Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ರಾಜಕೀಯ
  • Chief Minister Siddaramaiah | ಬಿಜೆಪಿ ಸಂಸದರು ಕೇಂದ್ರದಿಂದ ಬರಪರಿಹಾರ ಕೊಡಿಸಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ
  • ರಾಜಕೀಯ
  • ಕೊಪ್ಪಳ

Chief Minister Siddaramaiah | ಬಿಜೆಪಿ ಸಂಸದರು ಕೇಂದ್ರದಿಂದ ಬರಪರಿಹಾರ ಕೊಡಿಸಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ

The Bengaluru Live November 2, 2023 3:00 PM 1 minute read
Let the BJP MPs get relief from the Centre: Karnataka Chief Minister Siddaramaiah

Let the BJP MPs get relief from the Centre: Karnataka Chief Minister Siddaramaiah

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಕೊಪ್ಪಳ :

ರೈತರ ಬಗ್ಗೆ ಕಾಳಜಿ ಇದ್ದರೆ, ಬಿಜೆಪಿ ಸಂಸದರು ರಾಜ್ಯ ಸರ್ಕಾರವನ್ನು ಟೀಕಿಸುವ ಬದಲು ಕೇಂದ್ರದೊಂದಿಗೆ ಮಾತನಾಡಿ, ರಾಜ್ಯಕ್ಕೆ ಪರಿಹಾರಗಳನ್ನು ಬಿಡುಗಡೆಗೊಳಿಸರೆ ಉತ್ತಮ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಬರಪರಿಹಾರ ಬಿಡುಗಡೆಯಲ್ಲಿ ಕೇಂದ್ರ ಸರ್ಕಾರ ವಿಳಂಬವೇಕೆ ತೋರುತ್ತಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಕೇಂದ್ರ ಸರ್ಕಾರಕ್ಕೆ ಬರಪರಿಹಾರ 17,900 ಕೋಟಿ ರೂ.ಗಳನ್ನು ಕೋರಿ ಮನವಿ ಸಲ್ಲಿಸಿದೆ. ರಾಜ್ಯದ ಸಚಿವರ ಭೇಟಿಗೂ ಸಮಯ ನೀಡದೇ , ಪರಿಹಾರ ಮೊತ್ತವನ್ನು ಬಿಡುಗಡೆ ಮಾಡದೇ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಮಲತಾಯಿ ಧೋರಣೆ ತೋರುತ್ತಿದೆ. ಕೇಂದ್ರಸರ್ಕಾರ ನರೇಗಾ ಯೋಜನೆಯಡಿ ದಿನಗೂಲಿ ಕಾರ್ಮಿಕರ ವೇತನ 600 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿಲ್ಲ ಎಂದರು.

ನಿಗಮ ಮಂಡಳಿ ಅಧ್ಯಕ್ಷರ ಆಯ್ಕೆಗೆ ಚರ್ಚೆ : ಕೇಂದ್ರ ಕಾಂಗ್ರೆಸ್ ನಾಯಕರಾದ ರಣದೀಪ್ ಸುರ್ಜೆವಾಲ ಹಾಗೂ ವೇಣುಗೋಪಾಲ್ ಅವರು ರಾಜ್ಯಕ್ಕೆ ಬಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ,ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷದ ನಾಯಕರು ರಾಜ್ಯಕ್ಕೆ ಆಗಮಿಸಿದ್ದಾರೆ. ಹಾಗೂ ಶಾಸಕರನ್ನು ಕೆಲವು ನಿಗಮ ಮಂಡಳಿಗಳಿಗೆ ಅಧ್ಯಕ್ಷರಾಗಿ ನೇಮಕ ಮಾಡುವ ಪ್ರಕ್ರಿಯೆಯೂ ಇದ್ದು, ಈ ಬಗ್ಗೆಯೂ ಕೇಂದ್ರ ನಾಯಕರೊಂದಿಗೆ ಚರ್ಚೆ ನಡೆಸಲಾಗುವುದು ಎಂದರು.

