ಬೆಂಗಳೂರು:
ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಅವರು ಇಂದು ವಿಕಾಸೌಧದಲ್ಲಿ ಅರಣ್ಯ ಇಲಾಖೆಯ ವ್ಯಾಪ್ತಿಗೆ ಬರುವ ವಿವಿಧ ವರ್ಗದ ಅಧಿಕಾರಿ ಮತ್ತು ನೌಕರ ಸಂಘ ಸಂಸ್ಥೆಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಜೊತೆ ಸಭೆ ನಡೆಸಿದರು.
ಈ ಸಭೆಯಲ್ಲಿ ಅವರ ಸಮಸ್ಯೆ ಗಳ ಬಗ್ಗೆ,ಅದರ ಪರಿಹಾರ ಕ್ರಮಗಳ ಕುರಿತು ವಿಸ್ತೃತ ಚರ್ಚೆ ನಡೆಸಿದರು.
ಇಂದು ವಿಕಾಸಸೌಧದಲ್ಲಿ ಅರಣ್ಯ ಇಲಾಖೆಯ ವ್ಯಾಪ್ತಿಗೆ ಬರುವ ವಿವಿಧ ವರ್ಗದ ಅಧಿಕಾರಿ ಮತ್ತು ನೌಕರ ಸಂಘ ಸಂಸ್ಥೆಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಜೊತೆ ಸಭೆ ನಡೆಸಲಾಯಿತು. 1/3 pic.twitter.com/Ar8zNyV5Za
— Aravind Limbavali (@ArvindLBJP) February 9, 2021
ಇಲಾಖೆಯ ವಿವಿಧ ಹಂತದಲ್ಲಿ, ಅದರಲ್ಲಿಯೂ ವಿಶೇಷವಾಗಿ ಕೆಳ ಮಧ್ಯಮ ಕ್ರಮಾಂಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ, ಸಿಬ್ಬಂದಿಗೆ ಅಗತ್ಯ ಇರುವ ಮೂಲ ಸೌಕರ್ಯ ಕಲ್ಪಿಸಲು ಕ್ರಮ ಕೈಗೊಳ್ಳುವ ಅಗತ್ಯವಿದೆ, ನಾನು ಅದನ್ನು ಅತ್ಯಂತ ಪ್ರಾಮಾಣಿಕವಾಗಿ ಮಾಡುತ್ತೇನೆ, ಅಧಿಕಾರಿಗಳ ಸಮಸ್ಯೆ ಗಳನ್ನೂ ಸಕಾರಾತ್ಮಕವಾಗಿ ಪರಿಹರಿಸಲು ಪ್ರಯತ್ನಿಸುತ್ತೇನೆ ಎಂದು ಹೇಳಿದರು.
ನಾನು ಅದನ್ನು ಅತ್ಯಂತ ಪ್ರಾಮಾಣಿಕವಾಗಿ ಮಾಡುತ್ತೇನೆ, ಅಧಿಕಾರಿಗಳ ಸಮಸ್ಯೆ ಗಳನ್ನೂ ಸಕಾರಾತ್ಮಕವಾಗಿ ಪರಿಹರಿಸಲು ಪ್ರಯತ್ನಿಸುತ್ತೇನೆ ಎಂದು ತಿಳಿಸಿ, ವಾರದ ರಜೆ, ವೇತನ ತಾರತಮ್ಯ, ರಿಸ್ಕ್ ಭತ್ಯೆ, ವೇತನ, ಭತ್ಯೆ ಹೆಚ್ಚಳ ಮುಂತಾದ ವಿಷಯಗಳ ಬಗ್ಗೆ ವಿಚಾರ ವಿನಿಮಯ ಮಾಡಿಕೊಳ್ಳಲಾಯಿತು. 3/3
— Aravind Limbavali (@ArvindLBJP) February 9, 2021
ವಾರದ ರಜೆ, ವೇತನ ತಾರತಮ್ಯ, ರಿಸ್ಕ್ ಭತ್ಯೆ, ವೇತನ, ಭತ್ಯೆ ಹೆಚ್ಚಳ ಮುಂತಾದ ವಿಷಯಗಳ ಬಗ್ಗೆ ವಿಚಾರ ವಿನಿಮಯ ಮಾಡಿಕೊಂಡರು.
ವಲಯ ಅರಣ್ಯ ಅಧಿಕಾರಿಗಳ ಸಂಘ, ಉಪ ಅರಣ್ಯ ಅಧಿಕಾರಿಗಳ ಸಂಘ, ಅರಣ್ಯ ರಕ್ಷಕರ ಸಂಘ, ಕಾವಡಿ ಮತ್ತು ಮಾವುತರ ಸಂಘ, ಕರ್ಣಾಟಕ ರಾಜ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಸಂಘ ಮತ್ತು ಅರಣ್ಯ ಪ್ರೆರಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಿದ್ದರು.