Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • ಕೋಗಿಲು ಪ್ರಕರಣ: ಮನೆ ನೀಡಿದರೆ ನ್ಯಾಯಾಲಯದ ದಾರಿ, ರಾಜ್ಯಪಾಲರಿಗೆ ದೂರು – ಎಸ್.ಆರ್. ವಿಶ್ವನಾಥ್
  • ಬೆಂಗಳೂರು ನಗರ

ಕೋಗಿಲು ಪ್ರಕರಣ: ಮನೆ ನೀಡಿದರೆ ನ್ಯಾಯಾಲಯದ ದಾರಿ, ರಾಜ್ಯಪಾಲರಿಗೆ ದೂರು – ಎಸ್.ಆರ್. ವಿಶ್ವನಾಥ್

Kogilu case: If given a house, will go to court, complain to the Governor – S.R. Vishwanath
The Bengaluru Live January 1, 2026 8:45 PM 1 minute read
Kogilu case: If given a house, will go to court, complain to the Governor – S.R. Vishwanath

ಕೋಗಿಲು ಪ್ರಕರಣ: ಮನೆ ನೀಡಿದರೆ ನ್ಯಾಯಾಲಯದ ದಾರಿ, ರಾಜ್ಯಪಾಲರಿಗೆ ದೂರು – ಎಸ್.ಆರ್. ವಿಶ್ವನಾಥ್

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಜನವರಿ 5ರಂದು ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಬೃಹತ್ ಹೋರಾಟ

ಬೆಂಗಳೂರು: ಕೋಗಿಲು ಅಕ್ರಮ ಮನೆ–ಗುಡಿಸಲು ತೆರವು ಪ್ರಕರಣದಲ್ಲಿ ವಾಸಸ್ಥಳ ಕಳೆದುಕೊಂಡವರಿಗೆ ಸರ್ಕಾರ ಮನೆ ನೀಡಲು ಮುಂದಾದರೆ, ಅದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುವುದರ ಜೊತೆಗೆ ಮಾನ್ಯ ರಾಜ್ಯಪಾಲರಿಗೆ ದೂರು ನೀಡಲಾಗುವುದು ಎಂದು ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಎಚ್ಚರಿಕೆ ನೀಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಬಿಎಂಪಿಗೆ ಸೇರಿದ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಗುಡಿಸಲು ನಿರ್ಮಾಣ ಮಾಡಲಾಗಿತ್ತು. ಆದರೆ ಸರ್ಕಾರ ಈಗ ಅಕ್ರಮವಾಗಿ ವಾಸಿಸಿದ್ದವರಿಗೆ ಪರ್ಯಾಯ ಮನೆ ನೀಡುವ ಮೂಲಕ ನ್ಯಾಯಸಮ್ಮತ ವಸತಿ ನೀತಿಗೆ ಭಾರೀ ಹೊಡೆತ ನೀಡುತ್ತಿದೆ ಎಂದು ಆರೋಪಿಸಿದರು.

“ಇಂದು ನಿಜವಾದ ಫಲಾನುಭವಿಯೊಬ್ಬ ಮನೆ ಪಡೆಯಬೇಕಾದರೆ ಕನಿಷ್ಠ ₹10.5 ಲಕ್ಷ ಹಣ ಕಟ್ಟಬೇಕು. ಬ್ಯಾಂಕ್ ಸಾಲ ಅಥವಾ ಸ್ವಂತ ಹಣದಿಂದ ಇದನ್ನು ಭರಿಸಬೇಕಾಗುತ್ತದೆ. ಆದರೆ ಕೋಗಿಲು ಪ್ರಕರಣದಲ್ಲಿ ಬಿಬಿಎಂಪಿಯಿಂದ ₹5 ಲಕ್ಷ, ಅಲ್ಪಸಂಖ್ಯಾತ ಇಲಾಖೆಯಿಂದ ₹2.5 ಲಕ್ಷ, ಇತರ ಸಬ್ಸಿಡಿಗಳನ್ನು ಸೇರಿಸಿ ಕೇವಲ ₹2.5 ಲಕ್ಷಕ್ಕೆ ಮನೆ ಕೊಡುತ್ತೇವೆ ಎನ್ನುವುದು ಸಂಪೂರ್ಣ ಅಸಮಾನತೆ. ಹೀಗಾದರೆ ಈಗ ನಿರ್ಮಾಣವಾಗುತ್ತಿರುವ ಒಂದು ಲಕ್ಷ ಮನೆಗಳ ಯೋಜನೆ ಸಂಪೂರ್ಣ ಕುಸಿಯುತ್ತದೆ. ಬೆಂಗಳೂರು ಸುತ್ತಮುತ್ತ ನಿರ್ಮಾಣವಾಗುತ್ತಿರುವ ಸುಮಾರು **45 ಸಾವಿರ ಮನೆಗಳಿಗೆ ಯಾರೂ ಹಣ ಕಟ್ಟುವುದಿಲ್ಲ. ಎಲ್ಲರೂ ₹2.5 ಲಕ್ಷಕ್ಕೇ ಅಂಟಿಕೊಳ್ಳುತ್ತಾರೆ. ಇದು ಸರ್ಕಾರಕ್ಕೆ ಭಾರೀ ಮುಜುಗರ ಮತ್ತು ದೊಡ್ಡ ಹೊಡೆತ ಕೊಡಲಿದೆ” ಎಂದು ವಿಶ್ವನಾಥ್ ಎಚ್ಚರಿಸಿದರು.