ಜಿಲ್ಲೆಯ ಜನರ ಕಷ್ಟಗಳಿಗೆ ಜಿಲ್ಲಾಮಂತ್ರಿಗಳ ಸ್ಪಂದನೆ : ಬರನಿರ್ವಹಣೆಗೆ ಸಂಬಂಧಿಸಿದಂತೆ ಯಾವ ಸಚಿವರೂ ಜಿಲ್ಲೆಗಳಿಗೆ ಭೇಟಿ ನೀಡುತ್ತಿಲ್ಲ ಎಂಬ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಎಲ್ಲಾ ಜಿಲ್ಲಾ ಮಂತ್ರಿಗಳು ತಮ್ಮ ಜಿಲ್ಲೆಗಳಿಗೆ ಭೇಟಿ ನೀಡಿ, ಜನರ ಅಹವಾಲುಗಳನ್ನು ಕೇಳಿ, ಅವರ ಕಷ್ಟ ಸುಖಗಳಿಗೆ ಸ್ಪಂದಿಸುತ್ತಿದ್ದಾರೆ ಎಂದರು.

ರಾಜ್ಯ ಸರ್ಕಾರದಿಂದ ಕುಡಿಯುವ ನೀರಿಗೆ 900 ಕೋಟಿ ರೂ: ರಾಜ್ಯಸರ್ಕಾರ ಕುಡಿಯುವ ನೀರಿನ ಬವಣೆ ನೀಗಿಸಲು 900 ಕೋಟಿ ಬಿಡುಗಡೆ ಮಾಡಿದೆ. ಜಿಲ್ಲೆಯ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಅನುದಾನ ನೀಡಿದ್ದು, ಹೆಚ್ಚಿನ ಮೊತ್ತಕ್ಕೆ ಬೇಡಿಕೆ ಸಲ್ಲಿಸಿದ್ದಲ್ಲಿ, ಸರ್ಕಾರ ತಕ್ಷಣ ಅನುದಾನ ಒದಗಿಸಲಿದೆ ಎಂದರು.

ಕೃಷಿ ಪಂಪಸೆಟ್ ಮುಂದುವರೆಸಲಾಗುವುದು : ಕೃಷಿ ಪಂಪಸೆಟ್ ಗಳಿಗೆ ಪೂರಕ ಸೌಲಭ್ಯಗಳು ರೈತರಿಗೆ ನಿಲ್ಲಿಸಲಾಗಿದೆ ಎಂಬುದಕ್ಕೆ ಉತ್ತರಿಸಿ, ಈ ವಿಚಾರ ಕೃಷಿ ಇಲಾಖೆಗೆ ಸಂಬಂಧಪಟ್ಟಿದ್ದು, ಈ ಬಗ್ಗೆ ಪರಿಶೀಲಿಸಲಾಗುವುದು. ಈ ಮುಂಚೆ ನೀಡುತ್ತಿದ್ದಂತೆ ಕೃಷಿ ಪಂಪಸೆಟ್ ಗಳಿಗೆ ಪೂರಕ ಸೌಲಭ್ಯಗಳನ್ನು ರೈತರಿಗೆ ಮುಂದುವರೆಸಲಾಗುವುದು ಎಂದು ತಿಳಿಸಿದರು.

ಬಿಜೆಪಿಯವರ ಹಗಲು ಕನಸು : ತನಿಖಾ ಸಂಸ್ಥೆಗಳಿಂದ ಕಾಂಗ್ರೆಸ್ ನವರ ಭ್ರಷ್ಟಾಚಾರ ಬೆಳಕಿಗೆ ಬರುತ್ತಿರುವುದಾಗಿ ಯಡಿಯೂರಪ್ಪ ತಿಳಿಸಿರುವ ಬಗ್ಗೆ ಉತ್ತರಿಸಿ, ಇವೆಲ್ಲ ಸುಳ್ಳು ಆರೋಪಗಳು ಎಂದರು. ಬಿಜೆಪಿ ಶಾಸಕ ಬಸವರಾಜ ಯತ್ನಾಳ್ ಅವರು ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಹೇಳಿದ್ದರೆ ಬಗ್ಗೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರು ಹಗಲುಗನಸು ಕಾಣುತ್ತಿದ್ದಾರೆ ಎಂದರು.

