Home ಕರ್ನಾಟಕ KPSC: ಸ್ಪರ್ಧಾತ್ಮಕ ಪರೀಕ್ಷೆಗಳ ಪರಿಷ್ಕೃತ ವೇಳಾಪಟ್ಟಿ ಪ್ರಕಟ

KPSC: ಸ್ಪರ್ಧಾತ್ಮಕ ಪರೀಕ್ಷೆಗಳ ಪರಿಷ್ಕೃತ ವೇಳಾಪಟ್ಟಿ ಪ್ರಕಟ

37
0
bengaluru

ಬೆಂಗಳೂರು:

ಕರ್ನಾಟಕ ಲೋಕ ಸೇವಾ ಆಯೋಗವು ಅಧಿಸೂಚನೆ ಸಂಖ್ಯೆ ಪಿ.ಎಸ್.ಸಿ1 ಆರ್‍ಟಿಬಿ – 1/ 2020 ದಿನಾಂಕ: 30-07-2020ರ ಅಧಿಸೂಚಿಸಿರುವ ಆಯುಷ್ ಇಲಾಖೆಯಲ್ಲಿನ ಆಯುಷ್ ವೈದ್ಯಕೀಯ ಮಹಾವಿದ್ಯಾಲಯಗಳಲ್ಲಿ ಪ್ರಾಧ್ಯಾಪಕರು/ ಸಹ ಪ್ರಾಧ್ಯಾಪಕರು/ ಸಹಾಯಕ ಪ್ರಾಧ್ಯಾಪಕರು ಹುದ್ದೆಗಳಿಗೆ ಬೆಂಗಳೂರು ಕೇಂದ್ರದಲ್ಲಿ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ/ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಈ ಹುದ್ದೆಗಳು ಸೇರಿದಂತೆ ಮೇಲ್ಕಂಡ ಅಧಿಸೂಚನೆಯಲ್ಲಿನ ಶುಶ್ರೂಷಕರು/ ಔಷಧ ವಿತರಕರು ಹುದ್ದೆಗಳಿಗೆ ಸಹ ನಡೆಸಲಾಗುವ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ / ಸ್ಪರ್ಧಾತ್ಮಕ ಪರೀಕ್ಷೆಗಳ ಪರಿಷ್ಕೃತ ವೇಳಾಪಟ್ಟಿಯನ್ನು ಅಭ್ಯರ್ಥಿಗಳ ಮಾಹಿತಿಗಾಗಿ ಆಯೋಗದ ಅಂತರ್ಜಾಲ http://kpsc.kar.nic.in / Revised Time Table ನಲ್ಲಿ ಪ್ರಕಟಿಸಲಾಗಿದೆ ಎಂದು ಉಪಕಾರ್ಯದರ್ಶಿ ಕರ್ನಾಟಕ ಲೋಕ ಸೇವಾ ಆಯೋಗ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

bengaluru

LEAVE A REPLY

Please enter your comment!
Please enter your name here