ಇದಕ್ಕೂ ಮೀರಿ ಸರ್ಕಾರ ಮನೆ ಹಂಚಿಕೆ ಮುಂದುವರಿಸಿದರೆ, ನ್ಯಾಯಾಲಯಕ್ಕೆ ಹೋಗುವುದು ಅನಿವಾರ್ಯ. ಈಗಾಗಲೇ ಅಗತ್ಯ ದಾಖಲೆಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

“ನಾಳೆಯೇ ಮನೆ ಹಂಚಿಕೆ ಮಾಡ್ತೀವಿ ಅಂತ ಹೇಳ್ತಿದ್ದಾರೆ. ಅದು ಸಾಧ್ಯವೇ ಇಲ್ಲ. ಕನಿಷ್ಠ ಐದು ವರ್ಷ ವಾಸಿಸಿದ್ದ ದಾಖಲೆ ಬೇಕು. 18 ವಿಧದ ದಾಖಲೆಗಳನ್ನು ಕೇಳಲಾಗಿದೆ. ಯಾವ ವಿಶೇಷ ಪ್ರಕರಣ ಅಂತ ಕೇಳಿದರೆ ಉತ್ತರವೇ ಇಲ್ಲ. ಹೀಗೆ ತುರ್ತು ನಿರ್ಧಾರಗಳನ್ನು ತೆಗೆದುಕೊಳ್ಳಲು ಆಗೋದಿಲ್ಲ” ಎಂದು ಅವರು ಪ್ರಶ್ನಿಸಿದರು.

ವಿದೇಶಿಗರ ವಿಚಾರ ಎತ್ತಿದ ವಿಶ್ವನಾಥ್

“ಕಾಂಗ್ರೆಸ್ ಹೈಕಮಾಂಡ್ ಹೇಳಿತು, ಕೇರಳದ ಮುಖ್ಯಮಂತ್ರಿ ಟ್ವೀಟ್ ಮಾಡಿದರು, ಪಾಕಿಸ್ತಾನದಿಂದ ಹೇಳಿಕೆ ಬಂತು ಅಂತ ತಕ್ಷಣ ಮನೆ ಕೊಡಲು ಮುಂದಾದರೆ ಹೇಗೆ? ಪಾಕಿಸ್ತಾನ, ಬಾಂಗ್ಲಾದೇಶದಿಂದ ಬಂದ ಹಿಂದೂ, ಕ್ರಿಶ್ಚಿಯನ್, ಸಿಖ್ ಸೇರಿ ಅನೇಕ ಅಲ್ಪಸಂಖ್ಯಾತರು ದೇಶದಾದ್ಯಂತ ಬೀದಿಬೀದಿಗಳಲ್ಲಿ ಅಲೆಯುತ್ತಿದ್ದಾರೆ. ಅವರಿಗೆ ಯಾವುದೇ ಸರ್ಕಾರ ಮನೆ ಕೊಟ್ಟಿಲ್ಲ. ಅವರಿಗೆ ಪೌರತ್ವ ನೀಡಬೇಕೆಂದರೆ ಇದೇ ಕಾಂಗ್ರೆಸ್ ಮತ್ತು ಕಮ್ಯುನಿಸ್ಟ್ ಪಕ್ಷಗಳು ವಿರೋಧಿಸುತ್ತವೆ. ಹಾಗಾದರೆ ಇಲ್ಲಿ ತುರ್ತು ಏನು?” ಎಂದು ಅವರು ಪ್ರಶ್ನಿಸಿದರು.