ಸಿದ್ದರಾಮಯ್ಯರವರು ಮುಂಚಿನ ಆಡಳಿತದ ವೈಖರಿ ತೋರುತ್ತಿಲ್ಲ ಎಂಬ ಯಡಿಯೂರಪ್ಪನವರ ಹೇಳಿಕೆಗೆ ಉತ್ತರಿಸಿ, ಯಡಿಯೂರಪ್ಪನವರು ರಾಜಕೀಯದಿಂದ ನಿವೃತ್ತರಾಗಿದ್ದಾರೆ. ಬಿಜೆಪಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿತು. ವಿಧಾನಸಭೆಯಲ್ಲಿ ಅವರು ಕಣ್ಣೀರಿಟ್ಟಿದ್ದರು. ಅವರ ಪಕ್ಷದವರೇ ಅವರನ್ನು ಮನೆಗೆ ಕಳುಹಿಸಿದ್ದಾರೆ. ಅವರ ಹೇಳಿಕೆಗಳಿಗೆ ಏನೂ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.

ಸರ್ಕಾರದಿಂದ ಯಾರನ್ನೂ ಕಳಿಸೋಲ್ಲ: ಕಾಂಗ್ರೆಸ್ ಶಾಸಕರು ದುಬೈಗೆ ಪ್ರವಾಸ ಹೋಗುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರ ಹಣದಲ್ಲಿ ಅವರು ಹೋಗುತ್ತಿದ್ದಾರೆ. ಸರ್ಕಾರದಿಂದ ನಾವು ಯಾರನ್ನೂ ಕಳಿಸೋಲ್ಲ ಎಂದರು.

ಐದು ವರ್ಷ ಆಡಳಿತ: ಐದು ವರ್ಷಕ್ಕೊಮ್ಮೆ ಚುನಾವಣೆ ನಡೆಯುತ್ತದೆ. ಜನ ನಮ್ಮನ್ನು ಆಯ್ಕೆ ಮಾಡಿದ್ದಾರೆ. ನಾವು ಐದು ವರ್ಷ ಆಡಳಿತ ಮಾಡುತ್ತೇವೆ. ಮತ್ತೆ ಚುನಾವಣೆಗೆ ಹೋಗುತ್ತೇವೆ. ಮತ್ತೆ ಜನ ನಮಗೆ ಆಶೀರ್ವಾದ ಮಾಡಲಿದ್ದಾರೆ ಎಂದರು.

ರಮೇಶ್ ಜಾರಕಿಹೊಳಿ ಕುರಿತಂತೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಅವರು ಸೋತು ಮನೆಯಲ್ಲಿರುವವರು. ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಅದಕ್ಕೆಲ್ಲಾ ಉತ್ತರಿಸಲಾಗುವುದಿಲ್ಲ ಎಂದರು.

ಬಿಜೆಪಿ ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿ ಹೋಗಿದ್ದರೂ ಕೂಡ ಐದು ಗ್ಯಾರಂಟಿ ಅನುಷ್ಠಾನವಾಗಿದೆ ನಾವು ಐದು ಗ್ಯಾರಂಟಿಗಳನ್ನು ಅನುಷ್ಠಾನ ಮಾಡುತ್ತೇವೆ ಎಂದು ಹೇಳಿದ್ದೆವು. ಅದನ್ನು ಈಡೇರಿಸಿದ್ದೇವೆ. ಬಿಜೆಪಿ ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿ ಹೋಗಿದ್ದರೂ ಕೂಡ ಐದು ಗ್ಯಾರಂಟಿ ಅನುಷ್ಠಾನ ಮಾಡಿದ್ದೇವೆ. ನುಡಿದಂತೆ ನಡೆದಿದ್ದೇವೆ ಎಂದರು.

About the Author

The Bengaluru Live

Administrator

Visit Website View All Posts

Post navigation

Previous: Kannada Rajyotsava | ಶಕ್ತಿಯಿಲ್ಲದವರಿಗೆ ಶಕ್ತಿ ತುಂಬುವುದೇ ಪಂಚಗ್ಯಾರಂಟಿಗಳ ಉದ್ದೇಶ, ಸಮಾಜಕ್ಕೆ ಕೊಡುಗೆ ನೀಡಿ ಸಮಾಜದ ಋಣ ತೀರಿಸಲು ಸಾಧ್ಯ: : ಮುಖ್ಯಮಂತ್ರಿ ಸಿದ್ದರಾಮಯ್ಯ
Next: Karnataka Chief Minister Siddaramaiah | ವಿಜಯನಗರ ಅರಸರ ಕಾಲದ ವೈಭವ ಮತ್ತು ಅಭಿವೃದ್ಧಿ ರಾಜ್ಯದಲ್ಲಿ ಮರಳಿಸುವುದು ನಮ್ಮ ಆಧ್ಯತೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Related Stories

