Kolar: Former Congress MLA passed away due to heart attack
ಕೋಲಾರ:
ಹೃದಯಾಘಾತದಿಂದ ಕಾಂಗ್ರೆಸ್ ನ ಮಾಜಿ ಶಾಸಕ ಸಿ.ವೆಂಕಟೇಶಪ್ಪ ನಿಧನ ಹೊಂದಿದ್ದಾರೆ. ಕಳೆದ ವೆಂಕಟೇಶಪ್ಪ ಅವರಿಗೆ ರಾತ್ರಿ ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಕೋಲಾರ ನಗರದ ಆರ್.ಎಲ್.ಜಾಲಪ್ಪಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸಲದೆ ವೆಂಕಟೇಶಪ್ಪ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಸಿ.ವೆಂಕಟೇಶಪ್ಪ ಅವರು 1978,1983, 1999 ರಲ್ಲಿ ಶಾಸಕರಾಗಿ ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿದ್ದರು. ಸಿ.ವೆಂಕಟೇಶಪ್ಪ ಅವರು ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಬುವನಹಳ್ಳಿ ಗ್ರಾಮದವರಾಗಿದ್ದಾರೆ. ಮೃತರ ಪಾರ್ಥೀವ ಶರೀರ ಸ್ವಗ್ರಾಮ ರವಾನೆ ಮಾಡಲಾಗಿದೆ.
ಸಿ.ವೆಂಕಟೇಶಪ್ಪ ಅವರು ಆಗಿನ ಬೇತಮಂಗಲ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ವೆಂಕಟೇಶಪ್ಪ ಅಪಾರ ಅಭಿಮಾನಿಗಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.
