
ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಏಪ್ರಿಲ್ 2022 ರಲ್ಲಿ ನಂದಿನಿ ಹಾಲಿನ ಉತ್ಪನ್ನಗಳ ಭೇಟಿಯ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಜೊತೆಗಿದ್ದರು. ಪ್ರಾತಿನಿಧ್ಯ ಚಿತ್ರ
ಕಲಬುರಗಿ (ಸೇಡಂ):
ಹಾಲಿನ ದರ ಏರಿಕೆ ಬಗ್ಗೆ ಈ ತಿಂಗಳ 20ರ ನಂತರ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳದ ಅಧ್ಯಕ್ಷರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿ ತೀರ್ಮಾನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಿಳಿಸಿದರು.
ಅವರು ಇಂದು ಸೇಡಂನಲ್ಲಿ ಹಾಲಿನ ದರ ಪರಿಷ್ಕರಣೆ ಬಗ್ಗೆ ಮಾಧ್ಯಮವರಿಗೆ ಪ್ರತಿಕ್ರಿಯಿಸುತ್ತಾ, ಕಳೆದ ಹಲವಾರು ತಿಂಗಳಿನಿಂದ ಚರ್ಚೆಯಾಗುತ್ತಿದ್ದು, ಈ ತಿಂಗಳ 20ನೇ ತಾರೀಖಿನ ನಂತರ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳದ ಅಧ್ಯಕ್ಷರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದರು.
ಇದನ್ನೂ ಓದಿ: ಕರ್ನಾಟಕದಲ್ಲಿ ಕೆಎಂಎಫ್ ನಂದಿನಿ ಹಾಲು, ಮೊಸರು ದರ 3 ರೂ ಹೆಚ್ಚಳ