ಬೆಂಗಳೂರು:
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2023-24ನೇ ಶೈಕ್ಷಣಿಕ ಸಾಲಿನ ಜುಲೈ ಆವೃತಿಗೆ ಯು.ಜಿಸಿ ಅನುಮೋದಿತ ಶಿಕ್ಷಣಕ್ರಮಗಳ ಪ್ರವೇಶಾತಿಗಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಸೆಪ್ಟೆಂಬರ್ 30ರ ವರೆಗೆ ವಿಸ್ತರಿಸಲಾಗಿದೆ.
ವಿಶ್ವವಿದ್ಯಾನಿಲಯದ ಅಂತರ್ಜಾಲ www.ksoumysuru.ac.in ರಲ್ಲಿ ಲಭ್ಯವಿರುವ ವಿವರಣಾ ಪುಸ್ತಕದಲ್ಲಿ ಎಲ್ಲಾ ವಿವರಗಳು ಲಭ್ಯವಿದ್ದು, ವಿದ್ಯಾರ್ಥಿಗಳು ಅದರನ್ವಯ ಅರ್ಹ ಶಿಕ್ಷಣಕ್ರಮಗಳಿಗೆ ವಿಶ್ವವಿದ್ಯಾನಿಲಯ ವೆಬ್‍ಸೈಟ್‍ನಲ್ಲಿ ಲಭ್ಯವಿರುವ ಆನ್‍ಲೈನ್ ಅಡ್ಮಿಷನ್ ಪೋರ್ಟಲ್ ಮೂಲಕ ಪ್ರವೇಶಾತಿ ಮಾಡಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಪ್ರದೇಶಿಕ ನಿರ್ದೇಶಕರು, ಬೆಂಗಳೂರು ಪ್ರಾದೇಶಿಕ ಕೇಂದ್ರ-04, ನಂ3/3, ಲೋರ ಬಿಸಿನೆಸ್ ಅಕಾಡೆಮಿ ಕಟ್ಟಡ, 2ನೇ ಮಹಡಿ, ಬೇಗೂರು ಮುಖ್ಯ ರಸ್ತೆ, ಹೊಂಗಸಂದ್ರ, ಬೊಮ್ಮನಹಳ್ಳಿ, ಬೆಂಗಳೂರು-560088, ದೂರವಾಣಿ ಸಂಖ್ಯೆ: 080-23158888, 9448668880, 9844556968, 9535555796 ನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.