Late Sardar Vallabhbhai Patel | Chief Minister Siddaramaiah administered oath to officials as part of "National Unity Day"
ಬೆಂಗಳೂರು:
ಮಾಜಿ ಉಪ ಪ್ರಧಾನಿ ದಿವಂಗತ ಸರ್ದಾರ್ ವಲ್ಲಭಬಾಯ್ ಪಟೇಲ್ ಅವರ ಜನ್ಮದಿನದ ಪ್ರಯುಕ್ತ ವಿಧಾನಸೌಧದ 3ನೇ ಮಹಡಿಯ ಸಮ್ಮೇಳನ ಸಭಾಂಗಣದಲ್ಲಿ ನಡೆದ “ರಾಷ್ಟ್ರೀಯ ಏಕತಾ ದಿವಸ” ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವಾಲಯದ ಅಧಿಕಾರಿಗಳಿಗೆ ಹಾಗೂ ನೌಕರರಿಗೆ ಪ್ರತಿಜ್ಞಾ ವಚನ ಬೋಧಿಸಿದರು.
ಇದೇ ವೇಳೆ, ಸರ್ದಾರ್ ವಲ್ಲಭಬಾಯ್ ಪಟೇಲ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮನ ಸಲ್ಲಿಸಿದರು.
ಈ ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ. ಮಹದೇವಪ್ಪ, ಕೃಷಿ ಇಲಾಖೆ ಸಚಿವ ಚಲುವರಾಯಸ್ವಾಮಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕ ನರೇಂದ್ರಸ್ವಾಮಿ, ವಿಧಾನ ಪರಿಷತ್ ಸದಸ್ಯ ಯು.ಬಿ.ವೆಂಕಟೇಶ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿ ಮೂಲ: ಕರ್ನಾಟಕ ವಾರ್ತೆ
