Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • KSRTC | ಕೆ‌.ಎಸ್.ಆರ್.ಟಿ.ಸಿ ಅಪಘಾತದಲ್ಲಿ ಮೃತರಾದವರಿಗೆ ಒಂದು ಕೋಟಿ ಪರಿಹಾರ ವಿತರಣೆ
  • ಬೆಂಗಳೂರು ನಗರ
  • ಕರ್ನಾಟಕ

KSRTC | ಕೆ‌.ಎಸ್.ಆರ್.ಟಿ.ಸಿ ಅಪಘಾತದಲ್ಲಿ ಮೃತರಾದವರಿಗೆ ಒಂದು ಕೋಟಿ ಪರಿಹಾರ ವಿತರಣೆ

KSRTC One crore compensation distributed to those who died in the accident
The Bengaluru Live April 26, 2025 5:00 PM 1 minute read
KSRTC | ಕೆ‌.ಎಸ್.ಆರ್.ಟಿ.ಸಿ ಅಪಘಾತದಲ್ಲಿ ಮೃತರಾದವರಿಗೆ ಒಂದು ಕೋಟಿ ಪರಿಹಾರ ವಿತರಣೆ

KSRTC | ಕೆ‌.ಎಸ್.ಆರ್.ಟಿ.ಸಿ ಅಪಘಾತದಲ್ಲಿ ಮೃತರಾದವರಿಗೆ ಒಂದು ಕೋಟಿ ಪರಿಹಾರ ವಿತರಣೆ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಅಪಘಾತದಲ್ಲಿ ಗಾಯಗೊಂಡು ಕಾಲು ಕಳೆದುಕೊಂಡ ಸಿಬ್ಬಂದಿಗೆ ಪ್ರಪಥಮ ಬಾರಿಗೆ ರೂ.25 ಲಕ್ಷ ಪರಿಹಾರ ವಿತರಣೆ

ಬೆಂಗಳೂರು, ಏಪ್ರಿಲ್ 26, ( ಕರ್ನಾಟಕ ವಾರ್ತೆ): ಇದೇ ಪ್ರಪ್ರಥಮ ಬಾರಿಗೆ ಅಪಘಾತದಲ್ಲಿ ಗಾಯಗೊಂಡು ಕಾಲು ಕಳೆದು ಕೊಂಡ ಸಿಬ್ಬಂದಿಗೆ ರೂ. 25.00 ಲಕ್ಷ ಹಾಗೂ ಅಪಘಾತದಲ್ಲಿ ಮೃತಪಟ್ಟ ಸಿಬ್ಬಂದಿಗಳ ಕುಟುಂಬಕ್ಕೆ ತಲಾ ರೂ.1.00 ಕೋಟಿಯಂತೆ ಇಬ್ಬರಿಗೆ ರೂ.2.00 ಕೋಟಿ ಹಾಗೂ ಅಪಘಾತ ಹೊರತುಪಡಿಸಿ ಇತರೆ ಕಾರಣಗಳಿಂದ ಮೃತಪಟ್ಟ (31 ಸಿಬ್ಬಂದಿಗಳ ಅವಲಂಬಿತರಿಗೆ ತಲಾ ರೂ.10 ಲಕ್ಷದಂತೆ) ರೂ.3.10 ಕೋಟಿ ಪರಿಹಾರ ವಿತರಣೆಯನ್ನು ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ವಿತರಣೆ ಮಾಡಿದರು.

ಇಂದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಛೇರಿಯಲ್ಲಿ ಹಮ್ಮಿಕೊಳ್ಳಲಾದ ಸಮಾರಂಭದಲ್ಲಿ ಚೆಕ್ ವಿತರಿಸಿ ಅಪಘಾತದಿಂದ ಮೃತಪಟ್ಟ ಸಿಬ್ಬಂದಿಗಳ ಅವಲಂಬಿತರಿಗೆ ಸಾಂತ್ವನ ಹೇಳಿ ನಂತರ ಮಾತನಾಡಿದ ಸಚಿವರು, ಸಿಬ್ಬಂದಿಗಳ ಜೀವ ಅಮೂಲ್ಯವಾದದ್ದು, ಅವರನ್ನು ಮರಳಿ ಕರೆತರಲು ಸಾಧ್ಯವಾಗುವುದಿಲ್ಲ, ಆದರೆ. ಅವರ ಅವಲಂಬಿತರ ಮುಂದಿನ ಜೀವನವು ಆರ್ಥಿಕವಾಗಿ ಭದ್ರತೆಯಿಂದ ಕೂಡಿರಲಿ ಎಂಬ ಸದ್ದುದೇಶದಿಂದ ಸಾರಿಗೆ ಸುರಕ್ಷಾ ಯೋಜನೆಯನ್ನು ಜಾರಿಗೊಳಿಸಿರುವುದಾಗಿ ತಿಳಿಸಿದರು.

ಸಾರಿಗೆ ಸಿಬ್ಬಂದಿಗಳು ಹಗಲು ಇರಳು ಸಂಸ್ಥೆಗಾಗಿ ಶ್ರಮಿಸಿರುವುದರಿಂದ ಸಾರಿಗೆ ಸಂಸ್ಥೆಯು ಇಂದು ಉನ್ನತ ಸ್ಥಾನದಲ್ಲಿರುತ್ತದೆ. ಮೃತ ಸಿಬ್ಬಂದಿಗಳ ಕುಟುಂಬವನ್ನು ನೋಡಿಕೊಳ್ಳುವುದು ಸಂಸ್ಥೆಯ ಜವಾಬ್ದಾರಿಯಾಗಿರುತ್ತದೆ. ಈ ನಿಟ್ಟಿನಲ್ಲಿ ಮೃತರ ಅವಲಂಬಿತರಿಗೆ ಈಗಾಗಲೇ ನಾಲ್ಕು ನಿಗಮಗಳಲ್ಲಿ ಅನುಕಂಪದ ಆಧಾರದ ಮೇಲೆ 1000 ನೌಕರಿ ನೀಡಿರುವುದಾಗಿ ತಿಳಿಸಿದರು.

ಇಂದು ವಿತರಿಸಲಾಗಿರುವ ಪರಿಹಾರದ ಮೊತ್ತವನ್ನು ಸೂಕ್ತ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳಬೇಕು ಮಕ್ಕಳ ವಿದ್ಯಾಭ್ಯಾಸ, ಮನೆ ನಿರ್ಮಾಣ ಮತ್ತು ಇತರ ಶುಭಕಾರ್ಯಗಳಿಗೆ ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದರು. ಬಡ್ಡಿ ವ್ಯಾಮೋಹಕ್ಕೆ ಒಳಗಾಗಿ ಪರಿಹಾರ ಧನವನ್ನು ಯಾರಿಗೂ ನೀಡದಂತೆ ಕಿವಿ ಮಾತು ಹೇಳಿದರು.

ಹಣವಿದ್ದರೆ ಎಲ್ಲರು ನೆಂಟರೆ ಆದರೆ ಸೂಕ್ತವಾದ ರೀತಿಯಲ್ಲಿ ಹಣ ಬಳಕೆ ಮಾಡಿಕೊಳ್ಳಲು ತಿಳಿಸಿದರು.

ಕಾರ್ಮಿಕರ ಆರೋಗ್ಯವನ್ನು ಕಾಪಾಡುವ ದೃಷ್ಟಿಯಿಂದ “ಕೆಎಸ್‌ಆರ್ ಟಿಸಿ ಆರೋಗ್ಯ ಯೋಜನೆಯನ್ನು ಕೂಡ ಜಾರಿಗೆ ತಂದಿದ್ದು, ರಾಜ್ಯಾದಾದ್ಯಂತ 300 ಕ್ಕೂ ಅಧಿಕ ಆಸ್ಪತ್ರೆಗಲ್ಲಿ ಉಚಿತವಾಗಿ ಚಿಕಿತ್ಸೆ ಪಡೆಯಲು ಅನುವು ಮಾಡಿಕೊಟ್ಟಿದ್ದು, ಈವರೆಗೂ 56,000 ಕ್ಕೂ ಹೆಚ್ಚು ಸಿಬ್ಬಂದಿ/ಅವಲಂಬಿತರು ಚಿಕಿತ್ಸೆ ಪಡೆದಿರುವುದಾಗಿ ತಿಳಿಸಿದರು.

