ಹಳೆಯ ಚಿತ್ರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ.
ಬೆಂಗಳೂರು: ಪದವಿ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ ಕೆಸೆಟ್-26 ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಶನಿವಾರ ತಿಳಿಸಿದ್ದಾರೆ.
ಒಟ್ಟು 37 ವಿವಿಧ ವಿಷಯಗಳಿಗೆ ಅಕ್ಟೋಬರ್ 11ರಂದು ಲಿಖಿತ ಪರೀಕ್ಷೆ ನಡೆದಿತ್ತು. ಅರ್ಜಿ ಸಲ್ಲಿಸಿದ್ದ 1,29,214 ಅಭ್ಯರ್ಥಿಗಳ ಪೈಕಿ 1,17,638 ಮಂದಿ ಪರೀಕ್ಷೆಗೆ ಹಾಜರಾಗಿದ್ದರು. ಇವರಲ್ಲಿ ಎಲ್ಲ ಪ್ರವರ್ಗಗಳಡಿ ಲಭ್ಯವಿರುವ 7,204 ಸ್ಲಾಟ್‌ಗಳಿಗೆ 8,171 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ ಎಂದು ಪ್ರಸನ್ನ ತಿಳಿಸಿದರು.
ಸಹಾಯಕ ಪ್ರಾಧ್ಯಾಪಕರಾಗಿ ಅರ್ಹರಾಗುವ ಅಭ್ಯರ್ಥಿಗಳ ಸಂಖ್ಯೆ ಕೆಸೆಟ್‌ನ ಎರಡೂ ಪತ್ರಿಕೆಗಳಿಗೆ ಹಾಜರಾದ ಒಟ್ಟು ಅಭ್ಯರ್ಥಿಗಳ ಶೇ 6ರಷ್ಟಕ್ಕೆ ಸಮಾನವಾಗಿರುತ್ತದೆ ಎಂದು ಅವರು ವಿವರಿಸಿದರು.
ಕಟ್-ಆಫ್ ಅಂಕ ಹಾಗೂ ಎಲ್ಲ 37 ವಿಷಯಗಳಲ್ಲಿ ವಿವಿಧ ಪ್ರವರ್ಗಗಳಡಿ ಅರ್ಹತೆ ಪಡೆದ ಅಭ್ಯರ್ಥಿಗಳ ಅರ್ಜಿ ಸಂಖ್ಯೆಗಳನ್ನು ಒಳಗೊಂಡ ವಿವರವಾದ ಫಲಿತಾಂಶವನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ, ಸದ್ಯದಲ್ಲೇ ಪ್ರಮಾಣಪತ್ರಗಳನ್ನು ನೀಡಲಾಗುವುದು ಎಂದು ಅವರು ತಿಳಿಸಿದರು.
