Home ರಾಜಕೀಯ ಹೆಚ್ʼಡಿ ದೇವೇಗೌಡರು, ನನ್ನ ಹೆಸರು ಬಳಸಿದರೆ ಕಾನೂನು ಕ್ರಮ: ಕುಮಾರಸ್ವಾಮಿ ಎಚ್ಚರಿಕೆ

ಹೆಚ್ʼಡಿ ದೇವೇಗೌಡರು, ನನ್ನ ಹೆಸರು ಬಳಸಿದರೆ ಕಾನೂನು ಕ್ರಮ: ಕುಮಾರಸ್ವಾಮಿ ಎಚ್ಚರಿಕೆ

11
0

ಬೆಂಗಳೂರು: ಅ.ದೇವೇಗೌಡರೇ ಜೆಡಿಎಸ್ ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿದ್ದಾರೆ. ಬೇರೆಯವರು ಪ್ರಚಾರದಲ್ಲಿ ಎಚ್‌ಡಿ ದೇವೇಗೌಡರು, ನನ್ನ ಹೆಸರು ಬಳಸಿದರೆ ಕಾನೂನು ಕ್ರಮ ಎಂದು ಎಚ್‌ಡಿ ಕುಮಾರಸ್ವಾಮಿ ವಾರ್ನಿಂಗ್ ಕೊಟ್ಟಿದ್ದಾರೆ.

ಬಿಜೆಪಿ ಜೆಡಿಎಸ್‌ ಜಂಟಿ ಮಾಧ್ಯಮಗೋ‍ಷ್ಠಿಯಲ್ಲಿ ಮಾತನಾಡಿದ ಅವರು, ” ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಅ.ದೇವೇಗೌಡರು ಮಾತ್ರ ಜೆಡಿಎಸ್ ಬಿಜೆಪಿ ಮೈತ್ರಿ ಅಭ್ಯರ್ಥಿ.

ಉಳಿದ ಅಭ್ಯರ್ಥಿಗಳಿಗೂ ನಮಗೂ ಸಂಬಂಧವಿಲ್ಲ. ಆದರೆ, ನಮ್ಮ ಪಕ್ಷದ ಪ್ರಾಥಮಿಕ ಸದಸ್ಯರೂ ಅಲ್ಲದ ಚನ್ನಪಟ್ಟಣದ ಪುಟ್ಟಸ್ವಾಮಿ ಎನ್ನುವರು ನನ್ನ ಮತ್ತು ದೇವೆಗೌಡರ ಚಿತ್ರಗಳನ್ನು ಕರಪತ್ರಗಳಲ್ಲಿ ಹಾಕಿಕೊಂಡು ಪ್ರಚಾರ ಮಾಡುತ್ತಿದ್ದಾರೆ ಎನ್ನುವ ಅಂಶ ನನ್ನ ಗಮನಕ್ಕೆ ಬಂದಿದೆಎಂದರು.

ನಾನು ಮತ್ತು ದೇವೇಗೌಡರು ತಮ್ಮನ್ನು ಆಶೀರ್ವದಿಸಿದ್ದಾರೆ ಎಂದು ಪುಟ್ಟಸ್ವಾಮಿ ಹೇಳಿಕೊಂಡು ತಿರುಗುತ್ತಿದ್ದಾರೆ. ರೀತಿ ನಾನಾಗಲಿ, ದೇವೇಗೌಡರಾಗಲಿ ಯಾರಿಗೂ ಬೆಂಬಲ ನೀಡಿರುವುದಿಲ್ಲ. ಅವರು ತಕ್ಷಣ ನಮ್ಮ ಹೆಸರು, ಭಾವಚಿತ್ರಗಳನ್ನು ಬಳಸುವುದನ್ನು ನಿಲ್ಲಿಸಬೇಕು. ತಪ್ಪಿದರೆ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಎಚ್ಚರಿಕೆ ನೀಡಿದರು.

LEAVE A REPLY

Please enter your comment!
Please enter your name here