ಇದೇ ಪ್ರಪ್ರಥಮ ಬಾರಿಗೆ ನಿಗಮದ ವಾಹನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಅಪಘಾತಕ್ಕೆ ಒಳಪಟ್ಟು, ಬಲಗಾಲಿನ ಮಂಡಿಯ ಕೆಳಗೆ ಕಾಲನ್ನು ಕಳೆದುಕೊಂಡ ಸುನಿಲ್ ಕುಮಾರ್ ಬಿ.ಡಿ. ಚಾಲಕ-ಕಂ-ನಿರ್ವಾಹಕ, ಬಿಲ್ಲೆ ಸಂಖ್ಯೆ. 1624, ಅರಕಲಗೂಡು ಘಟಕ, ಹಾಸನ ವಿಭಾಗ ರವರಿಗೆ ಪರಿಹಾರವಾಗಿ ರೂ.25.00 ಲಕ್ಷಗಳನ್ನು ವಿತರಿಸಲಾಯಿತು.

ಇದಲ್ಲದೆ ಅವರಿಗೆ ದಿನಾಂಕ: 25-03-24 ರಿಂದ 09-12-24 ರವರೆಗೆ 08 ತಿಂಗಳು 14 ದಿನಗಳ ಅವಧಿಗೆ ಐ.ಓ.ಡಿ ನೀಡಲಾಗಿದೆ.

ಸಂಸ್ಥೆಯ ವತಿಯಿಂದ ಪೂರ್ಣ ವೈದ್ಯಕೀಯ ವೆಚ್ಚ ರೂ.4,85,762-00 ಗಳನ್ನು ಭರಿಸಲಾಗಿದೆ ಹಾಗೂ ಸದರಿ ನೌಕರರಿಗೆ ಲಘು ಹುದ್ದೆ ನೀಡಿ ತಾಂತ್ರಿಕ ಸಹಾಯಕ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಲು ಅನುವು ಮಾಡಿಕೊಡಲಾಗಿದೆ.

ತನ್ನ ಸಿಬ್ಬಂದಿಗಳ ಅವಲಂಬಿತರ ಜೀವನಕ್ಕೆ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಕರ್ತವ್ಯದಲ್ಲಿರುವಾಗ ಅಥವಾ ಕರ್ತವ್ಯದಲ್ಲಿಲ್ಲದ ಸಂದರ್ಭದಲ್ಲಿ ಅಪಘಾತದಿಂದ ಮೃತಪಟ್ಟಲ್ಲಿ ರೂ.1.00 ಕೋಟಿ ಅಪಘಾತ ವಿಮಾ ಪರಿಹಾರ ಒದಗಿಸುವ ಸಾರಿಗೆ ಸುರಕ್ಷಾ ಅಪಘಾತ ವಿಮಾ ಯೋಜನೆಯನ್ನು ಜಾರಿಗೆ ತರಲಾಗಿರುತ್ತದೆ.

ಇದುವರೆವಿಗೂ 24 ಜನ ನೌಕರರ ಕುಟುಂಬದವರಿಗೆ ತಲಾ ರೂ.1 ಕೋಟಿಗಳ ಅಪಘಾತ ವಿಮಾ ಮೊತ್ತವನ್ನು ಈಗಾಗಲೇ ವಿತರಿಸಲಾಗಿದೆ. ಇಂದು, ಕರ್ತವ್ಯದಲ್ಲಿರುವಾಗ ಅಪಘಾತಕ್ಕೆ ಒಳಪಟ್ಟು ಮೃತಪಟ್ಟ ಇಬ್ಬರು ಸಿಬ್ಬಂದಿಗಳ ಅವಲಂಬಿತರಿಗೆ ತಲಾ ರೂ. 1.00 ಕೋಟಿ ಚೆಕ್ ನೀಡಲಾಗಿದೆ. ಈವರೆಗೂ 26 ಸಿಬ್ಬಂದಿಗಳ ಅವಲಂಭಿತರಿಗೆ ಒಟ್ಟಾರೆ ರೂ.26 ಕೋಟಿ ಪರಿಹಾರ ನೀಡಲಾಗಿದೆ.