ಇದು ಅಲ್ಪಸಂಖ್ಯಾತರ ವೋಟು ತೃಪ್ತಿಪಡಿಸುವ ರಾಜಕೀಯದ ಮುಂದುವರೆದ ಭಾಗ. ಕೇರಳದಲ್ಲಿ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕವನ್ನು ಬಲಿ ಕೊಡುವ ಕೆಲಸ ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದರು.

ಅಕ್ರಮಕ್ಕೆ ರಾಜಕೀಯ ಆಶ್ರಯ ಆರೋಪ

ಕೋಗಿಲು ಗ್ರಾಮ ಪಕ್ಕದ ಬಿಬಿಎಂಪಿ ಜಾಗದಲ್ಲಿ ಕಳೆದ ಎರಡು ವರ್ಷಗಳಿಂದ ಹಂತ ಹಂತವಾಗಿ ಅಕ್ರಮ ಮನೆಗಳು ನಿರ್ಮಾಣವಾಗಿದ್ದವು. ಸ್ಥಳೀಯ ಕಾಂಗ್ರೆಸ್‌ನ ಅಲ್ಪಸಂಖ್ಯಾತ ಮುಖಂಡರು “ಮನೆ ಕೊಡಿಸ್ತೇವೆ” ಎಂದು ವಲಸಿಗರು ಮತ್ತು ಸ್ಥಳೀಯರಿಂದ ಹಣ ವಸೂಲಿ ಮಾಡಿದ್ದಾರೆ. ಕೆಲವರು ಅಲ್ಲಿ ಮನೆ ಕಟ್ಟಿಸಿ ಬಾಡಿಗೆಗೆ ನೀಡಿ ಪ್ರತಿ ತಿಂಗಳು ಹಣ ವಸೂಲಿ ಮಾಡುತ್ತಿದ್ದರು. ಅಲ್ಲಿ ವಾಸಿಸಿದ್ದವರೆಲ್ಲರೂ ಸ್ವಂತ ಸೂರಿಗಾಗಿ ಅಲ್ಲ, ವ್ಯಾಪಾರ ಉದ್ದೇಶದಿಂದಲೇ ಇದ್ದರು ಎಂದು ವಿಶ್ವನಾಥ್ ಗಂಭೀರ ಆರೋಪ ಮಾಡಿದರು.

ಸರ್ಕಾರ ಮತ್ತು ಅಧಿಕಾರಿಗಳು ಕಾನೂನುಬದ್ಧವಾಗಿ ನೋಟಿಸ್ ನೀಡಿ ಮನೆಗಳನ್ನು ತೆರವು ಮಾಡಿದ್ದರು. ತೆರವು ಮಾಡಿದ ಬಳಿಕ ಎರಡು ದಿನ ಯಾವುದೇ ಚರ್ಚೆಯೇ ಇರಲಿಲ್ಲ. ಆದರೆ ಕೇರಳ ಮುಖ್ಯಮಂತ್ರಿ ಹೇಳಿಕೆ ನೀಡಿದ ತಕ್ಷಣ ಕಾಂಗ್ರೆಸ್ ವರಿಷ್ಠರು, ರಾಷ್ಟ್ರೀಯ ನಾಯಕರು, ಕೆ.ಸಿ. ವೇಣುಗೋಪಾಲ್ ಸೇರಿದಂತೆ ರಾಜ್ಯದ ಉಸ್ತುವಾರಿಗಳು ಒತ್ತಡ ಹೇರಿದರು. ಇದರ ಪರಿಣಾಮವಾಗಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಅಲ್ಪಸಂಖ್ಯಾತ ಸಚಿವರು ಸ್ಥಳ ಪರಿಶೀಲನೆ ನಡೆಸಿ “ಅನ್ಯಾಯವಾಗಿದೆ” ಎಂದು ಹೇಳಿ ಮನೆ ನೀಡುವ ಭರವಸೆ ನೀಡಿದ್ದಾರೆ ಎಂದು ಆರೋಪಿಸಿದರು.

