Karnataka Caste Census Report | ಸಂಪುಟ ಸಭೆಯಲ್ಲಿ ಏರುಧ್ವನಿಯಲ್ಲಿ ಮಾತುಕಥೆ ಆಗಿದೆ ಎಂಬುದು ಸುಳ್ಳು: ಡಿ.ಕೆ.ಶಿವಕುಮಾರ್
ಬೆಂಗಳೂರು: ಭೋವಿ ಅಭಿವೃದ್ಧಿ ನಿಗಮದಲ್ಲಿನ ಹಗರಣದ ಕುರಿತು ತನಿಖೆ ಎದುರಿಸಿದ್ದ ವಕೀಲೆ ಎಸ್.ಜೀವಾ (35) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಡಿವೈಎಸ್ಪಿ ಕನಕಲಕ್ಷ್ಮಿ ಅವರನ್ನು ಬಂಧಿಸಿದ್ದಾರೆ.
ಕರ್ನಾಟಕ ಭೋವಿ ನಿಗಮ ಹಗರಣದ ತನಿಖೆ ಎದುರಿಸಿದಾಗ ಪೊಲೀಸ್ ಅಧಿಕಾರಿ ವಿವಸ್ತ್ರಗೊಳಿಸಿ ವಿಚಾರಣೆ ನಡೆಸಿದ್ದಲ್ಲದೆ, 25 ಲಕ್ಷ ರೂ. ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು ಎಂದು ಮಹಿಳಾ ವಕೀಲೆ ಜೀವಾ 13 ಪುಟಗಳ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು.
ಈ ಸಂಬಂಧ ಸಿಐಡಿ ಡಿವೈಎಸ್ ಪಿ ಕನಕಲಕ್ಷ್ಮಿ ವಿರುದ್ಧ ಜೀವಾ ಸಹೋದರಿ ದೂರು ನೀಡಿದ್ದರು. ಇದೀಗ ಈ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ಕನಕಲಕ್ಷ್ಮಿ ಅವರನ್ನು ಬಂಧಿಸಿದ್ದಾರೆ.