Home ಅಪರಾಧ ಮಹಿಳೆಯ ಅಪಹರಣ ಪ್ರಕರಣ | ನಿರೀಕ್ಷಣಾ ಜಾಮೀನು ಕೋರಿ ಎಚ್.ಡಿ.ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ...

ಮಹಿಳೆಯ ಅಪಹರಣ ಪ್ರಕರಣ | ನಿರೀಕ್ಷಣಾ ಜಾಮೀನು ಕೋರಿ ಎಚ್.ಡಿ.ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಾಳೆಗೆ (ಮೇ.4) ಮುಂದೂಡಿಕೆ

20
0
HD Revanna

ಬೆಂಗಳೂರು : ಲೈಂಗಿಕ ಕಿರುಕುಳ ಆರೋಪದಲ್ಲಿ ದಾಖಲಾಗಿದ್ದ ಎಫ್​ಐಆರ್​ನಿಂದ ಬಂಧನ ಭೀತಿಯಿಂದ ನಿರಾಳಾಗಿದ್ದ ಮಾಜಿ ಸಚಿವ ಎಚ್​.ಡಿ.ರೇವಣ್ಣ ಮಹಿಳೆಯ ಅಪಹರಣ ಪ್ರಕರಣದಲ್ಲಿ ಮತ್ತೆ ನಿರೀಕ್ಷಣಾ ಜಾಮೀನು ಕೋರಿ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಕೆ.ಆರ್​.ನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿರುವ ರೇವಣ್ಣ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್​ ಗಜಾನನ ಭಟ್​ ಮುಂದಿನ ವಿಚಾರಣೆಯನ್ನು ಶನಿವಾರಕ್ಕೆ ಮುಂದೂಡಿದರು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, “ಕೆ.ಆರ್.ನಗರ ಠಾಣೆಯ ಎಫ್ಐಆರ್​ನ್ನು ಓದಿದರು. ಅಲ್ಲದೆ, ಈ ಎಫ್​ಐಆರ್​ನಲ್ಲಿ ಜಾಮೀನು ರಹಿತ ಸೆಕ್ಷನ್ ಗಳಿವೆ. ಆದರೆ, ದೂರಿನಲ್ಲಿ ನಾಮಪತ್ತೆಯಾಗಿರುವ ಮಹಿಳೆಯ ಹೆಸರನ್ನು ಉಲ್ಲೇಖಿಸಿಲ್ಲ. ಈ ಪ್ರಕರಣದಲ್ಲಿ ಬಂಧನ ಭೀತಿಯಿದ್ದು, ಅಲ್ಲದೆ, ಲೈಂಗಿಕ ಕಿರುಕುಳ ಆರೋಪದ ಪ್ರಕರಣದಲ್ಲಿ ಶನಿವಾರ ವಿಚಾರಣೆಗೆ ಹಾಜರಾಗಲು ಅರ್ಜಿದಾರರು ಸಿದ್ದರಿದ್ದಾರೆ. ಆದ್ದರಿಂದ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಬೇಕು” ಎಂದು ಮನವಿ ಮಾಡಿದರು.

ವಾದ ಆಲಿಸಿದ ನ್ಯಾಯಪೀಠ, ಎಸ್ಐಟಿ ಪರ ಎಸ್ ಪಿಪಿಗೆ ಕೋರ್ಟ್ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಶನಿವಾರಕ್ಕೆ ಮುಂದೂಡಿತು.

LEAVE A REPLY

Please enter your comment!
Please enter your name here