Home ಮಂಗಳೂರು ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳಿಗೆ ಕೊನೆಯ ವಾರ್ನಿಂಗ್; ಶರಣಾಗದಿದ್ದರೆ ಆಸ್ತಿ ಮುಟ್ಟುಗೋಲು: ಎನ್ಐಎ

ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳಿಗೆ ಕೊನೆಯ ವಾರ್ನಿಂಗ್; ಶರಣಾಗದಿದ್ದರೆ ಆಸ್ತಿ ಮುಟ್ಟುಗೋಲು: ಎನ್ಐಎ

16
0
Praveen Nettaru's wife to be reappointed to Group-C post – CM Siddaramaiah Announces
Advertisement
bengaluru

ಮಂಗಳೂರು:

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳ(NIA) ಹೊಸ ಅಸ್ತ್ರ ಪ್ರಯೋಗಿಸಿದೆ.

ಹತ್ಯೆ ಆರೋಪಿಗಳಿಗೆ ಜೂನ್ 30ರೊಳಗೆ NIA ನ್ಯಾಯಾಲಯಕ್ಕೆ ಶರಣಾಗುವಂತೆ ಸೂಚನೆ ನೀಡಲಾಗಿದ್ದು, ಶರಣಾಗದಿದ್ದರೆ ಆರೋಪಿಗಳ ಮನೆಗಳಲ್ಲಿನ ಎಲ್ಲವನ್ನೂ ಜಪ್ತಿ ಮಾಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಮೈಕ್ ಅನೌನ್ಸ್ ಮೆಂಟ್​​ ಮೂಲಕ ಸಾರ್ವಜನಿಕವಾಗಿ ಘೋಷಣೆ ಕೂಗಲಾಗಿದೆ.

ಇದೇ ವೇಳೆ ನೆಟ್ಟಾರು ಹತ್ಯೆ ಆರೋಪಿಗಳ ಸುಳಿವು ಕೊಟ್ಟವರಿಗೆ ನಗದು ಬಹುಮಾನ ನೀಡುವುದಾಗಿಯೂ ಪ್ರಕಟಿಸಿದ್ದಾರೆ. NIA ನ್ಯಾಯಾಲಯದ ಅಧಿಕಾರಿಗಳು ಸುಳ್ಯದ ಕಲ್ಲುಮುಟ್ಲುವಿನಲ್ಲಿ ವಾಸವಿದ್ದ ಉಮ್ಮರ್ ಫಾರೂಕ್ ಹಾಗೂ ಮುಸ್ತಾಫ್ ನಿವಾಸಕ್ಕೆ ಈ ಕುರಿತಾದ ಭಿತ್ತಿಪತ್ರಗಳನ್ನುಅಂಟಿಸಿದ್ದು ಆರೋಪಿಗಳಿಗೆ ಶರಣಾಗಲು ಇನ್ನೆರೆಡೇ ದಿನ ಕಾಲಾವಕಾಶ ನೀಡಿರುವುದಾಗಿ ತಿಳಿಸಿದ್ದಾರೆ.

bengaluru bengaluru

ಏನಿದು ಪ್ರಕರಣ:
2022ರ ಜುಲೈ 26ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದಲ್ಲಿ ಪ್ರವೀಣ್ ನೆಟ್ಟಾರು ಹತ್ಯೆ ನಡೆದಿತ್ತು. ನೆಟ್ಟಾರು ಕೊಲೆ ಕೇಸ್​ನಲ್ಲಿ ಇದುವರೆಗೆ 21 ಅರೋಪಿಗಳನ್ನು ಎನ್​ಐಎ ಬಂಧಿಸಿ, ಆರೋಪಿಗಳ ವಿರುದ್ದ ಚಾರ್ಜ್​ಶೀಟ್ ಸಲ್ಲಿಸಿತ್ತು. ಅದರ ಮುಂದಿನ ಭಾಗವಾಗಿ ಮತ್ತೆ, ಇಬ್ಬರು ಅರೋಪಿಗಳಾದ ತುಫೈಲ್ ಎಂ ಹೆಚ್ ಮತ್ತು ಮಹಮ್ಮದ್ ಜಬೀರ್ ವಿರುದ್ದ ಪೂರಕ ಚಾರ್ಜ್​ರ್ಶೀಟ್​ ಅನ್ನು ಎನ್ ಐ ಎ ವಿಶೇಷ ನ್ಯಾಯಾಲಯದಲ್ಲಿ ಸಲ್ಲಿಕೆ ಮಾಡಿದೆ.

ಇನ್ನು ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್​ಐಎ ಅಧಿಕಾರಿಗಳು ಶೋಧ ಮುಂದವರಿಸಿದ್ದಾರೆ. ನಿನ್ನೆ ಏಕಕಾಲಕ್ಕೆ 6 ಕಡೆಗಳಲ್ಲಿ ದಾಳಿ ನಡೆಸಿರುವ ಎನ್​ಐಎ ಅಧಿಕಾರಿಗಳು, ಎಲೆಕ್ಟ್ರಾನಿಕ್ ಡಿವೈಸ್​​ಗಳು ಸೇರಿದಂತೆ ಮಹತ್ವದ ದಾಖಲೆಗಳನ್ನು ಜಪ್ತಿ ಮಾಡಿದ್ದರು. ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ನಿಷೇಧಿತ ಪಿಎಫ್ಐ ಸಂಘಟನೆ ಕಾರ್ಯಕರ್ತರ ಮನೆಗಳ ಮೇಲೆ ಎನ್ ಐಎ ಅಧಿಕಾರಿಗಳ ತಂಡ ದಾಳಿ ನಡೆಸಿತ್ತು.


bengaluru

LEAVE A REPLY

Please enter your comment!
Please enter your name here