Home ಬೆಂಗಳೂರು ನಗರ ಕುಮಾರಸ್ವಾಮಿ ಗಾಳಿಯಲ್ಲಿ ಗುಂಡು ಹೊಡೆಯುವುದು ಬೇಡ, ಅಧಿವೇಶನದಲ್ಲಿ ಚರ್ಚೆಗೆ ಸಿದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಸವಾಲು

ಕುಮಾರಸ್ವಾಮಿ ಗಾಳಿಯಲ್ಲಿ ಗುಂಡು ಹೊಡೆಯುವುದು ಬೇಡ, ಅಧಿವೇಶನದಲ್ಲಿ ಚರ್ಚೆಗೆ ಸಿದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಸವಾಲು

48
0
Kumaraswamy should not fire in air, I am ready for discussion in Assembly session: Deputy Chief Minister DK Shivakumar
Kumaraswamy should not fire in air, I am ready for discussion in Assembly session: Deputy Chief Minister DK Shivakumar

ಬೆಂಗಳೂರು:

“ನಾನು ಏನು ಮಾಡಿದ್ದೇನೆ, ಕುಮಾರಸ್ವಾಮಿ ಏನು ಮಾಡಿದ್ದಾರೆ ಎಂದು ಗಾಳಿಯಲ್ಲಿ ಗುಂಡು ಹೊಡೆಯುವುದು ಬೇಡ. ಅಧಿವೇಶನದಲ್ಲಿ ದಾಖಲೆ ಸಮೇತ ಚರ್ಚೆ ಮಾಡೋಣ, ಅವರ ಸವಾಲು ಸ್ವೀಕರಿಸಿದ್ದೇನೆ” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.

ಸದಾಶಿವನಗರ ನಿವಾಸ ಹಾಗೂ ಸಿಎಂ ಗೃಹಕಚೇರಿ ಕೃಷ್ಣಾ ಬಳಿ, ಕುಮಾರಸ್ವಾಮಿ ಅವರು ತಮ್ಮ ಸವಾಲು ಸ್ವೀಕರಿಸಿರುವ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಅವರು ಉತ್ತರಿಸಿದರು.

“ಕುಮಾರಸ್ವಾಮಿ ನನ್ನ ಸವಾಲು ಸ್ವೀಕಾರ ಮಾಡಿರುವುದು ಬಹಳ ಸಂತೋಷ. ಅವರ ಪ್ರತಿ ಸವಾಲನ್ನು ನಾನು ಸ್ವೀಕರಿಸುವೆ. ನಮ್ಮ ಚರ್ಚೆ ಯಾವೊದೋ ಒಂದು ಚಾನೆಲ್ ನಲ್ಲಿ ಆಗೋದು ಬೇಡ. ಎಲ್ಲಾ ಸುದ್ದಿ ವಾಹಿನಿಗಳಿಗೂ ಸಿಗುವಂತೆ ಅಧಿವೇಶನದಲ್ಲೇ ಚರ್ಚೆ ಮಾಡೋಣ. ಯಾರು ಏನೇನು ಮಾಡಿದ್ದಾರೆ ಎಂದು ಎಲ್ಲವನ್ನೂ ಅಧಿವೇಶನದಲ್ಲಿ ಬಿಚ್ಚಿಡೋಣ. ಅವರ ಬಳಿ ಇರುವ ಸರಕುಗಳನ್ನು ತಂದು ಅವರು ಮಾತನಾಡಲಿ. ನನ್ನ ಬಳಿ ಇರುವ ದಾಖಲೆಗಳನ್ನು ಮುಂದಿಟ್ಟು ನಾನು ಮಾತನಾಡುತ್ತೇನೆ.

ಈ ಹಿಂದೆಯೂ ನಾನು ಇಂತಹ ಬಹಿರಂಗ ಚರ್ಚೆ ಸವಾಲು ಸ್ವೀಕರಿಸಿ, ಉತ್ತರ ಕೊಟ್ಟಿದ್ದೇನೆ. ನಂತರ ನನ್ನ ಬಳಿ ಬಂದು ಕ್ಷಮೆ ಕೇಳಿದ್ದನ್ನು ನೋಡಿದ್ದೇವೆ” ಎಂದು ತಿಳಿಸಿದರು.

ವಿಧಾನಸೌಧ ಕಚೇರಿ ನವೀಕರಣ ಅಗತ್ಯತೆ ಬಗ್ಗೆ ಬಿಜೆಪಿ ಮಾಡಿರುವ ಟೀಕೆ ಬಗ್ಗೆ ಕೇಳಿದಾಗ, “ಬಿಜೆಪಿಗೆ ಸಾಮಾನ್ಯ ಜ್ಞಾನ ಇಲ್ಲ. ಅದು ನನ್ನ ಕಚೇರಿ. ನಾನು ಅಲ್ಲಿ ಅನೇಕ ಜನರು, ಗಣ್ಯರನ್ನು ಭೇಟಿ ಮಾಡಬೇಕಾಗುತ್ತದೆ. ನೆದರ್ ಲ್ಯಾಂಡ್ ಪ್ರಧಾನಮಂತ್ರಿಗಳು ವಿಧಾನಸೌಧಕ್ಕೆ ಬಂದಾಗ ನಾನು ಎಂ.ಬಿ. ಪಾಟೀಲ್ ಅವರ ಕೊಠಡಿಗೆ ಹೋಗಿ ಅವರನ್ನು ಭೇಟಿ ಮಾಡಬೇಕಾಯಿತು. ಗಣ್ಯರು ಭೇಟಿಗೆ ಬಂದಾಗ ಅವರಿಗೆ ಗೌರವ ನೀಡಲು ಅಚ್ಚುಕಟ್ಟಾದ ಕೊಠಡಿ, ಸೂಕ್ತ ಸ್ಥಳಾವಕಾಶ ಇರಬೇಕು. ನಾವು ನಮ್ಮ ಮಣ್ಣಿನ ಸಂಸ್ಕೃತಿ ಪಾಲಿಸಬೇಕು. ನಾವು ಬೆಂಗಳೂರು ಹಾಗೂ ಇಂಡಿಯಾವನ್ನು ಉತ್ತಮವಾಗಿ ಬಿಂಬಿಸಬೇಕು. ಅದಕ್ಕಾಗಿ ಮಾಡುತ್ತಿದ್ದೇವೆ. ಬಿಜೆಪಿ ಅವರಿಗೆ ಈ ಬಗ್ಗೆ ಕಾಮನ್ ಸೆನ್ಸ್ ಇಲ್ಲ” ಎಂದು ತಿರುಗೇಟು ನೀಡಿದರು.

LEAVE A REPLY

Please enter your comment!
Please enter your name here