Home ಬೆಂಗಳೂರು ನಗರ Kushtagi Accident: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

Kushtagi Accident: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

50
0
Kushtagi Accident: CM Siddaramaiah announced compensation of Rs 2 lakh each to families of deceased
Kushtagi Accident: CM Siddaramaiah announced compensation of Rs 2 lakh each to families of deceased

ಬೆಂಗಳೂರು:

ಕುಷ್ಟಗಿ ತಾಲ್ಲೂಕು ವ್ಯಾಪ್ತಿಯಲ್ಲಿನ ರಾಷ್ಟ್ರೀಯ ಹೆದ್ದಾರಿಯ ಕಲಕೇರಿ ಬಳಿ ಭಾನುವಾರ ಸಂಜೆ ಲಾರಿ ಮತ್ತು ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ತಲಾ 2ಲಕ್ಷ ಪರಿಹಾರ ಘೋಷಿಸಿದ್ದಾರೆ.

WhatsApp Image 2023 05 29 at 2.24.14 PM

ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಕೊಪ್ಪಳ ಜಿಲ್ಲೆಯ ಕುಷ್ಟಗಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಎಳೆಯ ಮಕ್ಕಳು ಸೇರಿದಂತೆ 6 ಮಂದಿ ಸಾವಿಗೀಡಾದ ಸುದ್ದಿ ತಿಳಿದು ಎದೆ ನಲುಗಿತು. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಮೃತ ದುರ್ದೈವಿಗಳ ಕುಟುಂಬಕ್ಕೆ ಸರ್ಕಾರದಿಂದ ತಲಾ ರೂ. 2 ಲಕ್ಷ ಪರಿಹಾರ ನೀಡಲಾಗುವುದು. ಅತಿಯಾದ ವೇಗ, ಅಜಾಗರೂಕತೆಗಳೆ ಇಂಥ ಅಪಘಾತಗಳಿಗೆ ಕಾರಣ, ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಿ, ಸುರಕ್ಷಿತವಾಗಿರಿ ಎಂದು ಸಿಎಂ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here