ಬೆಂಗಳೂರಿನ ಪತ್ರಿಕಾಗೋಷ್ಠಿಯಲ್ಲಿ ಕೈಯಲ್ಲಿ ದಾಖಲೆಗಳನ್ನು ಹಿಡಿದು ಮೈಕ್ರೊಫೋನ್‌ಗಳ ಮುಂದೆ ಮಾತನಾಡುತ್ತಿರುವ ರಿಜ್ವಾನ್ ಅರ್ಷದ್.
  • ಕರ್ನಾಟಕ
  • ರಾಜಕೀಯ

ಪಂಪ್‌ಗಳಲ್ಲಿ ಎಥೆನಾಲ್ ಪ್ರಮಾಣ ಪ್ರದರ್ಶನ, ಇ20 ಪರಿಹಾರ ನಿಧಿಗೆ ರಿಜ್ವಾನ್ ಅರ್ಷದ್ ಆಗ್ರಹ; ಹರ್ದೀಪ್ ಸಿಂಗ್ ಪುರಿಗೆ ಪತ್ರ

The Bengaluru Live November 18, 2026 12:45 PM
ಬೆಂಗಳೂರಿನ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಮನವಿ ಪತ್ರದೊಂದಿಗೆ ನಿಂತಿರುವ ಬಿಜೆಪಿ ನಾಯಕರ ತಂಡ
  • ಕರ್ನಾಟಕ
  • ರಾಜಕೀಯ

ಸಾಮಾಜಿಕ ಜಾಲತಾಣ ಪೋಸ್ಟ್‌ಗಳಿಗೆ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್ ಇಲಾಖೆ ದುರ್ಬಳಕೆ: ಡಿಜಿ ಭೇಟಿ ನಂತರ ಛಲವಾದಿ ನಾರಾಯಣಸ್ವಾಮಿ ಆರೋಪ

The Bengaluru Live November 16, 2026 9:46 PM
ಬಿಳಿ ಧಾರ್ಮಿಕ ವಸ್ತ್ರ ಧರಿಸಿ ಮೈಕ್‌ಗಳ ಮುಂದೆ ಮಾತನಾಡುತ್ತಿರುವ ಹೆಚ್.ಡಿ. ಕುಮಾರಸ್ವಾಮಿ, ಅವರ ಅಕ್ಕಪಕ್ಕ ಇಬ್ಬರು
  • ಕರ್ನಾಟಕ
  • ರಾಜಕೀಯ

ನೆರೆಯ ರಾಜ್ಯಗಳು ಶೇ.50 ಸಬ್ಸಿಡಿ ನೀಡುತ್ತಿವೆ, ಕರ್ನಾಟಕದಲ್ಲಿ ಹೂಡಿಕೆದಾರರಿಗೆ ಪ್ರೋತ್ಸಾಹವಿಲ್ಲ: ಕಾಪುವಿನಲ್ಲಿ ಹೆಚ್.ಡಿ. ಕುಮಾರಸ್ವಾಮಿ; ರಾಜ್ಯ ಕ್ರಮ ಕೈಗೊಂಡರೆ ಕೇಂದ್ರದ ಸಹಕಾರದ ಭರವಸೆ

The Bengaluru Live November 16, 2026 9:34 PM

Latest Post

ಕೆಇಎ ಪಿಯು ಕಾಲೇಜು ಪ್ರಾಂಶುಪಾಲರ ಪರೀಕ್ಷೆಗೆ ಶೇ 82ರಷ್ಟು ಹಾಜರಾತಿ, 2,349 ಅಭ್ಯರ್ಥಿಗಳು ಭಾಗಿ ಕೆಇಎ ಹೆಸರು ಮತ್ತು ಲಾಂಛನದ ಮುಂದೆ ಕುಳಿತಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಅವರ ಕಡತ ಚಿತ್ರ
  • ಶಿಕ್ಷಣ