ನೌಕರರ ಕುಟುಂಬ ಕಲ್ಯಾಣ ಪರಿಹಾರ ಯೋಜನೆ: ಹೃದಯಾಘಾತ, ಕ್ಯಾನ್ಸರ್, ಸ್ಟ್ರೋಕ್ ಮತ್ತಿತರ ಕಾರಣಗಳಿಂದ ಮರಣವನ್ನಪ್ಪುವ ನೌಕರರ ಸಂಖ್ಯೆಯು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗುತ್ತಿರುವ ವಿಷಯವನ್ನು ಮನಗಂಡು, ಈ ಕಾರಣದಿಂದ ಮೃತರಾಗುವ ಕುಟುಂಬದ ಅವಲಂಬಿತರು ಅನುಭವಿಸುವ ಕಷ್ಟಗಳನ್ನು ಗಮನಿಸಿ, ಪರಿಹಾರ ಮೊತ್ತವಾದ ರೂ.3 ಲಕ್ಷಗಳನ್ನು ದಿನಾಂಕ: 01.11.2023 ರಿಂದ ರೂ.10 ಲಕ್ಷಗಳಿಗೆ ಹೆಚ್ಚಿಸಲಾಗಿದೆ. ಇದುವರೆವಿಗೂ 94 ಪ್ರಕರಣಗಳಲ್ಲಿ ತಲಾ ರೂ.10 ಲಕ್ಷಗಳ ಪರಿಹಾರ ಧನವನ್ನು ನೀಡಿದ್ದು ನಂತರದಲ್ಲಿ ಕಾಯಿಲೆಗಳಿಂದ ಮರಣ ಹೊಂದಿದ 31 ಸಿಬ್ಬಂದಿಗಳ ಅರ್ಹ ಪ್ರಕರಣಗಳಲ್ಲಿ ಕುಟುಂಬದ ಸದಸ್ಯರಿಗೆ ತಲಾ ರೂ.10.00 ಲಕ್ಷಗಳ ಪರಿಹಾರದ ಚೆಕ್‌ನ್ನು ಇಂದು ವಿತರಿಸಲಾಯಿತು. ಈವರೆಗೂ 125 ಸಿಬ್ಬಂದಿಗಳ ಅವಲಂಭಿತರಿಗೆ ಒಟ್ಟು ರೂ. 12.50 ಕೋಟಿಗಳ ಪರಿಹಾರ ನೀಡಲಾಗಿದೆ.

ಕರಾರಸಾ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ
ಅನ್ಬುಕುಮಾರ್ ವಿ. ಅವರು ಮಾತನಾಡಿ, ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು ಹೇಳಿರುವ ಕಿವಿ ಮಾತನ್ನು ಚಾಚೂ ತಪ್ಪದೆ ಪಾಲಿಸುವಂತೆ ತಿಳಿಸಿದರು. ಹಣವನ್ನು ಸದುಪಯೋಗಪಡಿಸಿ ಕೊಳ್ಳಿ ಯಾರನ್ನು ನಂಬಿ ದುಡ್ಡನ್ನು ಕಳೆದುಕೊಳ್ಳಬೇಡಿ. ಸಂಸ್ಥೆ ಸದಾ ತಮ್ಮೊಡನೆ ಇದೆ ಎಂದು ತಿಳಿಸುತ್ತಾ, ಮಾನ್ಯ ಸಚಿವರು, ಮಾನ್ಯ ಅಧ್ಯಕ್ಷರು ಮತ್ತು ಮಾನ್ಯ ಉಪಾಧ್ಯಕ್ಷರು, ಕರಾರಸಾ ನಿಗಮ ರವರ ಮಾರ್ಗದರ್ಶನದಂತೆ, ನಿಗಮದಲ್ಲಿ ಹತ್ತು ಹಲವು ಕಾರ್ಮಿಕ ಕಲ್ಯಾಣ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ಆರ್. ರಾಮಚಂದ್ರನ್ ಭಾಆಸೇ, ವ್ಯವಸ್ಥಾಪಕ ನಿರ್ದೇಶಕರು, ಬೆಂ.ಮ.ಸಾ. ಸಂಸ್ಥೆ, ಡಾ. ನಂದಿನಿದೇವಿ ಭಾಆಸೇ., ನಿರ್ದೇಶಕರು (ಸಿ ಮತ್ತು ಜಾ), ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತಿರಿದ್ದರು.

