ಬೆಂಗಳೂರು: ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಲ್ಯಾಟರಲ್ ಎಂಟ್ರಿ ಮೂಲಕ ಎಂಜಿನಿಯರಿಂಗ್ 2ನೇ ವರ್ಷ ಅಥವಾ 3ನೇ ಸೆಮಿಸ್ಟರ್ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಕೊನೆ ದಿನ ಏಪ್ರಿಲ್ 3 ಎಂದು ತಿಳಿಸಲಾಗಿದೆ. ಶುಲ್ಕ ಪಾವತಿಗೆ ಏ.4ರವರೆಗೆ ಅವಕಾಶವಿದೆ. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಮೇ 23ರಂದು ಲಿಖಿತ ಪರೀಕ್ಷೆ ನಡೆಯಲಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಕೆಇಎ ವೆಬ್ಸೈಟ್ ಅನ್ನು ನೋಡಿ.