“ಪ್ರವಾಹ ಬಂದಾಗಲೂ ಇಲ್ಲ, ಭೂಕಂಪ ಬಂದಾಗಲೂ ಇಲ್ಲ, ಐಪಿಎಲ್ ಕಾಲ್ತುಳಿತದ ವೇಳೆಗೂ ಇಲ್ಲ. ಆದರೆ ಇಲ್ಲಿ ಮಾತ್ರ ಮುಖ್ಯಮಂತ್ರಿ ತುರ್ತು ಸಭೆ ನಡೆಸಿ ಪರಿಹಾರ ಘೋಷಿಸಿದ್ದಾರೆ. ಬೈಯಪ್ಪನಹಳ್ಳಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಬ್ಸಿಡಿಯಲ್ಲಿ ನಿರ್ಮಿಸಿದ ಒಂದು ಲಕ್ಷ ಮನೆ / ಪ್ರಧಾನಮಂತ್ರಿ ಆವಾಸ್ ಯೋಜನೆಯ ಮನೆಗಳನ್ನು ತರಾತುರಿಯಲ್ಲಿ ಹಂಚಲು ಸರ್ಕಾರ ಹೊರಟಿದೆ” ಎಂದು ವಿಶ್ವನಾಥ್ ಆಕ್ಷೇಪಿಸಿದರು.

ಜನವರಿ 5ರಂದು ಬಿಜೆಪಿ ಬೃಹತ್ ಹೋರಾಟ

ಕೋಗಿಲು ಪ್ರಕರಣದ ವಿರುದ್ಧ ಜನವರಿ 5ರಂದು ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ವತಿಯಿಂದ ದೊಡ್ಡ ಪ್ರಮಾಣದ ಹೋರಾಟ ನಡೆಸಲಾಗುವುದು ಎಂದು ವಿಶ್ವನಾಥ್ ಘೋಷಿಸಿದರು.

ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ರಚಿಸಿರುವ ಐದು ಸದಸ್ಯರ ಸತ್ಯಾಸತ್ಯತೆ ಸಮಿತಿಯ ಮೊದಲ ಸಭೆ ಇಂದು ನಡೆದಿದೆ. ಸ್ಥಳ ಪರಿಶೀಲನೆ ನಡೆಸಿ, ಸರ್ವೇ ನಂಬರ್, ಯಾವ ರಾಜ್ಯದವರು, ಯಾವ ದೇಶದವರು ಎಂಬ ಸಂಪೂರ್ಣ ಮಾಹಿತಿಯನ್ನು ಸಂಗ್ರಹಿಸಿ ಒಂದು ವಾರದಲ್ಲಿ ರಾಜ್ಯಾಧ್ಯಕ್ಷರಿಗೆ ವರದಿ ಸಲ್ಲಿಸಲಾಗುವುದು ಎಂದು ಹೇಳಿದರು.

“ನನ್ನ ಕ್ಷೇತ್ರದಲ್ಲೂ ಮನೆಗಳು ನಿರ್ಮಾಣ ಹಂತದಲ್ಲಿವೆ. ಆರು ವರ್ಷಗಳ ಹಿಂದೆ ₹1 ಲಕ್ಷ ಹಣ ಕಟ್ಟಿದವರಿಗೆ ಇಂದಿಗೂ ಮನೆ ಸಿಕ್ಕಿಲ್ಲ. ರಾಜೀವ್ ಗಾಂಧಿ ವಸತಿ ಯೋಜನೆಯಡಿ ಮನೆ ಪಡೆಯಲು ಬೆಂಗಳೂರು ನಗರದಲ್ಲಿ ಐದು ವರ್ಷ ವಾಸಿಸಿದ್ದ ದೃಢೀಕರಣ ಪತ್ರ ಅಗತ್ಯ. ಅಧಿಕಾರಿಗಳು ಹೀಗೆ ತಪ್ಪು ಪ್ರಮಾಣಪತ್ರ ನೀಡಿದರೆ ಅದು ಕಾನೂನುಬಾಹಿರ” ಎಂದು ಎಚ್ಚರಿಸಿದರು.

