ಬಿಡಿಎ ವಾಣಿಜ್ಯ ಸಂಕೀರ್ಣ ಪುನರಾಭಿವೃದ್ಧಿ: ಸೆಪ್ಟೆಂಬರ್ 1ರಿಂದ ಕೋರಮಂಗಲ ರೈಲ್ವೆ ಟಿಕೆಟ್ ಕಾಯ್ದಿರಿಸುವ ಕೇಂದ್ರ ಬಂದ್
ಬೆಂಗಳೂರು, ಆಗಸ್ಟ್ 31: ಕೋರಮಂಗಲದ ಬಿಡಿಎ ಶಾಪಿಂಗ್ ಕಾಂಪ್ಲೆಕ್ಸ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ರೈಲ್ವೆ ಟಿಕೆಟ್ ಕಾಯ್ದಿರಿಸುವ ಕೇಂದ್ರವನ್ನು ವಾಣಿಜ್ಯ ಸಂಕೀರ್ಣದ ಪುನರಾಭಿವೃದ್ಧಿ ಕಾಮಗಾರಿಯ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 1, 2026ರಿಂದ ಮುಚ್ಚಲಾಗುವುದು ಎಂದು ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗ ತಿಳಿಸಿದೆ.
ಕೋರಮಂಗಲದ ಬಿಡಿಎ ಶಾಪಿಂಗ್ ಕಾಂಪ್ಲೆಕ್ಸ್ನ ಮೊದಲ ಮಹಡಿಯ ಹಾಲ್ ಸಂಖ್ಯೆ 1ರಲ್ಲಿ ಈ ರೈಲ್ವೆ ಟಿಕೆಟ್ ಕಾಯ್ದಿರಿಸುವ ಕೇಂದ್ರ ಪ್ರಸ್ತುತ ಕಾರ್ಯನಿರ್ವಹಿಸುತ್ತಿದೆ.
ಕೇಂದ್ರ ಮುಚ್ಚುವ ಹಿನ್ನೆಲೆಯಲ್ಲಿ ಪ್ರಯಾಣಿಕರು ಇತರ ಗಣಕೀಕೃತ ರೈಲ್ವೆ ಟಿಕೆಟ್ ಕಾಯ್ದಿರಿಸುವ ಕೇಂದ್ರಗಳ ಸೌಲಭ್ಯವನ್ನು ಅಥವಾ ಆನ್ಲೈನ್ ಬುಕಿಂಗ್ ಸೌಲಭ್ಯವನ್ನು ಬಳಸಿಕೊಳ್ಳುವಂತೆ ನೈಋತ್ಯ ರೈಲ್ವೆ ಮನವಿ ಮಾಡಿದೆ.
ಇದರಿಂದ ಪ್ರಯಾಣಿಕರಿಗೆ ಉಂಟಾಗುವ ಅನಾನುಕೂಲತೆಗೆ ರೈಲ್ವೆ ಅಧಿಕಾರಿಗಳು ವಿಷಾದ ವ್ಯಕ್ತಪಡಿಸಿದ್ದಾರೆ.
ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗದ ಸಾರ್ವಜನಿಕ ಸಂಪರ್ಕ ಅಧಿಕಾರಿ ಪ್ರಾಣೇಶ್ ಕೆ.ಎನ್. ಅವರು ಆಗಸ್ಟ್ 31ರಂದು ಹೊರಡಿಸಿದ ಪತ್ರಿಕಾ ಪ್ರಕಟಣೆಯಲ್ಲಿ ಈ ಮಾಹಿತಿ ನೀಡಿದ್ದಾರೆ.