About the Author

The Bengaluru Live

Administrator

Visit Website View All Posts

Post navigation

Previous: CM Siddaramaiah | ಅಭಿವೃದ್ಧಿಗೆ ನಾವು ಹಣ ಕೊಡ್ತಿದ್ದೀವಿ. ಜನ ಖುಷಿಯಾಗಿದ್ದಾರೆ. ಬಿಜೆಪಿ ಗೆ ಹೊಟ್ಟೆಯುರಿ: ಸಿ.ಎಂ ಸಿದ್ದರಾಮಯ್ಯ
Next: BBMP | ಐಎಎಸ್ ಅಧಿಕಾರಿ ತುಷಾರ್ ಗಿರಿ ನಾಥ್ ಅವರನ್ನು ನಗರಾಭಿವೃದ್ಧಿ ಇಲಾಖೆಯ ಎಸಿಎಸ್ ಆಗಿ, ಮಹೇಶ್ವರ್ ರಾವ್ ಅವರನ್ನು ಬಿಬಿಎಂಪಿ ಮುಖ್ಯ ಆಯುಕ್ತರನ್ನಾಗಿ ವರ್ಗಾವಣೆ

Related Stories

ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಹೂವಿನ ಹಾರ ಹಾಕಿದ ನೀಲಿ-ಬೆಳ್ಳಿ ಬಣ್ಣದ ಮೆಟ್ರೋ ರೈಲಿನ ಪಕ್ಕ ಸುರಕ್ಷತಾ ಕವಚ, ಹೆಲ್ಮೆಟ್ ಧರಿಸಿ ನಿಂತಿರುವ ಯೋಜನಾ ಸಿಬ್ಬಂದಿ
  • ಬೆಂಗಳೂರು ನಗರ

ಬ್ಲೂ ಲೈನ್ ಫೇಸ್ 2ಎ ಮೆಟ್ರೋ ಪರೀಕ್ಷಾರ್ಥ ಸಂಚಾರ: ನವೆಂಬರ್ 24ರಂದು ಕೆ.ಆರ್. ಪುರಂನಿಂದ ದೊಡ್ಡನೆಕ್ಕುಂದಿಗೆ ರೈಲು

The Bengaluru Live November 23, 2026 7:26 PM
ಕರ್ನಾಟಕ ಲೋಕಾಯುಕ್ತ ಕಚೇರಿ — ಕಡತ ಚಿತ್ರ
  • ಕರ್ನಾಟಕ

‘ಬಿಗ್ ಬುಲೆಟಿನ್’ ಹೇಳಿಕೆ: ಪಬ್ಲಿಕ್ ಟಿವಿಯ ಎಚ್.ಆರ್. ರಂಗನಾಥ್, ಅರುಣ್ ಬಡಿಗೇರ್‌ಗೆ ಲೋಕಾಯುಕ್ತ ನೋಟಿಸ್

The Bengaluru Live November 23, 2026 7:14 PM
ರಸ್ತೆ ಸುರಕ್ಷತಾ ಪ್ರಾಧಿಕಾರದ ಸಭೆಯಲ್ಲಿ ಮೈಕ್‌ಗಳಿರುವ ಮೇಜಿನ ಬಳಿ ಕುಳಿತಿರುವ ಹಿರಿಯ ಅಧಿಕಾರಿಗಳು
  • ಕರ್ನಾಟಕ