ಬೈಯಪ್ಪನಹಳ್ಳಿಯ 14 ಮಹಡಿ ಕಟ್ಟಡದಲ್ಲಿ ಆನ್‌ಲೈನ್ ಮೂಲಕ ಶೇ 50 ಮನೆಗಳ ಮಂಜೂರಾತಿ ನಡೆದಿದೆ. ಶಾಸಕರ ಕೋಟಾದ ಶೇ 50 ಮನೆಗಳನ್ನೂ ಇನ್ನೂ ಹಂಚಿಕೆ ಮಾಡಿಲ್ಲ. ಆರು ವರ್ಷಗಳಿಂದ ಕಾಯುವವರಿಗೆ ಮನೆ ಇಲ್ಲ, ಆದರೆ ವಾರದಲ್ಲೇ ಮನೆ ಕೊಡ್ತೇವೆ ಎನ್ನುವುದು ಅಕ್ರಮ ಎಂದು ಅವರು ಆಕ್ಷೇಪಿಸಿದರು.

“ಸರ್ಕಾರಿ ಜಾಗಕ್ಕೆ ವಿದ್ಯುತ್ ಸಂಪರ್ಕ ನೀಡಿದ್ದು ಅಕ್ರಮವಲ್ಲವೇ? ಮನೆ ಕಟ್ಟಿದವರ ಮೇಲೆ ಹಾಗೂ ವಿದ್ಯುತ್ ನೀಡಿದ ಅಧಿಕಾರಿಗಳ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಬೇಕಿತ್ತು. ಸರ್ಕಾರ ತರಾತುರಿಯಲ್ಲಿ ಮನೆ ನೀಡಿದರೆ, ಅದನ್ನು ನ್ಯಾಯಾಲಯದಲ್ಲೂ ಪ್ರಶ್ನಿಸುತ್ತೇವೆ, ರಾಜ್ಯಪಾಲರಿಗೂ ದೂರು ನೀಡುತ್ತೇವೆ” ಎಂದು ವಿಶ್ವನಾಥ್ ಸ್ಪಷ್ಟಪಡಿಸಿದರು.

Also Read: Kogilu Case: Housing Allotment Will Be Challenged in Court, Complaint to Governor — SR Vishwanath


About the Author

The Bengaluru Live

Administrator

Visit Website View All Posts

Post navigation

Previous: ಹೊಸ ವರ್ಷಾಚರಣೆಯಲ್ಲಿ ಶಾಂತಿ ಮತ್ತು ಸುರಕ್ಷತೆ ಕಾಪಾಡಿದ ಕರ್ನಾಟಕ ಪೊಲೀಸರನ್ನು ಶ್ಲಾಘಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Next: ಪಿಜಿ, ಹಾಸ್ಟೆಲ್ ಮಾಲೀಕರಿಗೆ ಕಟ್ಟುನಿಟ್ಟಿನ ಆದೇಶ: 7 ದಿನದಲ್ಲಿ ಸುರಕ್ಷತಾ ನಿಯಮ ಪಾಲಿಸದರೆ ಲೈಸೆನ್ಸ್ ರದ್ದು

Related Stories

ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯ ಕಡತ ಚಿತ್ರ
  • ಅಪರಾಧ
  • ಬೆಂಗಳೂರು ನಗರ

ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಆರೋಪದಲ್ಲಿ 32 ವರ್ಷದ ವ್ಯಕ್ತಿಯನ್ನು ಬಂಧಿಸಿದ ಬೆಂಗಳೂರು ಸಿಸಿಬಿ

The Bengaluru Live November 11, 2026 8:20 AM
ಹೆಣ್ಣೂರು–ಬಾಗಲೂರು ರಸ್ತೆಯಲ್ಲಿ ಹೊಸದಾಗಿ ಹಾಕಿದ ಕಾಂಕ್ರೀಟ್ ಪಕ್ಕದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು.
  • ಬೆಂಗಳೂರು ನಗರ

ಹೆಣ್ಣೂರು–ಬಾಗಲೂರು ರಸ್ತೆಯ 170 ಮೀಟರ್ ಭಾಗದಲ್ಲಿ ಕಾಂಕ್ರೀಟ್ ಹಾಕುವ ಕಾಮಗಾರಿ ಪೂರ್ಣ

The Bengaluru Live November 11, 2026 1:28 AM
ಎತ್ತರಿಸಿದ ಹಳಿಗಳ ಮೇಲೆ ಸಾಗುತ್ತಿರುವ ನಮ್ಮ ಮೆಟ್ರೋ ರೈಲು
  • ಬೆಂಗಳೂರು ನಗರ
  • ಕರ್ನಾಟಕ

