ಮೈಸೂರು:
ಪೊಲೀಸ್ ಜೀಪೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕರ್ತವ್ಯದಲ್ಲಿದ್ದ ಇಬ್ಬರು ಪೋಲಿಸರು ದಾರುಣವಾಗಿ ಮೃತಪಟ್ಟ ಘಟನೆ ತಡರಾತ್ರಿ ಮೈಸೂರು ಜಿಲ್ಲೆ ಕೆ.ಆರ್. ನಗರ ತಾಲೂಕಿನಲ್ಲಿ ನಡೆದಿದೆ.
ಕೆ.ಆರ್. ನಗರ ಪೊಲೀಸ್ ಠಾಣೆಯ ಸಹಾಯಕ ಸಬ್ ಇನ್ಸ್ ಪೆಕ್ಟರ್ ಮೂರ್ತಿ ಮತ್ತು ಹೆಡ್ ಕಾನ್ ಸ್ಟೆಬಲ್ ಶಾಂತಕುಮಾರ್ ಮೃತ ಪೊಲೀಸರು.
ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ, ಸಿದ್ದಯ್ಯನ ಕೊಪ್ಪಲು ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಜೀಪ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಶವಗಳು ಕೆಆರ್ ನಗರ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್, ಸೌತ್ ಡಿವೈಎಸ್ ಪಿ ಸುಮಿತ್ ಭೇಟಿ ನೀಡಿದ್ದಾರೆ. ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.