Home ಕೊಪ್ಪಳ ಕೊಪ್ಪಳ | ದಲಿತರ ಮೇಲೆ ದೌರ್ಜನ್ಯ ಪ್ರಕರಣ: 97 ಜನರಿಗೆ ಜಾಮೀನು ಮಂಜೂರು

ಕೊಪ್ಪಳ | ದಲಿತರ ಮೇಲೆ ದೌರ್ಜನ್ಯ ಪ್ರಕರಣ: 97 ಜನರಿಗೆ ಜಾಮೀನು ಮಂಜೂರು

47
0

ಕೊಪ್ಪಳ : ಮರಕುಂಬಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 97 ಮಂದಿಗೆ ಧಾರವಾಡದ ಹೈಕೋರ್ಟ್‌ ಪೀಠವು ಬುಧವಾರ ಜಾಮೀನು ಮಂಜೂರು ಮಾಡಿದೆ.

ಪ್ರತಿಯೊಬ್ಬರಿಂದ 50 ಸಾವಿರ ರೂ.ಬೆಲೆಯ ಬಾಂಡ್ ಹಾಗೂ ಒಬ್ಬ ಶ್ಯೂರಿಟಿ ಪಡೆದು ನ್ಯಾಯಾಲಯ ಜಾಮೀನು ನೀಡಿದೆ ಎಂದು ತಿಳಿದು ಬಂದಿದೆ.

ತಾಲೂಕಿನ ಮರಕುಂಬಿ ಗ್ರಾಮದಲ್ಲಿ 2014ರಲ್ಲಿ ನಡೆದ ಅಸ್ಪೃಶ್ಯತೆ ಆಚರಣೆ ಮತ್ತು ನಂತರ ದಲಿತರ ಓಣಿಗೆ ಹೋಗಿ ಗುಡಿಸಲುಗಳಿಗೆ ಬೆಂಕಿ, ಹಚ್ಚಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 101 ಆರೋಪಿಗಳ ವಿರುದ್ದ ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಆರೋಪ ಸಾಬೀತಾಗಿತ್ತು. ಅದರಂತೆ 101 ಜನರ ಅಪರಾಧಿಗಳಲ್ಲಿ 98 ಜನರಿಗೆ ಜೀವಾವಧಿ ಶಿಕ್ಷೆ, 5 ವರ್ಷ ದಂಡ ವಿಧಿಸಿತ್ತು. ಇನ್ನೂ ಮೂವರು ಅಪರಾಧಿಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ್ದು, ಇದರಿಂದಾಗಿ ಜಾತಿ ನಿಂದನೆ ಕಾಯ್ದೆ ಅನ್ವಯವಾಗಿಲ್ಲ. ಹೀಗಾಗಿ ಈ 3 ಜನರಿಗೆ 5 ವರ್ಷ ಜೈಲು ಶಿಕ್ಷೆ, 2 ಸಾವಿರ ರೂ. ದಂಡ ವಿಧಿಸಲಾಗಿತ್ತು.

LEAVE A REPLY

Please enter your comment!
Please enter your name here