ಬೆಂಗಳೂರು ಮೆಟ್ರೋ ಹಣಕಾಸು ವಿವಾದ: ಕರ್ನಾಟಕದ ಪಾಲು ₹65,291 ಕೋಟಿ ಎಂದ ಕಾಂಗ್ರೆಸ್

The Bengaluru Live November 11, 2026 12:25 AM

Latest Post

ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಆರೋಪದಲ್ಲಿ 32 ವರ್ಷದ ವ್ಯಕ್ತಿಯನ್ನು ಬಂಧಿಸಿದ ಬೆಂಗಳೂರು ಸಿಸಿಬಿ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯ ಕಡತ ಚಿತ್ರ
  • ಅಪರಾಧ
  • ಬೆಂಗಳೂರು ನಗರ

ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಆರೋಪದಲ್ಲಿ 32 ವರ್ಷದ ವ್ಯಕ್ತಿಯನ್ನು ಬಂಧಿಸಿದ ಬೆಂಗಳೂರು ಸಿಸಿಬಿ

November 11, 2026 8:20 AM
ತೇಜಸ್ವಿ ಸೂರ್ಯ ಸಾಕ್ಷ್ಯ ಕೇಳಿದ ಬೆನ್ನಲ್ಲೇ ಆರ್‌ಎಸ್‌ಎಸ್‌ಗೆ ನೋಂದಣಿ ಸವಾಲು ಹಾಕಿದ ಪ್ರಿಯಾಂಕ್ ಖರ್ಗೆ ಕೊಚ್ಚಿಯ ಮುಸ್ಲಿಂ ಯೂತ್ ಲೀಗ್ ರ‍್ಯಾಲಿಯಲ್ಲಿ ವೇದಿಕೆಯಲ್ಲಿ ಸಂವಿಧಾನದ ಪ್ರತಿ ಹಿಡಿದು ಮಾತನಾಡುತ್ತಿರುವ ಪ್ರಿಯಾಂಕ್ ಖರ್ಗೆ
  • ರಾಜಕೀಯ
  • ಕರ್ನಾಟಕ

ತೇಜಸ್ವಿ ಸೂರ್ಯ ಸಾಕ್ಷ್ಯ ಕೇಳಿದ ಬೆನ್ನಲ್ಲೇ ಆರ್‌ಎಸ್‌ಎಸ್‌ಗೆ ನೋಂದಣಿ ಸವಾಲು ಹಾಕಿದ ಪ್ರಿಯಾಂಕ್ ಖರ್ಗೆ

November 11, 2026 7:23 AM
ಹೆಣ್ಣೂರು–ಬಾಗಲೂರು ರಸ್ತೆಯ 170 ಮೀಟರ್ ಭಾಗದಲ್ಲಿ ಕಾಂಕ್ರೀಟ್ ಹಾಕುವ ಕಾಮಗಾರಿ ಪೂರ್ಣ ಹೆಣ್ಣೂರು–ಬಾಗಲೂರು ರಸ್ತೆಯಲ್ಲಿ ಹೊಸದಾಗಿ ಹಾಕಿದ ಕಾಂಕ್ರೀಟ್ ಪಕ್ಕದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು.
  • ಬೆಂಗಳೂರು ನಗರ

