Home Uncategorized Kumble Sundar Rao: ಯಕ್ಷಗಾ‌ನ ಕಲಾವಿದ, ಮಾಜಿ ಶಾಸಕ ಕುಂಬಳೆ ಸುಂದರ್ ರಾವ್ ಇನ್ನಿಲ್ಲ

Kumble Sundar Rao: ಯಕ್ಷಗಾ‌ನ ಕಲಾವಿದ, ಮಾಜಿ ಶಾಸಕ ಕುಂಬಳೆ ಸುಂದರ್ ರಾವ್ ಇನ್ನಿಲ್ಲ

30
0

ಮಂಗಳೂರು: ಯಕ್ಷರಂಗದ ಅಪ್ರತಿಮ ಕಲಾವಿದ, ಮಾಜಿ ಶಾಸಕ ಕುಂಬಳೆ ಸುಂದರ್ ರಾವ್(88) ಅವರು ವಯೋಸಹಜ ಅನಾರೋಗ್ಯ ಕಾರಣದಿಂದ ವಿಧಿವಶರಾಗಿದ್ದಾರೆ. ಯಕ್ಷಗಾನ ಮತ್ತು ತಾಳ-ಮದ್ದಳೆ ಕಲಾವಿದರೂ ಆಗಿದ್ದ ಸುಂದರ್ ರಾವ್(Kumble Sundar Rao), ಮಂಗಳೂರಿನ ಆಗಿನ ಸುರತ್ಕಲ್ ಕ್ಷೇತ್ರದ ಶಾಸಕರಾಗಿಯೂ ಸೇವೆ‌ ಸಲ್ಲಿಸಿದ್ದರು.

ಕಾಯರ್ಕಾಡಿ ಕುಂಞಕಣ್ಣ ಮತ್ತು ಕಲ್ಯಾಣಿ ದಂಪತಿ ಸುಪುತ್ರರಾಗಿ 1934ನೇ ಮಾರ್ಚ್ 20 ರಲ್ಲಿ ಕೇರಳ ರಾಜ್ಯದ ಕುಂಬಳೆಯಲ್ಲಿ ಜನಿಸಿದ ಕುಂಬಳೆ ಸುಂದರ್ ರಾವ್ ಅವರು 1994 ರಿಂದ 1999ರವರೆಗೆ ಬಿಜೆಪಿಯಿಂದ ಸುರತ್ಕಲ್ ಕ್ಷೇತ್ರದ ಶಾಸಕರಾಗಿ ಸೇವೆ ಸಲ್ಲಿಸಿದ್ದಾರೆ. ಸುರತ್ಕಲ್, ಧರ್ಮಸ್ಥಳ ಮತ್ತು ಇರಾ ಯಕ್ಷಗಾನ ಮೇಳಗಳಲ್ಲಿ ಕಲಾವಿದರಾಗಿ ಇವರು ಕಾರ್ಯ ನಿರ್ವಹಿಸಿದ್ದಾರೆ. ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿಯೂ ಸೇವೆ‌ ಸಲ್ಲಿಸಿದ್ದಾರೆ. ಜೊತೆಗೆ ಯಕ್ಷಗಾನ ಕಲಾವಿದರೊಬ್ಬರು ನೇರವಾಗಿ ಮತದಾರರಿಂದಲೇ ಆರಿಸಲ್ಪಟ್ಟ ಪ್ರಪ್ರಥಮ ಶಾಸಕರೆಂಬ ಹೆಗ್ಗಳಿಕೆ‌ಗೆ ಪಾತ್ರರಾಗಿದ್ದಾರೆ.

ಇದನ್ನೂ ಓದಿ: Vikram Kirloskar: ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಉಪಾಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್ ಹೃದಯಾಘಾತದಿಂದ ನಿಧನ

ಸುಂದರ್ ರಾವ್ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಪಿ.ದಯಾನಂದ ಪೈ ಮತ್ತು ಪಿ ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದಿಂದ 2018–2019ನೇ ಸಾಲಿನ ಯಕ್ಷಮಂಗಳ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ಲಭಿಸಿವೆ. ಇವರು ಇಬ್ಬರು ಪುತ್ರರು ಮೂವರು ಪುತ್ರಿಯರನ್ನು ಅಗಲಿದ್ದಾರೆ. ಇವರ ಅಂತ್ಯ ಸಂಸ್ಕಾರ ಗುರುವಾರ ನೆರವೇರಲಿದೆ. ಮಂಗಳೂರು ಪಂಪ್ವೆಲ್ ಬಳಿ ಇರುವ ಅವರ ಮನೆಯಲ್ಲಿ ಸಾರ್ವಜನಿಕರಿಗೆ ವೀಕ್ಷಣೆಗೆ ಅವಕಾಶ ನೀಡಲಾಗಿದೆ.

LEAVE A REPLY

Please enter your comment!
Please enter your name here