ಬೆಂಗಳೂರು;- ಗೃಹಲಕ್ಷ್ಮಿ ಯೋಜನೆಯಡಿ ಕೆಲವರಿಗೆ ಹಣ ಜಮೆ ಆಗದ ವಿಚಾರವಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಗೃಹಲಕ್ಷ್ಮಿ ಅಡಿ ಈವರೆಗೆ 9,44,155 ಅರ್ಜಿದಾರರಿಗೆ ಹಣ ಹೋಗಿಲ್ಲ.
3082 ಅರ್ಜಿದಾರರು ಮರಣ ಹೊಂದಿದ್ದರಿಂದ ಅವರನ್ನು ಅನರ್ಹಗೊಳಿಸಲಾಗಿದೆ. 1,59,356 ಅರ್ಜಿದಾರರ ಡೆಮೋ ದೃಢೀಕರಣ ವಿಫಲವಾಗಿದೆ. ಫಲಾನುಭವಿಗಳ ಆಧಾರ್ ಹಾಗೂ ಬ್ಯಾಂಕ್ ಖಾತೆ ಹೆಸರಿನಲ್ಲಿ ವ್ಯತ್ಯಾಸವಾಗಿದ್ದು, ಅವುಗಳನ್ನು ಸರಿಪಡಿಸುವ ಕಾರ್ಯ ನಡೆದಿದೆ. 5,96,268 ಫಲಾನುಭವಿಗಳ ಖಾತೆಯೊಂದಿಗೆ ಆಧಾರ್ ಜೋಡಣೆಯಾಗಿಲ್ಲ. 2,17,536 ಫಲಾನುಭವಿಗಳ ಬ್ಯಾಂಕ್ ಖಾತೆಯನ್ನು ಆಧಾರ್ ನೊಂದಿಗೆ ಯಶಸ್ವಿಯಾಗಿ ಜೋಡಿಸಲಾಗಿದೆ. ಉಳಿದ ಫಲಾನುಭವಿಗಳಿಗೂ ಸಿಡಿಪಿಒ ಮಾಹಿತಿ ನೀಡಿ ಆಧಾರ್ ಫೀಡ್ ಮಾಡಿಸಲು ಕ್ರಮ ವಹಿಸಲಾಗಿದೆ ಎಂದು ಪ್ರಕಟಣೆಯಲ್ಲಿ ಸಚಿವರು ತಿಳಿಸಿದ್ದಾರೆ.
1,75,683 ಫಲಾನುಭವಿಗಳ ಹೆಸರು ಮತ್ತು ವಿಳಾಸ ವ್ಯತ್ಯಾಸವಾಗಿದೆ. ಬ್ಯಾಂಕ್ ಗಳ ಮೂಲಕ ಫಲಾನುಭವಿಗಳ ಇ-ಕೆವೈಸಿ ಮಾಡಿಸಲು ಇಲಾಖೆ ಕ್ರಮ ವಹಿಸಿದೆ. 9,766 ಇಂದೀಕರಿಸಿದ ದತ್ತಾಂಶದಿಂದಾಗಿ ಉಂಟಾದ ವಿಳಂಬವನ್ನು ಸೇವಾ ಸಿಂಧು ವತಿಯಿಂದ ಪುನರ್ ಪರಿಶೀಲಿಸಲಾಗುತ್ತಿದೆ. 1.8 ಕೋಟಿ ಅರ್ಹ ಫಲಾನುಭವಿಗಳಿಗೆ 2169 ಕೋಟಿ ರೂ. ಅನುದಾನವನ್ನು ಸರ್ಕಾರ ಬಿಡುಗಡೆಗೊಳಿಸಿತ್ತು.
ಸೆಪ್ಟಂಬರ್ ತಿಂಗಳಲ್ಲಿ 1.14 ಲಕ್ಷ ಫಲಾನುಭವಿಗಳಿಗೆ 2280 ಕೋಟಿ ರೂ.ಗಳನ್ನು ಬಿಡುಗಡೆಗೊಳಿಸಲಾಗಿದೆ. ಅಕ್ಟೋಬರ್ 4ರ ವರೆಗೆ 93 ಲಕ್ಷ ಫಲಾನುಭವಿಗಳ ಬ್ಯಾಂಕ್ ಖಾತೆಗೆ ತಲಾ 2 ಸಾವಿರ ರೂ. ಯಶಸ್ವಿಯಾಗಿ ವರ್ಗಾಯಿಸಲಾಗಿದೆ ಎಂದರು.
The post Lakshmi Hebbalkar; ಗೃಹಲಕ್ಷ್ಮಿ ಯೋಜನೆ, ಕೆಲವರಿಗೆ ಜಮೆ ಆಗದ ಹಣ – ಕಾರಣ ತಿಳಿಸಿದ ಲಕ್ಷ್ಮಿ ಹೆಬ್ಬಾಳ್ಕರ್ appeared first on Ain Live News.