ಹೆಣ್ಣೂರು–ಬಾಗಲೂರು ರಸ್ತೆಯ 170 ಮೀಟರ್ ಭಾಗದಲ್ಲಿ ಕಾಂಕ್ರೀಟ್ ಹಾಕುವ ಕಾಮಗಾರಿ ಪೂರ್ಣ

November 11, 2026 1:28 AM
ಬಿಹಾರ ಕಾರ್ಟ್ರಿಡ್ಜ್ ವಶ ಪ್ರಕರಣದ ಚಿತ್ರಕ್ಕೆ ಆಕ್ಷೇಪ: ಪ್ರಿಯಾಂಕ್ ಖರ್ಗೆ ವಿರುದ್ಧ ತೇಜಸ್ವಿ ಸೂರ್ಯ, ಗಿರೀಶ್ ಭಾರದ್ವಾಜ್ ವಾಗ್ದಾಳಿ ಕೊಚ್ಚಿಯ ಮುಸ್ಲಿಂ ಯೂತ್ ಲೀಗ್ ರ‍್ಯಾಲಿಯಲ್ಲಿ ವೇದಿಕೆಯಲ್ಲಿ ಸಂವಿಧಾನದ ಪ್ರತಿ ಹಿಡಿದು ಮಾತನಾಡುತ್ತಿರುವ ಪ್ರಿಯಾಂಕ್ ಖರ್ಗೆ
  • ಕರ್ನಾಟಕ
  • ರಾಜಕೀಯ

ಬಿಹಾರ ಕಾರ್ಟ್ರಿಡ್ಜ್ ವಶ ಪ್ರಕರಣದ ಚಿತ್ರಕ್ಕೆ ಆಕ್ಷೇಪ: ಪ್ರಿಯಾಂಕ್ ಖರ್ಗೆ ವಿರುದ್ಧ ತೇಜಸ್ವಿ ಸೂರ್ಯ, ಗಿರೀಶ್ ಭಾರದ್ವಾಜ್ ವಾಗ್ದಾಳಿ

November 11, 2026 1:14 AM
ಬೆಂಗಳೂರು ಮೆಟ್ರೋ ಹಣಕಾಸು ವಿವಾದ: ಕರ್ನಾಟಕದ ಪಾಲು ₹65,291 ಕೋಟಿ ಎಂದ ಕಾಂಗ್ರೆಸ್ ಎತ್ತರಿಸಿದ ಹಳಿಗಳ ಮೇಲೆ ಸಾಗುತ್ತಿರುವ ನಮ್ಮ ಮೆಟ್ರೋ ರೈಲು
  • ಬೆಂಗಳೂರು ನಗರ
  • ಕರ್ನಾಟಕ

ಬೆಂಗಳೂರು ಮೆಟ್ರೋ ಹಣಕಾಸು ವಿವಾದ: ಕರ್ನಾಟಕದ ಪಾಲು ₹65,291 ಕೋಟಿ ಎಂದ ಕಾಂಗ್ರೆಸ್

November 11, 2026 12:25 AM
ಕರ್ನಾಟಕ ಬರ ಪರಿಹಾರ: ₹5,000 ಪಾವತಿ ಕುರಿತು ಶಿವಕುಮಾರ್ ಸ್ಪಷ್ಟನೆ, ಮೊದಲ ಕಂತಿನ ಮೊತ್ತದ ಬಗ್ಗೆ ಅಶೋಕ ಪ್ರಶ್ನೆ ವಿಧಾನಸೌಧದಲ್ಲಿ ಮಧ್ಯಂತರ ಬರ ಪರಿಹಾರ ಪಾವತಿಗೆ ಚಾಲನೆ ನೀಡಿದ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಕರ್ನಾಟಕ ಬರ ಪರಿಹಾರ: ₹5,000 ಪಾವತಿ ಕುರಿತು ಶಿವಕುಮಾರ್ ಸ್ಪಷ್ಟನೆ, ಮೊದಲ ಕಂತಿನ ಮೊತ್ತದ ಬಗ್ಗೆ ಅಶೋಕ ಪ್ರಶ್ನೆ

November 10, 2026 11:27 PM

ನೀವು ತಪ್ಪಿಸಿಕೊಂಡಿರಬಹುದು

ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯ ಕಡತ ಚಿತ್ರ
  • ಅಪರಾಧ
  • ಬೆಂಗಳೂರು ನಗರ

ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಆರೋಪದಲ್ಲಿ 32 ವರ್ಷದ ವ್ಯಕ್ತಿಯನ್ನು ಬಂಧಿಸಿದ ಬೆಂಗಳೂರು ಸಿಸಿಬಿ

The Bengaluru Live November 11, 2026 8:20 AM
ಕೊಚ್ಚಿಯ ಮುಸ್ಲಿಂ ಯೂತ್ ಲೀಗ್ ರ‍್ಯಾಲಿಯಲ್ಲಿ ವೇದಿಕೆಯಲ್ಲಿ ಸಂವಿಧಾನದ ಪ್ರತಿ ಹಿಡಿದು ಮಾತನಾಡುತ್ತಿರುವ ಪ್ರಿಯಾಂಕ್ ಖರ್ಗೆ
  • ರಾಜಕೀಯ
  • ಕರ್ನಾಟಕ