ರಸ್ತೆ ಅಪಘಾತ ತಗ್ಗಿಸಲು ಎಐ ಕ್ಯಾಮೆರಾ; ತುರ್ತು ಚಿಕಿತ್ಸೆಗೆ ₹2.5 ಲಕ್ಷದವರೆಗೆ ನಗದುರಹಿತ ನೆರವು, ₹322 ಕೋಟಿ ಕ್ರಿಯಾ ಯೋಜನೆ

The Bengaluru Live November 23, 2026 5:59 PM

Latest Post

ಬ್ಲೂ ಲೈನ್ ಫೇಸ್ 2ಎ ಮೆಟ್ರೋ ಪರೀಕ್ಷಾರ್ಥ ಸಂಚಾರ: ನವೆಂಬರ್ 24ರಂದು ಕೆ.ಆರ್. ಪುರಂನಿಂದ ದೊಡ್ಡನೆಕ್ಕುಂದಿಗೆ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಹೂವಿನ ಹಾರ ಹಾಕಿದ ನೀಲಿ-ಬೆಳ್ಳಿ ಬಣ್ಣದ ಮೆಟ್ರೋ ರೈಲಿನ ಪಕ್ಕ ಸುರಕ್ಷತಾ ಕವಚ, ಹೆಲ್ಮೆಟ್ ಧರಿಸಿ ನಿಂತಿರುವ ಯೋಜನಾ ಸಿಬ್ಬಂದಿ
  • ಬೆಂಗಳೂರು ನಗರ

ಬ್ಲೂ ಲೈನ್ ಫೇಸ್ 2ಎ ಮೆಟ್ರೋ ಪರೀಕ್ಷಾರ್ಥ ಸಂಚಾರ: ನವೆಂಬರ್ 24ರಂದು ಕೆ.ಆರ್. ಪುರಂನಿಂದ ದೊಡ್ಡನೆಕ್ಕುಂದಿಗೆ ರೈಲು

November 23, 2026 7:26 PM
‘ಬಿಗ್ ಬುಲೆಟಿನ್’ ಹೇಳಿಕೆ: ಪಬ್ಲಿಕ್ ಟಿವಿಯ ಎಚ್.ಆರ್. ರಂಗನಾಥ್, ಅರುಣ್ ಬಡಿಗೇರ್‌ಗೆ ಲೋಕಾಯುಕ್ತ ನೋಟಿಸ್ ಕರ್ನಾಟಕ ಲೋಕಾಯುಕ್ತ ಕಚೇರಿ — ಕಡತ ಚಿತ್ರ
  • ಕರ್ನಾಟಕ

‘ಬಿಗ್ ಬುಲೆಟಿನ್’ ಹೇಳಿಕೆ: ಪಬ್ಲಿಕ್ ಟಿವಿಯ ಎಚ್.ಆರ್. ರಂಗನಾಥ್, ಅರುಣ್ ಬಡಿಗೇರ್‌ಗೆ ಲೋಕಾಯುಕ್ತ ನೋಟಿಸ್

November 23, 2026 7:14 PM
ರಸ್ತೆ ಅಪಘಾತ ತಗ್ಗಿಸಲು ಎಐ ಕ್ಯಾಮೆರಾ; ತುರ್ತು ಚಿಕಿತ್ಸೆಗೆ ₹2.5 ಲಕ್ಷದವರೆಗೆ ನಗದುರಹಿತ ನೆರವು, ₹322 ಕೋಟಿ ಕ್ರಿಯಾ ಯೋಜನೆ ರಸ್ತೆ ಸುರಕ್ಷತಾ ಪ್ರಾಧಿಕಾರದ ಸಭೆಯಲ್ಲಿ ಮೈಕ್‌ಗಳಿರುವ ಮೇಜಿನ ಬಳಿ ಕುಳಿತಿರುವ ಹಿರಿಯ ಅಧಿಕಾರಿಗಳು
  • ಕರ್ನಾಟಕ