ಕೆಇಎ ಪಿಯು ಕಾಲೇಜು ಪ್ರಾಂಶುಪಾಲರ ಪರೀಕ್ಷೆಗೆ ಶೇ 82ರಷ್ಟು ಹಾಜರಾತಿ, 2,349 ಅಭ್ಯರ್ಥಿಗಳು ಭಾಗಿ

November 22, 2026 9:22 PM
ಕರ್ನಾಟಕ ಹವಾಮಾನ: ಒಣ ಹವೆ ಮುಂದುವರಿಕೆ, ನವೆಂಬರ್ 24ರಿಂದ 26ರವರೆಗೆ ಕೆಲವೆಡೆ ಮಳೆ ಸಾಧ್ಯತೆ ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ಕರ್ನಾಟಕ ಹವಾಮಾನ: ಒಣ ಹವೆ ಮುಂದುವರಿಕೆ, ನವೆಂಬರ್ 24ರಿಂದ 26ರವರೆಗೆ ಕೆಲವೆಡೆ ಮಳೆ ಸಾಧ್ಯತೆ

November 22, 2026 2:01 PM
ನವೆಂಬರ್ 23ರಿಂದ ಕರ್ನಾಟಕದ ಕೆಲವೆಡೆ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ನವೆಂಬರ್ 23ರಿಂದ ಕರ್ನಾಟಕದ ಕೆಲವೆಡೆ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ

November 22, 2026 11:32 AM
ಕಾಂಗೋದಲ್ಲಿ 95 ಹಕ್ಕಿಪಿಕ್ಕಿ ಸಮುದಾಯದವರು ವಶಕ್ಕೆ ಎಂಬ ವರದಿ: ನೆರವಿಗೆ ಮನವಿ ಸಾಂಪ್ರದಾಯಿಕ ಉಡುಪಿನಲ್ಲಿರುವ ಮಹಿಳೆಯೊಂದಿಗೆ ಮೈಕ್‌ನಲ್ಲಿ ಮಾತನಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ, ಸುತ್ತ ಕುಳಿತಿರುವ ಜನರು
  • ಕರ್ನಾಟಕ

ಕಾಂಗೋದಲ್ಲಿ 95 ಹಕ್ಕಿಪಿಕ್ಕಿ ಸಮುದಾಯದವರು ವಶಕ್ಕೆ ಎಂಬ ವರದಿ: ನೆರವಿಗೆ ಮನವಿ

November 22, 2026 11:16 AM
ಕಾನ್ಪುರ ಸೆಂಟ್ರಲ್–ಎಸ್‌ಎಂವಿಟಿ ಬೆಂಗಳೂರು ನಡುವಿನ ಸಾಪ್ತಾಹಿಕ ವಿಶೇಷ ರೈಲು ಡಿ.30ರವರೆಗೆ ವಿಸ್ತರಣೆ, ಪ್ರತಿ ದಿಕ್ಕಿನಲ್ಲಿ ಆರು ಟ್ರಿಪ್ ರೈಲು ನಿಲ್ದಾಣದ ಟಿಕೆಟ್ ಕೌಂಟರ್‌ಗಳ ಮುಂದೆ ಸರತಿ ಸಾಲಿನ ಕಂಬಗಳ ಬಳಿ ನಿಂತಿರುವ ಪ್ರಯಾಣಿಕರು
  • ಕರ್ನಾಟಕ
  • ಬೆಂಗಳೂರು ನಗರ

ಕಾನ್ಪುರ ಸೆಂಟ್ರಲ್–ಎಸ್‌ಎಂವಿಟಿ ಬೆಂಗಳೂರು ನಡುವಿನ ಸಾಪ್ತಾಹಿಕ ವಿಶೇಷ ರೈಲು ಡಿ.30ರವರೆಗೆ ವಿಸ್ತರಣೆ, ಪ್ರತಿ ದಿಕ್ಕಿನಲ್ಲಿ ಆರು ಟ್ರಿಪ್

November 22, 2026 8:08 AM
ಪಿಜಿ ಆಯುಷ್: ಮೊದಲ ಸುತ್ತಿನ ಸೀಟು ಹಂಚಿಕೆಯ ಅಣಕು ಫಲಿತಾಂಶ ಪ್ರಕಟ, 887 ಮಂದಿಗೆ ಸೀಟು, ನ.24ರವರೆಗೆ ಆಯ್ಕೆ ಬದಲಾವಣೆಗೆ ಅವಕಾಶ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಹೆಸರಿನ ಫಲಕ ಮತ್ತು ಲಾಂಛನದ ಮುಂದೆ ತಮ್ಮ ಮೇಜಿನ ಬಳಿ ಮಾತನಾಡುತ್ತಿರುವ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ
  • ಶಿಕ್ಷಣ

