Home ಉಡುಪಿ Laborer from Bihar was injured as a result of the leopard attack...

Laborer from Bihar was injured as a result of the leopard attack | ಚಿರತೆ ದಾಳಿ ನಡೆಸಿದ ಪರಿಣಾಮ ಬಿಹಾರ ಮೂಲದ ಕಾರ್ಮಿಕನಿಗೆ ಗಾಯ

24
0

ಉಡುಪಿ, ಮಾ.25 ಚಿರತೆಯೊಂದು ದಾಳಿ ನಡೆಸಿದ ಪರಿಣಾಮ ಕಾರ್ಮಿಕರೊಬ್ಬರು ಗಾಯಗೊಂಡ ಘಟನೆ ಶಿರ್ವ ಗ್ರಾಪಂ ವ್ಯಾಪ್ತಿಯ ಕಲ್ಲೊಟ್ಟು ಬಳಿ ರವಿವಾರ ರಾತ್ರಿ ವೇಳೆ ನಡೆದಿದೆ.

ಗಾಯಗೊಂಡ ಬಿಹಾರ ಮೂಲದ ಕಾರ್ಮಿಕ ಸುರೇಂದ್ರ(55) ಎಂದು ಗುರುತಿಸಲಾಗಿದೆ. ಮರಳುಗಾರಿಕೆಯಲ್ಲಿ ಕಾರ್ಮಿಕರಾಗಿ ದುಡಿಯುತ್ತಿರುವ ಇವರು, ಕಲ್ಲೊಟ್ಟು ಸಂತೋಷ್ ಪೂಜಾರಿ ಅವರ ಮನೆಯ ಜಗಲಿಯಲ್ಲಿ ರಾತ್ರಿ ಮಲಗಿದ್ದ ವೇಳೆ ಚಿರತೆ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದೆ ಎನ್ನಲಾಗಿದೆ.

ದೇಹದ ವಿವಿಧ ಭಾಗಗಳಿಗೆ ಗಾಯಗಳಾಗಿದ್ದು, ಚಿಕಿತ್ಸೆ ಗಾಗಿ ಉಡುಪಿ ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾಹಿತಿ ತಿಳಿದು ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದು, ಚಿರತೆ ಸೆರೆಗೆ ಬೋನು ಇಡುವ ಸಿದ್ಧತೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ

LEAVE A REPLY

Please enter your comment!
Please enter your name here