Home ಬೆಂಗಳೂರು ನಗರ ಸಿ.ಡಿ ಪ್ರಕರಣವನ್ನು ಪೊಲೀಸರು ಸ್ವಯಂ ಪ್ರೇರಿತವಾಗಿ ತನಿಖೆ ನಡೆಸಬೇಕು: ಕುಮಾರಸ್ವಾಮಿ

ಸಿ.ಡಿ ಪ್ರಕರಣವನ್ನು ಪೊಲೀಸರು ಸ್ವಯಂ ಪ್ರೇರಿತವಾಗಿ ತನಿಖೆ ನಡೆಸಬೇಕು: ಕುಮಾರಸ್ವಾಮಿ

85
0
Advertisement
bengaluru

ಕೋಲಾರ:

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸಿ.ಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ನೀಡಿದ್ದ ದೂರು ವಾಪಸ್ ಪಡೆದ ಮಾತ್ರಕ್ಕೆ ಹಿನ್ನೆಲೆಯಲ್ಲಿ ಪೊಲೀಸರು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡು ತನಿಖೆ ನಡೆಸಬೇಕು. ಪ್ರಕರಣವನ್ನು ಕೈಬಿಡಬಾರದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಕೋಲಾರಕ್ಕೆ ಆಗಮಿಸಿದ ಮಾಜಿ ಮುಖ್ಯಮಂತ್ರಿಗಳು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಪೊಲೀಸರು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡು ತನಿಖೆ ನಡೆಸಬೇಕು. ಪ್ರಕರಣವನ್ನು ಕೈಬಿಡಬಾರದು ಎಂದು ಹೇಳಿದ್ದಾರೆ.

ಪ್ರಕರಣದ ಬಗ್ಗೆ ಸರ್ಕಾರಕ್ಕೆ ಜವಾಬ್ದಾರಿಯಿದೆ. ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಅಸಹ್ಯಕರ ಘಟನೆಗಳು ನಡೆಯುತ್ತಿವೆ. ಸರ್ಕಾರವೇ ಈ ಪ್ರಕರಣದಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಬಹುದು ಎಂದರು.

bengaluru bengaluru

ದಿನೇಶ್ ಕಲ್ಲಹಳ್ಳಿ ದೂರು ಹಿಂಪಡೆಯಲು ಯಾರು ಪ್ರೇರಣೆ ಎಂಬುದನ್ನು ತಿಳಿದುಕೊಳ್ಳಬೇಕು. ಸಂತ್ರಸ್ತ ಮಹಿಳೆ ಅನ್ಯಾಯವಾಗಿದೆ ಎಂದು ಏಕೆ ಹೊರಗಡೆ ಬಂದಿಲ್ಲ. ಯಾವ ಕಾರಣಕ್ಕೆ ಈ ಪ್ರಕರಣ ಹೊರ ಬಂದಿದೆ. ಈ ದೂರಿನ ಸತ್ಯಾಂತ ಏನು. ಈ ದೂರಿನ ಸತ್ಯಗಳ ಜನರ ಮುಂದೆ ಬರಬೇಕಿದೆ ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.


bengaluru

LEAVE A REPLY

Please enter your comment!
Please enter your name here