ರಸ್ತೆ ಅಪಘಾತ ತಗ್ಗಿಸಲು ಎಐ ಕ್ಯಾಮೆರಾ; ತುರ್ತು ಚಿಕಿತ್ಸೆಗೆ ₹2.5 ಲಕ್ಷದವರೆಗೆ ನಗದುರಹಿತ ನೆರವು, ₹322 ಕೋಟಿ ಕ್ರಿಯಾ ಯೋಜನೆ

November 23, 2026 5:59 PM
ವಿಧಾನಸೌಧದಲ್ಲಿ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ ಹೆಬಾ ಹಗ್ರಾಸ್ ಅವರಿಗೆ ಕರ್ನಾಟಕದ ವಿಕಲಚೇತನ ಸಬಲೀಕರಣ ಮಾದರಿ ಪ್ರಸ್ತುತ ವಿಧಾನಸೌಧದ ಸಂವಾದ ಸಭೆಯಲ್ಲಿ ಸಭಾ ಮೇಜಿನ ಬಳಿ ಕುಳಿತಿರುವ ಅಧಿಕಾರಿಗಳು ಮತ್ತು ಭೇಟಿ ನೀಡಿದ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ
  • ಕರ್ನಾಟಕ

ವಿಧಾನಸೌಧದಲ್ಲಿ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ ಹೆಬಾ ಹಗ್ರಾಸ್ ಅವರಿಗೆ ಕರ್ನಾಟಕದ ವಿಕಲಚೇತನ ಸಬಲೀಕರಣ ಮಾದರಿ ಪ್ರಸ್ತುತ

November 23, 2026 5:37 PM
ನವೆಂಬರ್ 24 ಮತ್ತು 25ರಂದು ದಕ್ಷಿಣ ಒಳನಾಡಿನಲ್ಲಿ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ನವೆಂಬರ್ 24 ಮತ್ತು 25ರಂದು ದಕ್ಷಿಣ ಒಳನಾಡಿನಲ್ಲಿ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ

November 23, 2026 5:34 PM
ನವೆಂಬರ್ 25ರಂದು ಹೆಣ್ಣೂರು, ಹೊರಮಾವು, ಹೊಯ್ಸಳ ನಗರ ಸುತ್ತಮುತ್ತ ವಿದ್ಯುತ್ ವ್ಯತ್ಯಯ ಬೆಂಗಳೂರಿನ ಬೆಸ್ಕಾಂ ಕಾರ್ಪೊರೇಟ್ ಕಚೇರಿಯ ಫೈಲ್ ಚಿತ್ರ
  • ಬೆಂಗಳೂರು ನಗರ

ನವೆಂಬರ್ 25ರಂದು ಹೆಣ್ಣೂರು, ಹೊರಮಾವು, ಹೊಯ್ಸಳ ನಗರ ಸುತ್ತಮುತ್ತ ವಿದ್ಯುತ್ ವ್ಯತ್ಯಯ

November 23, 2026 5:28 PM

ನೀವು ತಪ್ಪಿಸಿಕೊಂಡಿರಬಹುದು

ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಹೂವಿನ ಹಾರ ಹಾಕಿದ ನೀಲಿ-ಬೆಳ್ಳಿ ಬಣ್ಣದ ಮೆಟ್ರೋ ರೈಲಿನ ಪಕ್ಕ ಸುರಕ್ಷತಾ ಕವಚ, ಹೆಲ್ಮೆಟ್ ಧರಿಸಿ ನಿಂತಿರುವ ಯೋಜನಾ ಸಿಬ್ಬಂದಿ
  • ಬೆಂಗಳೂರು ನಗರ

ಬ್ಲೂ ಲೈನ್ ಫೇಸ್ 2ಎ ಮೆಟ್ರೋ ಪರೀಕ್ಷಾರ್ಥ ಸಂಚಾರ: ನವೆಂಬರ್ 24ರಂದು ಕೆ.ಆರ್. ಪುರಂನಿಂದ ದೊಡ್ಡನೆಕ್ಕುಂದಿಗೆ ರೈಲು

The Bengaluru Live November 23, 2026 7:26 PM
ಕರ್ನಾಟಕ ಲೋಕಾಯುಕ್ತ ಕಚೇರಿ — ಕಡತ ಚಿತ್ರ
  • ಕರ್ನಾಟಕ

