Home ಕರ್ನಾಟಕ ಸಾರಿಗೆ ಮುಷ್ಕರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಕಾರಣ: ಯಡಿಯೂರಪ್ಪ

ಸಾರಿಗೆ ಮುಷ್ಕರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಕಾರಣ: ಯಡಿಯೂರಪ್ಪ

100
0

ಬೆಂಗಳೂರು:

ರೈತ ಸಂಘದ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌ ದುರುದ್ದೇಶದಿಂದ ಕೆಲವು ಸಾರಿಗೆ ನೌಕರರನ್ನು ಎತ್ತಿಕಟ್ಟಿ ಮುಷ್ಕರ ನಡೆಸಲು ಕಾರಣರಾಗಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜ್ಯದ ವಿವಿಧೆಡೆ ಕೆ.ಎಸ್.ಆರ್.ಟಿ.ಸಿ. ಮತ್ತು ಬಿ.ಎಂ.ಟಿ.ಸಿ. ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆಸುವಂತೆ ಪ್ರಚೋದಿಸಿ ಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟ ಉಂಟಾಗಲು ಕೋಡಿಹಳ್ಳಿ ಚಂದ್ರಶೇಖರ್ ಕಾರಣಕರ್ತರಾಗಿರುತ್ತಾರೆ ಎಂದು‌ ಆರೋಪಿಸಿದ್ದಾರೆ.

ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಅವಶ್ಯಕ ಸೇವೆ ನೀಡುತ್ತಿರುವ ಸಾರಿಗೆ ಸಂಸ್ಥೆಯ ನೌಕರರು ಮುಷ್ಕರ ನಡೆಸುತ್ತಿರುವುದು ಅತ್ಯಂತ ದುರದುಷ್ಟಕರ. ಈ ಮುಷ್ಕರದಿಂದ ರಾಜ್ಯದೆಲ್ಲೆಡೆ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಹೇಳಿದ್ದಾರೆ.

ಸಾರಿಗೆ ಸಂಸ್ಥೆಯ ನೌಕರರ ಸಮಸ್ಯೆಗಳನ್ನು ಪ್ರಾಮಾಣಿಕವಾಗಿ ಬಗೆಹರಿಸಲು ಸಾರಿಗೆ ಇಲಾಖೆ ಜವಾಬ್ದಾರಿ ಹೊಂದಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಅವರು ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ನಿರಂತರವಾಗಿ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಕಲ್ಲುತೂರಾಟಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಪ್ರಚೋದನೆ ನೀಡಿದ್ದಾರೆ ಎಂದಿದ್ದಾರೆ.

ಮಾಜಿ ಮುಖ್ಯ ಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಬಗ್ಗೆ ಕೋಡಿಹಳ್ಳಿ ಚಂದ್ರಶೇಖರ್ ಅತ್ಯಂತ ಲಘುವಾಗಿ ಮಾತನಾಡಿರುವುದು ಕೂಡ ಖಂಡನೀಯ. ಸಾರ್ವಜನಿಕ ಹಿತದೃಷ್ಟಿಯಿಂದ ಕೂಡಲೇ ಸತ್ಯಾಗ್ರಹವನ್ನು ನಿಲ್ಲಿಸಿ ಕರ್ತವ್ಯಕ್ಕೆ ಮರಳಬೇಕು. ಅಲ್ಲದೇ ಸಮಸ್ಯೆಗಳ ಕುರಿತು ಸಾರಿಗೆ ಸಚಿವರ ಜೊತೆ ಚರ್ಚೆಗೆ ಬರುವಂತೆ ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here