ವಿವಿ ಕೋರಿದ್ದು, ಪರಿಶೀಲಿಸಿ ಕ್ರಮ ತೆಗೆದುಕೊಳ್ಳುವುದಾಗಿ ಡಾ. ಶಾಲಿನಿ ರಜನೀಶ್ ಅವರು ತಿಳಿಸಿದರು.

Khelo India University Games 2022 should be best organizational sport in the country Dr. Shalini Rajneesh1

ಯಾವುದೇ ಕುಂದು ಕೊರತೆ ಇರದಂತೆ ಅಂತಾರಾಷ್ಟ್ರೀಯ ಗುಣಮಟ್ಟದ ವ್ಯವಸ್ಥೆ ಆಗಬೇಕು. ಸುಮಾರು ಎರಡು ವಾರಗಳ ಕಾಲ ಕ್ರೀಡಾಕೂಟ ನಡೆಯಲಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ನೇತೃತ್ವದಲ್ಲಿ ಜೈನ್ ಯುನಿವರ್ಸಿಟಿ ಸಹಭಾಗಿತ್ವದೊಂದಿಗೆ ಕ್ರೀಡಾಕೂಟ ನಡೆಯಲಿದೆ. ರಾಜ್ಯದಲ್ಲಿರುವ ಎಲ್ಲ ಕ್ರೀಡಾ ಸಂಸ್ಥೆಗಳ ಜೊತೆ ಸಭೆ ನಡೆಸಿ ಅಭೂತಪೂರ್ವವಾಗಿ ಕ್ರೀಡಾಕೂಟ ಆಯೋಜನೆ ಮಾಡಲು ಸಭೆಯಲ್ಲಿ ಚರ್ಚೆ ನಡೆಸಲಾಯಿತು.

ಪ್ರಮುಖವಾಗಿ ಕ್ರೀಡಾಕೂಟದ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲಾಗುತ್ತಿದೆ. 4 ಸಾವಿರಕ್ಕು ಹೆಚ್ಚು ಕ್ರೀಡಾಪಟುಗಳು ಆಗಮಿಸುತ್ತಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಕ್ರೀಡಾಕೂಟದ ವೀಕ್ಷಣೆಗೆ ಆಗಮಿಸುತ್ತಾರೆ. ಆದ್ದರಿಂದ ಊಟ, ವಸತಿ ಜೊತೆಗೆ ಮೂಲಭೂತ ಸೌಕರ್ಯ, ವಾಹನ ಪಾರ್ಕಿಂಗ್ ವ್ಯವಸ್ಥೆ ಎಲ್ಲವು ಸಮರೋಪಾದಿಯಲ್ಲಿ ಆಗಬೇಕು ಎಂದು ಡಾ ಶಾಲಿನಿ ರಜನೀಶ್ ಹೇಳಿದರು.

Khelo India University Games 2022 should be best organizational sport in the country Dr. Shalini Rajneesh2

ರಾಜ್ಯದ ಕ್ರೀಡಾಪ್ರತಿಭೆಗಳಿಗೆ ಇದೊಂದು ಉತ್ತಮ ವೇದಿಕೆಯಾಗಿದೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ಈ ಕ್ರೀಡಾಕೂಟದಲ್ಲಿ ಪಾಲ್ಗೊಂಡು ರಾಜ್ಯಕ್ಕೆ ಹೆಸರು ತರಬೇಕು. ಆ ನಿಟ್ಟಿನಲ್ಲಿ ಕ್ರೀಡಾಪಟುಗಳು ಈಗಿನಿಂದಲೆ ಸಿದ್ದತೆ ನಡೆಸಬೇಕು. ಅಲ್ಲದೆ ಉನ್ನತ ಶಿಕ್ಷಣ ಇಲಾಖೆ ಜೊತೆಯೂ ಚರ್ಚಿಸಲಾಗುವುದು ಎಂದು ಡಾ. ಶಾಲಿನಿ ರಜನೀಶ್ ಹೇಳಿದರು.

ಸಭೆ ಬಳಿಕ ವಿವಿ ಆವರಣದಲ್ಲಿರುವ ವಿವಿಧ ಕ್ರೀಡಾಂಗಣಗಳನ್ನು ವೀಕ್ಷಿಸಲಾಯಿತು.

About the Author

The Bengaluru Live

Administrator

Visit Website View All Posts

Post navigation

Previous: Covid-19: ನಿಯಮ ಪಾಲನೆಗೆ ಬಿಬಿಎಂಪಿಯಿಂದ 2,000 ಹೋಮ್ ಗಾರ್ಡ್ಸ್ ನಿಯೋಜನೆ
Next: ರಾಜ್ಯದಲ್ಲಿ ಟ್ರೈಟನ್ ವಿದ್ಯುತ್ ವಾಹನ ಸಂಸ್ಥೆ ಹೂಡಿಕೆಗೆ ಬೆಂಬಲ: ಬಿ.ಎಸ್.ಯಡಿಯೂರಪ್ಪ

Related Stories

ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜಂಕ್ಷನ್‌ನಲ್ಲಿ ನೀರು ನಿಂತ ರಸ್ತೆ ಮತ್ತು ನಿಧಾನವಾಗಿ ಸಾಗುತ್ತಿರುವ ವಾಹನಗಳು
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ

The Bengaluru Live November 24, 2026 10:00 PM
ಜಿಬಿಎ ಕೇಂದ್ರ ಕಚೇರಿಯಲ್ಲಿ ಓಎಫ್‌ಸಿ ಕೇಬಲ್ ಕುರಿತ ಸಭೆಯಲ್ಲಿ ಮಾತನಾಡುತ್ತಿರುವ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ

The Bengaluru Live November 24, 2026 9:49 PM
ಆರ್‌ಎಂವಿ 2ನೇ ಹಂತದಲ್ಲಿ ಸೀಲ್ ಮಾಡಿದ ವಾಣಿಜ್ಯ ಸಂಸ್ಥೆಯ ಗೇಟ್ ಮೇಲೆ ಜಾರಿ ನೋಟಿಸ್
  • ಬೆಂಗಳೂರು ನಗರ

ಆರ್‌ಎಂವಿ 2ನೇ ಹಂತದಲ್ಲಿ ವಸತಿ ಕಟ್ಟಡಗಳಲ್ಲಿ ನಡೆಯುತ್ತಿದ್ದ 15 ವಾಣಿಜ್ಯ ಸಂಸ್ಥೆಗಳಿಗೆ ಉತ್ತರ ನಗರ ಪಾಲಿಕೆಯಿಂದ ಸೀಲ್

The Bengaluru Live November 24, 2026 9:08 PM

Latest Post

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜಂಕ್ಷನ್‌ನಲ್ಲಿ ನೀರು ನಿಂತ ರಸ್ತೆ ಮತ್ತು ನಿಧಾನವಾಗಿ ಸಾಗುತ್ತಿರುವ ವಾಹನಗಳು
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ

November 24, 2026 10:00 PM
ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ ಜಿಬಿಎ ಕೇಂದ್ರ ಕಚೇರಿಯಲ್ಲಿ ಓಎಫ್‌ಸಿ ಕೇಬಲ್ ಕುರಿತ ಸಭೆಯಲ್ಲಿ ಮಾತನಾಡುತ್ತಿರುವ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ

November 24, 2026 9:49 PM
ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್ ಅಜಿನೊಮೊಟೊ ಪ್ರತಿನಿಧಿಗಳೊಂದಿಗೆ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್
  • ಕರ್ನಾಟಕ

ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್

November 24, 2026 9:28 PM
ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ ಜಪಾನ್ ಪ್ರವಾಸದ ವೇಳೆ ರೈಲಿನಲ್ಲಿ ಕುಳಿತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ

November 24, 2026 9:09 PM
ಆರ್‌ಎಂವಿ 2ನೇ ಹಂತದಲ್ಲಿ ವಸತಿ ಕಟ್ಟಡಗಳಲ್ಲಿ ನಡೆಯುತ್ತಿದ್ದ 15 ವಾಣಿಜ್ಯ ಸಂಸ್ಥೆಗಳಿಗೆ ಉತ್ತರ ನಗರ ಪಾಲಿಕೆಯಿಂದ ಸೀಲ್ ಆರ್‌ಎಂವಿ 2ನೇ ಹಂತದಲ್ಲಿ ಸೀಲ್ ಮಾಡಿದ ವಾಣಿಜ್ಯ ಸಂಸ್ಥೆಯ ಗೇಟ್ ಮೇಲೆ ಜಾರಿ ನೋಟಿಸ್
  • ಬೆಂಗಳೂರು ನಗರ

ಆರ್‌ಎಂವಿ 2ನೇ ಹಂತದಲ್ಲಿ ವಸತಿ ಕಟ್ಟಡಗಳಲ್ಲಿ ನಡೆಯುತ್ತಿದ್ದ 15 ವಾಣಿಜ್ಯ ಸಂಸ್ಥೆಗಳಿಗೆ ಉತ್ತರ ನಗರ ಪಾಲಿಕೆಯಿಂದ ಸೀಲ್

November 24, 2026 9:08 PM
11 ಶಾಸಕರಿಗೆ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ನಿಗಮ, ಮಂಡಳಿ, ಆಯೋಗಗಳ ಅಧ್ಯಕ್ಷ ಸ್ಥಾನ: ಸರ್ಕಾರ ಅಧಿಸೂಚನೆ ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕುಳಿತಿರುವ ಶಾಸಕರು
  • ಕರ್ನಾಟಕ
  • ರಾಜಕೀಯ

11 ಶಾಸಕರಿಗೆ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ನಿಗಮ, ಮಂಡಳಿ, ಆಯೋಗಗಳ ಅಧ್ಯಕ್ಷ ಸ್ಥಾನ: ಸರ್ಕಾರ ಅಧಿಸೂಚನೆ

November 24, 2026 8:23 PM

ನೀವು ತಪ್ಪಿಸಿಕೊಂಡಿರಬಹುದು

ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜಂಕ್ಷನ್‌ನಲ್ಲಿ ನೀರು ನಿಂತ ರಸ್ತೆ ಮತ್ತು ನಿಧಾನವಾಗಿ ಸಾಗುತ್ತಿರುವ ವಾಹನಗಳು
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ

The Bengaluru Live November 24, 2026 10:00 PM
ಜಿಬಿಎ ಕೇಂದ್ರ ಕಚೇರಿಯಲ್ಲಿ ಓಎಫ್‌ಸಿ ಕೇಬಲ್ ಕುರಿತ ಸಭೆಯಲ್ಲಿ ಮಾತನಾಡುತ್ತಿರುವ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ

The Bengaluru Live November 24, 2026 9:49 PM
ಅಜಿನೊಮೊಟೊ ಪ್ರತಿನಿಧಿಗಳೊಂದಿಗೆ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್
  • ಕರ್ನಾಟಕ

ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್

The Bengaluru Live November 24, 2026 9:28 PM
ಜಪಾನ್ ಪ್ರವಾಸದ ವೇಳೆ ರೈಲಿನಲ್ಲಿ ಕುಳಿತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ

The Bengaluru Live November 24, 2026 9:09 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ
  • ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ
  • ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್
  • ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ
©Copyright 2025 The Bengaluru Live All rights reserved. | MoreNews by AF themes.