‘ಬಿಗ್ ಬುಲೆಟಿನ್’ ಹೇಳಿಕೆ: ಪಬ್ಲಿಕ್ ಟಿವಿಯ ಎಚ್.ಆರ್. ರಂಗನಾಥ್, ಅರುಣ್ ಬಡಿಗೇರ್‌ಗೆ ಲೋಕಾಯುಕ್ತ ನೋಟಿಸ್

The Bengaluru Live November 23, 2026 7:14 PM
ರಸ್ತೆ ಸುರಕ್ಷತಾ ಪ್ರಾಧಿಕಾರದ ಸಭೆಯಲ್ಲಿ ಮೈಕ್‌ಗಳಿರುವ ಮೇಜಿನ ಬಳಿ ಕುಳಿತಿರುವ ಹಿರಿಯ ಅಧಿಕಾರಿಗಳು
  • ಕರ್ನಾಟಕ

ರಸ್ತೆ ಅಪಘಾತ ತಗ್ಗಿಸಲು ಎಐ ಕ್ಯಾಮೆರಾ; ತುರ್ತು ಚಿಕಿತ್ಸೆಗೆ ₹2.5 ಲಕ್ಷದವರೆಗೆ ನಗದುರಹಿತ ನೆರವು, ₹322 ಕೋಟಿ ಕ್ರಿಯಾ ಯೋಜನೆ

The Bengaluru Live November 23, 2026 5:59 PM
ವಿಧಾನಸೌಧದ ಸಂವಾದ ಸಭೆಯಲ್ಲಿ ಸಭಾ ಮೇಜಿನ ಬಳಿ ಕುಳಿತಿರುವ ಅಧಿಕಾರಿಗಳು ಮತ್ತು ಭೇಟಿ ನೀಡಿದ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ
  • ಕರ್ನಾಟಕ

ವಿಧಾನಸೌಧದಲ್ಲಿ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ ಹೆಬಾ ಹಗ್ರಾಸ್ ಅವರಿಗೆ ಕರ್ನಾಟಕದ ವಿಕಲಚೇತನ ಸಬಲೀಕರಣ ಮಾದರಿ ಪ್ರಸ್ತುತ

The Bengaluru Live November 23, 2026 5:37 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಬ್ಲೂ ಲೈನ್ ಫೇಸ್ 2ಎ ಮೆಟ್ರೋ ಪರೀಕ್ಷಾರ್ಥ ಸಂಚಾರ: ನವೆಂಬರ್ 24ರಂದು ಕೆ.ಆರ್. ಪುರಂನಿಂದ ದೊಡ್ಡನೆಕ್ಕುಂದಿಗೆ ರೈಲು
  • ‘ಬಿಗ್ ಬುಲೆಟಿನ್’ ಹೇಳಿಕೆ: ಪಬ್ಲಿಕ್ ಟಿವಿಯ ಎಚ್.ಆರ್. ರಂಗನಾಥ್, ಅರುಣ್ ಬಡಿಗೇರ್‌ಗೆ ಲೋಕಾಯುಕ್ತ ನೋಟಿಸ್
  • ರಸ್ತೆ ಅಪಘಾತ ತಗ್ಗಿಸಲು ಎಐ ಕ್ಯಾಮೆರಾ; ತುರ್ತು ಚಿಕಿತ್ಸೆಗೆ ₹2.5 ಲಕ್ಷದವರೆಗೆ ನಗದುರಹಿತ ನೆರವು, ₹322 ಕೋಟಿ ಕ್ರಿಯಾ ಯೋಜನೆ
  • ವಿಧಾನಸೌಧದಲ್ಲಿ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ ಹೆಬಾ ಹಗ್ರಾಸ್ ಅವರಿಗೆ ಕರ್ನಾಟಕದ ವಿಕಲಚೇತನ ಸಬಲೀಕರಣ ಮಾದರಿ ಪ್ರಸ್ತುತ
©Copyright 2025 The Bengaluru Live All rights reserved. | MoreNews by AF themes.