ತೇಜಸ್ವಿ ಸೂರ್ಯ ಸಾಕ್ಷ್ಯ ಕೇಳಿದ ಬೆನ್ನಲ್ಲೇ ಆರ್‌ಎಸ್‌ಎಸ್‌ಗೆ ನೋಂದಣಿ ಸವಾಲು ಹಾಕಿದ ಪ್ರಿಯಾಂಕ್ ಖರ್ಗೆ

The Bengaluru Live November 11, 2026 7:23 AM
ಹೆಣ್ಣೂರು–ಬಾಗಲೂರು ರಸ್ತೆಯಲ್ಲಿ ಹೊಸದಾಗಿ ಹಾಕಿದ ಕಾಂಕ್ರೀಟ್ ಪಕ್ಕದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು.
  • ಬೆಂಗಳೂರು ನಗರ

ಹೆಣ್ಣೂರು–ಬಾಗಲೂರು ರಸ್ತೆಯ 170 ಮೀಟರ್ ಭಾಗದಲ್ಲಿ ಕಾಂಕ್ರೀಟ್ ಹಾಕುವ ಕಾಮಗಾರಿ ಪೂರ್ಣ

The Bengaluru Live November 11, 2026 1:28 AM
ಕೊಚ್ಚಿಯ ಮುಸ್ಲಿಂ ಯೂತ್ ಲೀಗ್ ರ‍್ಯಾಲಿಯಲ್ಲಿ ವೇದಿಕೆಯಲ್ಲಿ ಸಂವಿಧಾನದ ಪ್ರತಿ ಹಿಡಿದು ಮಾತನಾಡುತ್ತಿರುವ ಪ್ರಿಯಾಂಕ್ ಖರ್ಗೆ
  • ಕರ್ನಾಟಕ
  • ರಾಜಕೀಯ

ಬಿಹಾರ ಕಾರ್ಟ್ರಿಡ್ಜ್ ವಶ ಪ್ರಕರಣದ ಚಿತ್ರಕ್ಕೆ ಆಕ್ಷೇಪ: ಪ್ರಿಯಾಂಕ್ ಖರ್ಗೆ ವಿರುದ್ಧ ತೇಜಸ್ವಿ ಸೂರ್ಯ, ಗಿರೀಶ್ ಭಾರದ್ವಾಜ್ ವಾಗ್ದಾಳಿ

The Bengaluru Live November 11, 2026 1:14 AM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಆರೋಪದಲ್ಲಿ 32 ವರ್ಷದ ವ್ಯಕ್ತಿಯನ್ನು ಬಂಧಿಸಿದ ಬೆಂಗಳೂರು ಸಿಸಿಬಿ
  • ತೇಜಸ್ವಿ ಸೂರ್ಯ ಸಾಕ್ಷ್ಯ ಕೇಳಿದ ಬೆನ್ನಲ್ಲೇ ಆರ್‌ಎಸ್‌ಎಸ್‌ಗೆ ನೋಂದಣಿ ಸವಾಲು ಹಾಕಿದ ಪ್ರಿಯಾಂಕ್ ಖರ್ಗೆ
  • ಹೆಣ್ಣೂರು–ಬಾಗಲೂರು ರಸ್ತೆಯ 170 ಮೀಟರ್ ಭಾಗದಲ್ಲಿ ಕಾಂಕ್ರೀಟ್ ಹಾಕುವ ಕಾಮಗಾರಿ ಪೂರ್ಣ
  • ಬಿಹಾರ ಕಾರ್ಟ್ರಿಡ್ಜ್ ವಶ ಪ್ರಕರಣದ ಚಿತ್ರಕ್ಕೆ ಆಕ್ಷೇಪ: ಪ್ರಿಯಾಂಕ್ ಖರ್ಗೆ ವಿರುದ್ಧ ತೇಜಸ್ವಿ ಸೂರ್ಯ, ಗಿರೀಶ್ ಭಾರದ್ವಾಜ್ ವಾಗ್ದಾಳಿ
©Copyright 2025 The Bengaluru Live All rights reserved. | MoreNews by AF themes.