ಪಿಜಿ ಆಯುಷ್: ಮೊದಲ ಸುತ್ತಿನ ಸೀಟು ಹಂಚಿಕೆಯ ಅಣಕು ಫಲಿತಾಂಶ ಪ್ರಕಟ, 887 ಮಂದಿಗೆ ಸೀಟು, ನ.24ರವರೆಗೆ ಆಯ್ಕೆ ಬದಲಾವಣೆಗೆ ಅವಕಾಶ

November 22, 2026 8:06 AM

ನೀವು ತಪ್ಪಿಸಿಕೊಂಡಿರಬಹುದು

ಕೆಇಎ ಹೆಸರು ಮತ್ತು ಲಾಂಛನದ ಮುಂದೆ ಕುಳಿತಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಅವರ ಕಡತ ಚಿತ್ರ
  • ಶಿಕ್ಷಣ

ಕೆಇಎ ಪಿಯು ಕಾಲೇಜು ಪ್ರಾಂಶುಪಾಲರ ಪರೀಕ್ಷೆಗೆ ಶೇ 82ರಷ್ಟು ಹಾಜರಾತಿ, 2,349 ಅಭ್ಯರ್ಥಿಗಳು ಭಾಗಿ

The Bengaluru Live November 22, 2026 9:22 PM
ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ಕರ್ನಾಟಕ ಹವಾಮಾನ: ಒಣ ಹವೆ ಮುಂದುವರಿಕೆ, ನವೆಂಬರ್ 24ರಿಂದ 26ರವರೆಗೆ ಕೆಲವೆಡೆ ಮಳೆ ಸಾಧ್ಯತೆ

The Bengaluru Live November 22, 2026 2:01 PM
ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ನವೆಂಬರ್ 23ರಿಂದ ಕರ್ನಾಟಕದ ಕೆಲವೆಡೆ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ

The Bengaluru Live November 22, 2026 11:32 AM
ಸಾಂಪ್ರದಾಯಿಕ ಉಡುಪಿನಲ್ಲಿರುವ ಮಹಿಳೆಯೊಂದಿಗೆ ಮೈಕ್‌ನಲ್ಲಿ ಮಾತನಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ, ಸುತ್ತ ಕುಳಿತಿರುವ ಜನರು
  • ಕರ್ನಾಟಕ

ಕಾಂಗೋದಲ್ಲಿ 95 ಹಕ್ಕಿಪಿಕ್ಕಿ ಸಮುದಾಯದವರು ವಶಕ್ಕೆ ಎಂಬ ವರದಿ: ನೆರವಿಗೆ ಮನವಿ

The Bengaluru Live November 22, 2026 11:16 AM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಕೆಇಎ ಪಿಯು ಕಾಲೇಜು ಪ್ರಾಂಶುಪಾಲರ ಪರೀಕ್ಷೆಗೆ ಶೇ 82ರಷ್ಟು ಹಾಜರಾತಿ, 2,349 ಅಭ್ಯರ್ಥಿಗಳು ಭಾಗಿ
  • ಕರ್ನಾಟಕ ಹವಾಮಾನ: ಒಣ ಹವೆ ಮುಂದುವರಿಕೆ, ನವೆಂಬರ್ 24ರಿಂದ 26ರವರೆಗೆ ಕೆಲವೆಡೆ ಮಳೆ ಸಾಧ್ಯತೆ
  • ನವೆಂಬರ್ 23ರಿಂದ ಕರ್ನಾಟಕದ ಕೆಲವೆಡೆ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ
  • ಕಾಂಗೋದಲ್ಲಿ 95 ಹಕ್ಕಿಪಿಕ್ಕಿ ಸಮುದಾಯದವರು ವಶಕ್ಕೆ ಎಂಬ ವರದಿ: ನೆರವಿಗೆ ಮನವಿ
©Copyright 2025 The Bengaluru Live All rights reserved. | MoreNews by AF themes.