ಬೆಂಗಳೂರು:
ಕೆ.ಎಸ್.ಆರ್.ಟಿ. ಸಿಯಲ್ಲಿ ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ನೌಕರರ 2023ನೇ ಸಾಲಿನ ಅಂತರ ನಿಗಮ ವರ್ಗಾವಣೆ ಪ್ರಕ್ರಿಯೆ ಜುಲೈ 5ರ ಬೆಳಿಗ್ಗೆ 11:00 ಗಂಟೆಯಿಂದ ಪ್ರಾರಂಭವಾಗಿದ್ದು, ದಿನಾಂಕ:18-08-2023ರ ಸಂಜೆ 5:30 ರವರೆಗೆ ಆನ್-ಲೈನ್ ಮೂಲಕ www.ksrtc.org/transfer ರಲ್ಲಿ ಸಾಮಾನ್ಯ ಮತ್ತು ಪರಸ್ಪರ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು.
ಆದರೆ ನೌಕರರ ಹಿತದೃಷ್ಠಿಯಿಂದ ಅಂತರ ನಿಗಮ ಸಾಮಾನ್ಯ ಮತ್ತು ಪರಸ್ಪರ ವರ್ಗಾವಣೆಗೆ ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30ರ ಸಂಜೆ 5:30 ರವರೆಗೆ ಅವಧಿಯನ್ನು ವಿಸ್ತರಿಸಿ ಅವಕಾಶ ಕಲ್ಪಿಸಲಾಗಿದ್ದು, ನೌಕರರು ಸದರಿ ಸೌಲಭ್ಯದ ಸದುಪಯೋಗವನ್ನು ಪಡೆದುಕೊಳ್ಳಲು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.