ಬೆಂಗಳೂರು:
ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ, ಬೆಂಗಳೂರು (ಕೇಂದ್ರದ) ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವನ್ನು ಜುಲೈ 07, 2021 ಬುಧವಾರ ಬೆಳಿಗ್ಗೆ 11.00 ಗಂಟೆಗೆ ನಗರದ ಕೋರಮಂಗಲ ಬಿ.ಡಿ.ಎ ಸಂಕೀರ್ಣದಿಂದ ನೂತನವಾಗಿ ಸಿಎ-31/ಎ, 2ನೇ ಮುಖ್ಯ ರಸ್ತೆ, ಹೆಚ್.ಎಸ್.ಆರ್. ಸೆಕ್ಟರ್-1 ಹೆಚ್.ಎಸ್.ಆರ್ ಲೇಔಟ್ ನಲ್ಲಿ ಹಮ್ಮಿಕೊಳ್ಳಲಾಗಿದೆ.
ಸಾರಿಗೆ ಸಚಿವರು ಹಾಗೂ ಉಪಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ ಅವರು ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಎನ್.ಸತೀಶ್‍ರೆಡ್ಡಿ ಅವರು ವಹಿಸುವರು. ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಂಜುಂ ಪರ್ವೇಜ್ ಭಾ.ಆ.ಸೇ., ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರಾದ ಎನ್.ಶಿವಕುಮಾರ್ ಭಾ.ಪೊ.ಸೋ ಸೇರಿದಂತೆ ಗಣ್ಯರು ಉಪಸ್ಥಿತರಿರುವರು.